Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:4 - ಪರಿಶುದ್ದ ಬೈಬಲ್‌

4 ಆದರೆ ಫೆಸ್ತನು, “ಇಲ್ಲ! ಪೌಲನನ್ನು ಸೆಜರೇಯದಲ್ಲೇ ಇರಿಸಲಾಗುವುದು. ನಾನೇ ಅಲ್ಲಿಗೆ ಬೇಗ ಹೋಗಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಫೆಸ್ತನು ಅವರಿಗೆ; ಪೌಲನು ಕೈಸರೈಯದಲ್ಲಿ ಸೆರೆಮನೆಯೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟು ಹೋಗಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಫೆಸ್ತನು ಅವರಿಗೆ, “ಪೌಲನು ಸೆಜರೇಯದಲ್ಲಿ ಕೈದಿಯಾಗಿದ್ದಾನೆ. ನಾನು ಬೇಗನೆ ಅಲ್ಲಿಗೆ ಹಿಂದಿರುಗಲಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಫೆಸ್ತನು ಅವರಿಗೆ - ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ, ನಾನೇ ಬೇಗ ಅಲ್ಲಿಗೆ ಹೊರಟುಹೋಗಬೇಕೆಂದಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ಫೆಸ್ತನು ಉತ್ತರವಾಗಿ, “ಪೌಲನು ಕೈಸರೈಯದಲ್ಲಿ ಕಾವಲೊಳಗಿದ್ದಾನೆ. ನಾನೇ ಅಲ್ಲಿಗೆ ಬೇಗ ಹೊಗಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ಫೆಸ್ತಾನ್ ಅಶೆ ಜವಾಬ್ ದಿಲ್ಲ್ಯಾನ್, ನಾ! ಪಾವ್ಲುಕ್ ಸೆಜರೆಯಾತುಚ್ ಥವ್ಚೆ, ಮಿಯಾಚ್ ಥೈ ಲಗ್ಗುನಾ ಜಾತಲೊ ಹಾಯ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:4
8 ತಿಳಿವುಗಳ ಹೋಲಿಕೆ  

ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.


ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು.


ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


ಫೆಸ್ತನು ರಾಜ್ಯಪಾಲನಾಗಿ ಮೂರು ದಿನಗಳಾದ ಮೇಲೆ ಸೆಜರೇಯದಿಂದ ಜೆರುಸಲೇಮಿಗೆ ಹೋದನು.


ನಿಮ್ಮ ನಾಯಕರಲ್ಲಿ ಕೆಲವರು ನನ್ನೊಂದಿಗೆ ಬರಲಿ. ಅವನು ನಿಜವಾಗಿಯೂ ಅಪರಾಧ ಮಾಡಿದ್ದರೆ ಅವನ ಮೇಲೆ ಸೆಜರೇಯದಲ್ಲೇ ಅವರು ದೋಷಾರೋಪಣೆ ಮಾಡಲಿ” ಎಂದು ಉತ್ತರಕೊಟ್ಟನು.


ಫೆಸ್ತನು ಇನ್ನೂ ಎಂಟು-ಹತ್ತು ದಿನಗಳವರೆಗೆ ಜೆರುಸಲೇಮಿನಲ್ಲಿ ಇದ್ದನು. ಬಳಿಕ ಅವನು ಸೆಜರೇಯಕ್ಕೆ ಹಿಂತಿರುಗಿದನು. ಮರುದಿನ ಅವನು ಸೈನಿಕರಿಗೆ ಪೌಲನನ್ನು ತನ್ನ ಮುಂದೆ ಕರೆದುಕೊಂಡು ಬರಬೇಕೆಂದು ತಿಳಿಸಿದನು. ಫೆಸ್ತನು ನ್ಯಾಯಾಸ್ಥಾನದ ಮೇಲೆ ಕುಳಿತುಕೊಂಡಿದ್ದನು.


ಕೆಲವು ದಿನಗಳಾದ ಮೇಲೆ ರಾಜ ಅಗ್ರಿಪ್ಪನು ಮತ್ತು ಬೆರ್ನಿಕೆ ರಾಣಿ ಫೆಸ್ತನನ್ನು ವಂದಿಸಲು ಸೆಜರೇಯಕ್ಕೆ ಬಂದರು.


ಆದರೆ ನಾನು, ‘ದೋಷಾರೋಪಣೆ ಹೊರಿಸಲ್ಪಟ್ಟಿರುವ ವ್ಯಕ್ತಿಯನ್ನು ತೀರ್ಪಿಗಾಗಿ ಬೇರೆಯವರಿಗೆ ಒಪ್ಪಿಸುವುದು ರೋಮ್‌ನವರ ಪದ್ಧತಿಯಲ್ಲ. ಮೊದಲನೆಯದಾಗಿ, ಅವನು ತನ್ನ ಮೇಲೆ ದೋಷಾರೋಪಣೆ ಮಾಡುತ್ತಿರವವರನ್ನು ಮುಖಾಮುಖಿಯಾಗಿ ಸಂಧಿಸಿ ಅವರ ದೋಷಾರೋಪಣೆಗಳಿಗೆ ವಿರೋಧವಾಗಿ ತನ್ನನ್ನು ಪ್ರತಿಪಾದಿಸಿಕೊಳ್ಳಲು ಅವಕಾಶ ಕೊಡಲೇಬೇಕು’ ಎಂದು ಹೇಳಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು