ಅಪೊಸ್ತಲರ ಕೃತ್ಯಗಳು 25:7 - ಪರಿಶುದ್ದ ಬೈಬಲ್7 ಪೌಲನು ನ್ಯಾಯಾಲಯದೊಳಗೆ ಬಂದನು. ಜೆರುಸಲೇಮಿನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತುಕೊಂಡು ಅವನ ಮೇಲೆ ಅನೇಕ ದೋಷಾರೋಪಗಳನ್ನು ಮಾಡಿದರು. ಆದರೆ ಅವುಗಳಲ್ಲಿ ಯಾವುದಕ್ಕೂ ಆಧಾರವಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವನು ಬಂದ ಮೇಲೆ ಯೆರೂಸಲೇಮಿನಿಂದ ಬಂದಿದ್ದ ಯೆಹೂದ್ಯರು, ಅವನ ಸುತ್ತಲು ನಿಂತುಕೊಂಡು ತಾವು ಸಾಬೀತುಪಡಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನು ಬಂದ ಮೇಲೆ ಯೆರೂಸಲೇವಿುನಿಂದ ಬಂದಿದ್ದ ಯೆಹೂದ್ಯರು ಅವನ ಸುತ್ತಲು ನಿಂತುಕೊಂಡು ತಾವು ಸ್ಥಾಪಿಸಲಾರದ ಅನೇಕ ದೊಡ್ಡ ದೊಡ್ಡ ತಪ್ಪುಗಳನ್ನು ಹೊರಿಸುತ್ತಿರಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪೌಲನು ಅಲ್ಲಿಗೆ ಬಂದಾಗ, ಯೆರೂಸಲೇಮಿನಿಂದ ಬಂದ ಯೆಹೂದ್ಯರು ಅವನ ಸುತ್ತಲೂ ಎದ್ದು ನಿಂತು, ಅನೇಕ ತೀವ್ರ ಆಪಾದನೆಗಳನ್ನು ಅವನ ವಿರುದ್ಧ ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಗೆ ಸಾಧ್ಯವಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಪಾವ್ಲು ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಯೆಲೊ ಜೆರುಜಲೆಮಾತ್ನಾ ಜುದೆವಾಂಚಿ ಲೊಕಾ ತೆಚ್ಯಾ ಆಜುಭಾಜುಕ್ ಇಬೆ ರ್‍ಹಾವ್ನ್ ಲೈ ಚುಕ್ ಸಾಂಗುಲಾಗ್ಲೆ ತ್ಯಾತುರ್‍ಲೆ ಎಕ್ಬಿ ಖರೆ ನತ್ತೆ. ಅಧ್ಯಾಯವನ್ನು ನೋಡಿ |
ರಾಜನಾದ ಅರ್ತಷಸ್ತನೇ, ನಿಮಗಿಂತ ಮೊದಲು ಆಳಿದ ರಾಜರ ಬಗ್ಗೆ ಬರೆದ ವೃತ್ತಾಂತವನ್ನು ಓದಿರಿ ಎಂದು ನಿಮ್ಮನ್ನು ವಿನಂತಿಸುತ್ತೇವೆ. ಜೆರುಸಲೇಮ್ ಯಾವಾಗಲೂ ಇತರ ರಾಜರುಗಳಿಗೆ ಎದುರುಬೀಳುವುದನ್ನು ನೀವು ಅದರಲ್ಲಿ ಕಂಡುಕೊಳ್ಳುವಿರಿ. ಬೇರೆ ರಾಜರನ್ನು ಮತ್ತು ದೇಶಗಳವರನ್ನು ತುಂಬಾ ಕಷ್ಟಕ್ಕೆ ಒಳಪಡಿಸಿದ್ದು ಮಾತ್ರವಲ್ಲ, ಪೂರ್ವಕಾಲದಿಂದಲೂ ಈ ನಗರದಿಂದ ಎಷ್ಟೋ ದಂಗೆಗಳು ಎದ್ದಿವೆ. ಆ ಕಾರಣಕ್ಕಾಗಿಯೇ ಜೆರುಸಲೇಮ್ ನಾಶಮಾಡಲ್ಪಟ್ಟಿತ್ತು.