ಅಪೊಸ್ತಲರ ಕೃತ್ಯಗಳು 25:8 - ಪರಿಶುದ್ದ ಬೈಬಲ್8 ಪೌಲನು ಪ್ರತಿವಾದ ಮಾಡುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ ದೇವಾಲಯಕ್ಕೆ ವಿರುದ್ಧವಾಗಲಿ ಸೀಸರನಿಗೆ ವಿರುದ್ಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪೌಲನು; “ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ, ದೇವಾಲಯದ ವಿಷಯದಲ್ಲಾಗಲಿ, ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು” ಪ್ರತ್ಯುತ್ತರ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಪೌಲನು ತನ್ನ ಪರವಾಗಿ ತಾನೇ ವಾದಿಸುತ್ತಾ, “ನಾನು ಯೆಹೂದ್ಯರ ಧರ್ಮಶಾಸ್ತ್ರಕ್ಕೆ ವಿರುದ್ಧವಾಗಲಿ, ಮಹಾದೇವಾಲಯಕ್ಕೆ ವಿರುದ್ಧವಾಗಲಿ, ಅಥವಾ ಚಕ್ರವರ್ತಿಗೆ ವಿರುದ್ಧವಾಗಲಿ, ಏನನ್ನೂ ಮಾಡಿಲ್ಲ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪೌಲನು - ಯೆಹೂದ್ಯರ ಧರ್ಮಶಾಸ್ತ್ರದ ವಿಷಯದಲ್ಲಾಗಲಿ ದೇವಾಲಯದ ವಿಷಯದಲ್ಲಾಗಲಿ ಚಕ್ರವರ್ತಿಯ ವಿಷಯದಲ್ಲಾಗಲಿ ನಾನು ಯಾವ ತಪ್ಪನ್ನೂ ಮಾಡಲಿಲ್ಲವೆಂದು ಪ್ರತ್ಯುತ್ತರ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆಗ ಪೌಲನು ತನ್ನ ಪ್ರತಿವಾದವನ್ನು ಮುಂದಿಟ್ಟು: “ನಾನು ಯೆಹೂದ್ಯರ ನಿಯಮಕ್ಕೆ ವಿರೋಧವಾಗಲಿ, ದೇವಾಲಯಕ್ಕೆ ವಿರೋಧವಾಗಲಿ, ಕೈಸರನ ವಿರೋಧವಾಗಲಿ ಯಾವ ತಪ್ಪನ್ನೂ ಮಾಡಿಲ್ಲ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಪಾವ್ಲುನ್ ಪರ್ತುನ್ ವಾದ್ ಕರುನ್ “ಮಿಯಾ ಜುದೆವಾಂಚ್ಯಾ ಖಾಯ್ದ್ಯಾಕ್ನಿ ಹೊಂವ್ದಿ, ದೆವಾಚ್ಯಾ ಗುಡಿಕ್ ಹೊಂವ್ದಿ, ಅನಿ ಸಿಸರಾಕ್ ಹೊಂವ್ದಿ ವಿರೊದ್ ಹೊವ್ನ್ ಕಸ್ಲಿಬಿ ಚುಕ್ ಕರುಕ್ನಾ” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.
ಪೌಲನು, “ಈಗ ನಾನು ಸೀಸರನ ನ್ಯಾಯಾಸ್ಥಾನದ ಮುಂದೆ ನಿಂತಿದ್ದೇನೆ. ನನಗೆ ತೀರ್ಪಾಗಬೇಕಾದದ್ದು ಇಲ್ಲಿಯೇ! ನಾನು ಯೆಹೂದ್ಯರಿಗೆ ಯಾವ ಅಪರಾಧವನ್ನೂ ಮಾಡಿಲ್ಲ. ಇದು ಸತ್ಯವೆಂದು ನಿನಗೆ ಗೊತ್ತಿದೆ. ನಾನು ಅಪರಾಧಿಯಾಗಿದ್ದು ಧರ್ಮಶಾಸ್ತ್ರವು ನನಗೆ ಮರಣದಂಡನೆ ವಿಧಿಸಿದರೆ, ನಾನು ಆ ತೀರ್ಪನ್ನು ಒಪ್ಪಿಕೊಳ್ಳುತ್ತೇನೆ. ಆದರೆ ಇವರ ದೋಷಾರೋಪಣೆಗಳು ಸತ್ಯವಾಗಿಲ್ಲದಿದ್ದರೆ, ನನ್ನನ್ನು ಇವರ ಕೈಗೆ ಒಪ್ಪಿಸಲು ಯಾರಿಗೂ ಸಾಧ್ಯವಿಲ್ಲ! ನನ್ನ ವಿಷಯವನ್ನು ಸೀಸರನೇ ಪರಿಶೀಲಿಸಲಿ!” ಎಂದನು.