Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:9 - ಪರಿಶುದ್ದ ಬೈಬಲ್‌

9 ಆದರೆ ಫೆಸ್ತನು ಯೆಹೂದ್ಯರ ಮೆಚ್ಚಿಕೆ ಗಳಿಸಿಕೊಳ್ಳಬೇಕೆಂದಿದ್ದನು. ಆದ್ದರಿಂದ ಅವನು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಯಸುವೆಯಾ? ಈ ದೋಷಾರೋಪಣೆಗಳ ಕುರಿತು ನಾನು ಅಲ್ಲಿಯೇ ನಿನಗೆ ತೀರ್ಪು ಮಾಡಬೇಕೆಂದು ಅಪೇಕ್ಷಿಸುವಿಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಿಕೊಳ್ಳುವಸಲುವಾಗಿ ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಿ, ಅಲ್ಲಿ ನನ್ನ ಮುಂದೆ ಇವುಗಳ ವಿಷಯವಾಗಿ ವಿಚಾರಣೆಗೆ ಒಳಗಾಗಲು ಇಷ್ಟಪಡುತ್ತೀಯಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ, ಪೌಲನನ್ನು - ನೀನು ಯೆರೂಸಲೇವಿುಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವದಕ್ಕೆ ನಿನಗೆ ಇಷ್ಟವುಂಟೋ? ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಫೆಸ್ತನು ಯೆಹೂದ್ಯರ ಮೆಚ್ಚುಗೆಯನ್ನು ಗಳಿಸಲು ಬಯಸಿ ಪೌಲನಿಗೆ, “ನೀನು ಯೆರೂಸಲೇಮಿಗೆ ಹೋಗಿ, ಅಲ್ಲಿ ನನ್ನೆದುರಿನಲ್ಲಿ ಈ ದೂರುಗಳ ನ್ಯಾಯವಿಚಾರಣೆಗಾಗಿ ಒಪ್ಪಿಕೊಳ್ಳುವಿಯೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಫೆಸ್ತಾನ್ ಜುದೆವಾಂಚ್ಯಾಕ್ನಾ ಬರೊ ಮನ್ವುನ್ ಘೆವ್ಚೆ ಮನುನ್ ಹೊತ್ತೊ, ತಸೆ ಹೊವ್ನ್ ತೆನಿ ಪಾವ್ಲುಕ್, ತಿಯಾ ಜೆರುಜಲೆಮಾಕ್ ಜಾತೆಯ್ ಕಾಯ್, ಹೆನಿ ಸಾಂಗ್ತಲ್ಯಾ ಸಂಗ್ತಿಯಾಕ್ನಿ ಮಿಯಾ ತುಕಾ ಥೈಚ್ ಇಚ್ಯಾರ್ನಿ ಕರುಚೆ ಮನ್ತಲಿ ತುಜಿ ಇಚ್ಚ್ಯಾ ಕಾಯ್? ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:9
5 ತಿಳಿವುಗಳ ಹೋಲಿಕೆ  

ಆದರೆ ಎರಡು ವರ್ಷಗಳ ನಂತರ ಫೇಲಿಕ್ಸನ ಬದಲಾಗಿ ಪೊರ್ಸಿಯ ಫೆಸ್ತನು ರಾಜ್ಯಪಾಲನಾದನು. ಆದರೆ ಫೇಲಿಕ್ಸನು ಯೆಹೂದ್ಯರನ್ನು ಮೆಚ್ಚಿಸುವುದಕ್ಕಾಗಿ ಪೌಲನನ್ನು ಸೆರೆಮನೆಯಲ್ಲಿಯೇ ಬಿಟ್ಟುಹೋದನು.


ಈ ಸಂಗತಿಗಳ ಬಗ್ಗೆ ನನಗೆ ಹೆಚ್ಚಿಗೆ ತಿಳಿದಿರಲಿಲ್ಲ. ಆದ್ದರಿಂದ ನಾನು ಪ್ರಶ್ನೆಗಳನ್ನು ಕೇಳಲಿಲ್ಲ. ಆದರೆ ನಾನು ಪೌಲನಿಗೆ, ‘ನೀನು ಜೆರುಸಲೇಮಿಗೆ ಹೋಗಿ ಅಲ್ಲೇ ನ್ಯಾಯತೀರ್ಪು ಹೊಂದಲು ಬಯಸುವೆಯಾ?’ ಎಂದು ಕೇಳಿದೆನು.


ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.


ಪಿಲಾತನು ಜನರನ್ನು ಸಂತೋಷಪಡಿಸಲು ಬಯಸಿ ಅವರಿಗಾಗಿ ಬರಬ್ಬನನ್ನು ಬಿಡುಗಡೆ ಮಾಡಿದನು ಮತ್ತು ಕೊರಡೆಗಳಿಂದ ಹೊಡೆದು ಶಿಲುಬೆಗೇರಿಸುವುದಕ್ಕಾಗಿ ಯೇಸುವನ್ನು ಸೈನಿಕರಿಗೆ ಒಪ್ಪಿಸಿದನು.


ಅಲ್ಲದೆ ಪೌಲನನ್ನು ಜೆರುಸಲೇಮಿಗೆ ಮರಳಿ ಕಳುಹಿಸಿಕೊಡಬೇಕೆಂದು ಅವರು ಫೆಸ್ತನನ್ನು ಕೇಳಿಕೊಂಡರು. ಅವರು ಪೌಲನನ್ನು ಮಾರ್ಗದಲ್ಲೇ ಕೊಲ್ಲಬೇಕೆಂಬ ಯೋಜನೆ ಮಾಡಿಕೊಂಡಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು