ಅಪೊಸ್ತಲರ ಕೃತ್ಯಗಳು 26:11 - ಪರಿಶುದ್ದ ಬೈಬಲ್11 ಪ್ರತಿಯೊಂದು ಸಭಾಮಂದಿರದಲ್ಲಿಯೂ ನಾನು ಅವರನ್ನು ದಂಡಿಸಿದೆನು. ಯೇಸುವಿನ ವಿರುದ್ಧ ದೂಷಣೆಯ ಮಾತುಗಳನ್ನು ಅವರ ಬಾಯಿಂದ ಹೊರಡಿಸಲು ನಾನು ಪ್ರಯತ್ನಿಸಿದೆನು. ಆ ವಿಶ್ವಾಸಿಗಳ ಮೇಲೆ ಬಹುಕೋಪವುಳ್ಳವನಾಗಿದ್ದು ಅವರನ್ನು ಹುಡುಕಿಹುಡುಕಿ ಹಿಂಸಿಸುವುದಕ್ಕಾಗಿ ವಿದೇಶದ ಪಟ್ಟಣಗಳಿಗೂ ಹೋದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅನೇಕ ಬಾರಿ ನಾನು ಅವರನ್ನು ಪ್ರಾರ್ಥನಾಮಂದಿರಗಳಲ್ಲೆಲ್ಲಾ ಬಾಧೆಪಡಿಸಿದೆ. ಹೀಗೆ, ವಿಶ್ವಾಸಭ್ರಷ್ಟರಾಗುವಂತೆ ಬಲಾತ್ಕರಿಸಿದೆ. ನನ್ನ ಕೋಪೋದ್ರೇಕಕ್ಕೆ ಎಲ್ಲೆ ಇರಲಿಲ್ಲ. ಹೊರನಾಡಿನ ಊರುಗಳಿಗೂ ಅವರನ್ನು ಬೆನ್ನಟ್ಟಿಹೋಗಿ ಹಿಂಸೆಪಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅನೇಕ ಸಲ ಅವರನ್ನು ದಂಡಿಸಲು ನಾನು ಒಂದು ಸಭಾಮಂದಿರದಿಂದ ಇನ್ನೊಂದು ಸಭಾಮಂದಿರಕ್ಕೆ ಹೋಗಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆ. ಇದಲ್ಲದೆ ಅವರ ಮೇಲೆ ಬಹು ಕೋಪಗೊಂಡವನಾಗಿ ನಾನು ಅವರನ್ನು ಹಿಂಸಿಸಲು ವಿದೇಶಿ ಪಟ್ಟಣಗಳಿಗೂ ಹೋದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಹರ್ ಎಕ್ ಸಿನಾಗೊತ್ನಿ ಮಿಯಾ ತೆಂಕಾ ಶಿಕ್ಷಾ ದಿಲಾ ಜೆಜುಚ್ಯಾ ವರ್‍ತಿ ವಿರೊಧ್ ಹೊವ್ನ್ ತೆಂಚ್ಯಾ ತೊಂಡಾನಿ ಸಾಂಗುಕ್ ಮಿಯಾ ಕಸರತ್ ಕರ್‍ಲೊ ತ್ಯಾ ದೆವಾಚ್ಯಾ ಲೊಕಾಚ್ಯಾ ವರ್‍ತಿ ಲೈ ರಾಗ್ ಹೊವ್ನ್ ತೆಂಕಾ ಹುಡ್ಕುನ್ ತರಾಸ್ ದಿವ್ಕ್ ದುಸ್ರ್ಯಾ ದೆಶಾತ್ ಅನಿ ಶಾರಾಕ್ನಿ ಗೆಲ್ಲೊ. ಅಧ್ಯಾಯವನ್ನು ನೋಡಿ |
“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.