ಅಪೊಸ್ತಲರ ಕೃತ್ಯಗಳು 26:19 - ಪರಿಶುದ್ದ ಬೈಬಲ್19 ಪೌಲನು ಮಾತನ್ನು ಮುಂದುವರಿಸಿ ಹೀಗೆಂದನು: “ರಾಜನಾದ ಅಗ್ರಿಪ್ಪನೇ, ನಾನು ಪರಲೋಕದ ಈ ದರ್ಶನವನ್ನು ಕಂಡ ಮೇಲೆ ಅದಕ್ಕೆ ವಿಧೇಯನಾದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಇಂತಿರಲು, ಅಗ್ರಿಪ್ಪ ರಾಜರೇ, ನನಗೆ ಲಭಿಸಿದ ಈ ಸ್ವರ್ಗೀಯ ದರ್ಶನಕ್ಕೆ ಅವಿಧೇಯನಾಗಿ ನಡೆಯಲು ನನ್ನಿಂದಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ಆದ್ದರಿಂದ ಅಗ್ರಿಪ್ಪ ರಾಜರೇ, ಆ ಪರಲೋಕದ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಕಶ್ಯಾಕ್ ಮಟ್ಲ್ಯಾರ್, ಪಾವ್ಲು ಬೊಲುನ್ಗೆತ್ ರಾತಾನಾ ಅಶೆ ಸಾಂಗ್ಲ್ಯಾನ್, ಅಗ್ರಿಪ್ಪ್ ರಾಜಾ, ಮಾಕಾ ಸರ್‍ಗಾಚೆ ದರ್ಶನ್ ಗಾವ್ಲೆ, ತೆ ಬಗಲ್ಲ್ಯಾ ಮಾನಾ ತೆಕಾ ಅವ್ಮಾನ್ ಕರುಕ್ನಾ, ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.