Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:20 - ಪರಿಶುದ್ದ ಬೈಬಲ್‌

20 ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮೊದಲು ದಮಸ್ಕದವರಿಗೆ, ಆಮೇಲೆ ಯೆರೂಸಲೇವಿುನಲ್ಲಿಯೂ ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ - ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಅದ್ದಿ ಜರುಜಲೆಮಾತ್ ಅನಿ ಯುದಾಯಾತ್ ಮಿಯಾ ಲೊಕಾಕ್ನಿ ಸಾಂಗ್ಲೊ, ತುಮ್ಚ್ಯಾ ಪಾಪಾಚಿ ಪಶ್ಚಾತಾಪ್ ಪಡುನ್ ದೆವಾಚ್ಯಾ ಜಗ್ಗೊಳ್ ಪರ್ತಾ ಮನುನ್ ತೆಂಕಾ ಹೊತಲ್ಯಾ ಮಾನಾ ಯೊಗ್ಯ್ ಕಾಮಾಕ್ನಿ ಕರುನ್ ತೆಜಾ ವೈನಾ ದಾಕ್ವುಚೆ ಮನುನ್ ಸಾಂಗ್ಲೊ, ಅದ್ದಿ ಮಿಯಾ ದಮಸ್ಕಾ ಮನ್ತಲ್ಯಾ ಶಾರಾಕ್ ಮಾನಾ ಜೆರುಜಲೆಮಾಕ್ ಜುದೆಯಾಂಚ್ಯಾ ಹರ್ ಎಕ್ ಭಾಗಾಕ್ ಜಾವ್ನ್ ಥೈ ರ್‍ಹಾತಲ್ಯಾ ಲೊಕಾಕ್ನಿ ಸಂಗ್ತಿಯಾ ಕಳ್ವುಲೊ, ಅನಿ ಜುದೆವ್ ನಸಲ್ಲ್ಯಾ ಲೊಕಾಂಚ್ಯಾ ಜಗೊಳ್‍ಬಿ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:20
56 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿ. ಆಗ ಆತನು ನಿಮ್ಮ ಪಾಪಗಳನ್ನು ಕ್ಷಮಿಸುವನು.


ನಿಮ್ಮ ಮನಸ್ಸು ನಿಜವಾಗಿಯೂ ದೇವರ ಕಡೆಗೆ ತಿರುಗಿಕೊಂಡಿದೆ ಎಂಬುದನ್ನು ನೀವು ತಕ್ಕ ಕಾರ್ಯಗಳ ಮೂಲಕ ತೋರಿಸಿ.


ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.


ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀ ಎಂಬುದನ್ನು ನೆನಪು ಮಾಡಿಕೊ; ಮನಸ್ಸನ್ನು ಪರಿವರ್ತಿಸಿಕೊ. ನೀನು ಮೊದಲು ಮಾಡಿದ ಕಾರ್ಯಗಳನ್ನು ಮಾಡು. ನೀನು ಪರಿವರ್ತನೆಗೊಳ್ಳದಿದ್ದರೆ ನಾನು ನಿನ್ನಲ್ಲಿಗೆ ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಬಿಡುತ್ತೇನೆ.


ನೀವು ಹೋಗಿ, ‘ನನಗೆ ಯಜ್ಞ ಬೇಡ, ದಯೆ ಬೇಕು’ ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ನೀತಿವಂತರನ್ನು ಕರೆಯಲು ಬರಲಿಲ್ಲ, ಪಾಪಿಗಳನ್ನು ಕರೆಯಲು ಬಂದೆನು” ಎಂದು ಹೇಳಿದನು.


ಆದ್ದರಿಂದ ನೀನು ಸ್ವೀಕರಿಸಿಕೊಂಡ ಮತ್ತು ಕೇಳಿದ ಉಪದೇಶವನ್ನು ಮರೆಯದೆ ಅದಕ್ಕೆ ವಿಧೇಯನಾಗಿರು. ನಿನ್ನ ಹೃದಯವನ್ನೂ ಜೀವಿತವನ್ನೂ ಪರಿವರ್ತಿಸಿಕೊ! ಎಚ್ಚರಗೊಳ್ಳು! ಇಲ್ಲವಾದರೆ, ನಾನು ಕಳ್ಳನಂತೆ ನಿನ್ನ ಬಳಿಗೆ ಬಂದು ಆಶ್ಚರ್ಯಗೊಳಿಸುತ್ತೇನೆ. ನಾನು ಯಾವಾಗ ಬರುತ್ತೇನೆ ಎಂಬುದು ನಿನಗೆ ಗೊತ್ತಿರುವುದಿಲ್ಲ.


ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.


ದೇವರ ಇಷ್ಟಾನುಸಾರವಾದ ದುಃಖವು ಹೃದಯವನ್ನೂ ಜೀವಿತವನ್ನೂ ಪರಿವರ್ತಿಸುತ್ತದೆ. ಈ ಪರಿವರ್ತನೆಯು ರಕ್ಷಣೆಗೆ ನಡೆಸುತ್ತದೆ. ಈ ಪರಿವರ್ತನೆಯ ವಿಷಯದಲ್ಲಿ ನಾವು ವ್ಯಸನಪಡಬೇಕಾಗಿಲ್ಲ. ಆದರೆ, ಲೋಕವು ಹೊಂದಿರುವ ದುಃಖವು ಮರಣವನ್ನು ಬರಮಾಡುತ್ತದೆ.


ನಾವು ನಿಮ್ಮೊಡನೆ ಇದ್ದಾಗ ನೀವು ನಮ್ಮ ಬೋಧನೆಯನ್ನು ಹೃತ್ಪೂರ್ವಕವಾಗಿ ಸ್ವೀಕರಿಸಿಕೊಂಡದ್ದರ ಕುರಿತಾಗಿಯೂ ವಿಗ್ರಹಾರಾಧನೆಯನ್ನು ನಿಲ್ಲಿಸಿ ಜೀವವುಳ್ಳ ಸತ್ಯದೇವರನ್ನು ಆರಾಧಿಸತೊಡಗಿದ್ದರ ಕುರಿತಾಗಿಯೂ ಅಲ್ಲಿನ ಜನರೆಲ್ಲರೂ ತಿಳಿಸುತ್ತಾರೆ.


ಆದರೆ ಒಬ್ಬ ವ್ಯಕ್ತಿಯು ಮಾರ್ಪಾಟಾಗಿ ಪ್ರಭುವನ್ನು ಅನುಸರಿಸುವಾಗ ಆ ಮುಸುಕು ತೆಗೆಯಲ್ಪಡುವುದು.


ದೇವರು ನಿಮ್ಮ ವಿಷಯದಲ್ಲಿ ಬಹು ಕನಿಕರ ಉಳ್ಳವನಾಗಿದ್ದಾನೆ; ತಾಳ್ಮೆ ಉಳ್ಳವನಾಗಿದ್ದಾನೆ. ನೀವು ಮಾರ್ಪಾಟಾಗಬೇಕೆಂದು ದೇವರು ನಿಮಗಾಗಿ ಕಾದುಕೊಂಡಿದ್ದಾನೆ. ಆದರೆ ನೀವು ಆತನ ಕರುಣೆಯ ಬಗ್ಗೆ ಆಲೋಚಿಸುವುದೇ ಇಲ್ಲ. ನೀವು ನಿಮ್ಮ ಹೃದಯಗಳನ್ನೂ ಜೀವಿತಗಳನ್ನೂ ಮಾರ್ಪಡಿಸಿಕೊಳ್ಳಬೇಕಾಗುತ್ತದೆಯೆಂದು ದೇವರ ಕನಿಕರವನ್ನು ಅರ್ಥಮಾಡಿಕೊಳ್ಳದೆ ಇದ್ದೀರಿ.


ನಿನ್ನ ಸ್ವಂತ ಜನರಿಂದಲೂ ಯೆಹೂದ್ಯರಲ್ಲದ ಜನರಿಂದಲೂ ನಿನಗೆ ಕೇಡಾಗದಂತೆ ಕಾಪಾಡುವೆನು. ನಾನು ನಿನ್ನನ್ನು ಅವರ ಬಳಿಗೆ ಕಳುಹಿಸುತ್ತಿದ್ದೇನೆ.


ನಿಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ದೇವರ ಕಡೆಗೆ ತಿರುಗಿಕೊಳ್ಳಬೇಕೆಂದು ನಾನು ಎಲ್ಲಾ ಜನಾಂಗಗಳವರಿಗೆ ಅಂದರೆ ಯೆಹೂದ್ಯರಿಗೂ ಮತ್ತು ಗ್ರೀಕರಿಗೂ ತಿಳಿಸಿದೆನು. ನಮ್ಮ ಪ್ರಭುವಾದ ಯೇಸುವಿನಲ್ಲಿ ನಂಬಿಕೆ ಇಡಬೇಕೆಂದು ನಾನು ಅವರೆಲ್ಲರಿಗೂ ತಿಳಿಸಿದೆನು.


ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.


“ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.


ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು.


ಲುದ್ದದಲ್ಲಿ ಮತ್ತು ಸಾರೋನಿನ ಬಯಲಿನಲ್ಲಿ ವಾಸವಾಗಿದ್ದ ಜನರೆಲ್ಲರು ಅವನನ್ನು ಕಂಡು ಪ್ರಭು ಯೇಸುವಿನಲ್ಲಿ ನಂಬಿಕೆ ಇಟ್ಟರು.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ಅದೇರೀತಿ ಒಬ್ಬ ಪಾಪಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವಾಗ ದೇವದೂತರ ಮುಂದೆ ಸಂತೋಷವಾಗುವುದು.”


ಅದೇ ರೀತಿಯಲ್ಲಿ, ಒಬ್ಬ ಪಾಪಿ ತನ್ನ ಹೃದಯವನ್ನು ಪರಿವರ್ತಿಸಿಕೊಂಡಾಗ ಸ್ವರ್ಗದಲ್ಲಿ ಬಹಳ ಸಂತೋಷವಾಗುತ್ತದೆ ಎಂದು ನಾನು ನಿಮಗೆ ಹೇಳುತ್ತೇನೆ. ತಮ್ಮ ಹೃದಯಗಳನ್ನು ಪರಿವರ್ತಿಸಲು ಅವಶ್ಯವಿಲ್ಲದ ತೊಂಭತ್ತೊಂಭತ್ತು ಒಳ್ಳೆಯ ಜನರಿಗಿಂತ ಆ ಒಬ್ಬ ಪಾಪಿಯ ವಿಷಯದಲ್ಲಿ ಹೆಚ್ಚು ಸಂತೋಷವಾಗುತ್ತದೆ.


ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ ಎಂದು ನಾನು ನಿಮಗೆ ಹೇಳುತ್ತೇನೆ!” ಎಂದು ಉತ್ತರಿಸಿದನು.


ಇಲ್ಲ! ಅವರು ಅಂತಹ ಪಾಪಿಗಳಾಗಿರಲಿಲ್ಲ! ಆದರೆ ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ಅವರಂತೆಯೇ ನಾಶವಾಗುವಿರಿ!


“ಅನೇಕ ಯೆಹೂದ್ಯರು ತಮ್ಮ ದೇವರಾದ ಪ್ರಭುವಿನ ಕಡೆಗೆ ತಿರುಗಿಕೊಳ್ಳಲು ಅವನು ಸಹಾಯ ಮಾಡುವನು.


ಶಿಷ್ಯರು ಅಲ್ಲಿಂದ ಹೊರಟು, ಇತರ ಸ್ಥಳಗಳಿಗೆ ಹೋಗಿ ಜನರಿಗೆ, “ನಿಮ್ಮಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಉಪದೇಶಿಸಿದರು.


ಅಂದಿನಿಂದ ಯೇಸು ಬೋಧಿಸುವುದಕ್ಕೆ ಪ್ರಾರಂಭಿಸಿದನು. “ಪರಲೋಕರಾಜ್ಯವು ಬೇಗನೆ ಬರಲಿದೆ. ಆದ್ದರಿಂದ ನೀವು ನಿಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಮಾರ್ಪಡಿಸಿಕೊಳ್ಳಿರಿ” ಎಂದು ಯೇಸು ಬೋಧಿಸಿದನು.


“ಪರಲೋಕರಾಜ್ಯವು ಸಮೀಪಿಸಿತು. ನೀವು ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ” ಎಂದು ಅವನು ಬೋಧಿಸಿದನು.


ನೀನು ಹೇಳಬೇಕಾದ ವಿಷಯಗಳ ಕುರಿತು ನೀನು ಆಲೋಚಿಸು ಮತ್ತು ಯೆಹೋವನ ಬಳಿಗೆ ಹಿಂದಿರುಗಿ ಬಾ ಮತ್ತು ಆತನಿಗೆ ಹೀಗೆ ಹೇಳು: “ನಮ್ಮ ಪಾಪಗಳನ್ನು ನಮ್ಮಿಂದ ತೆಗೆ. ನಾವು ಮಾಡುವ ಒಳ್ಳೆಯ ಕಾರ್ಯಗಳನ್ನು ಸ್ವೀಕರಿಸು. ಆಗ ನಮ್ಮ ತುಟಿಗಳಿಂದ ನಿನಗೆ ಸ್ತೋತ್ರವೆಂಬ ಕಾಣಿಕೆಯನ್ನು ಸಮರ್ಪಿಸುವೆವು.


ಆದ್ದರಿಂದ ನಿನ್ನ ಯೆಹೋವನ ಬಳಿಗೆ ಹಿಂದಿರುಗಿ ಬಾ. ಆತನಿಗೆ ವಿಧೇಯನಾಗಿರು. ಸರಿಯಾಗಿರುವದನ್ನೇ ಮಾಡು. ಯಾವಾಗಲೂ ನಿನ್ನ ದೇವರ ಮೇಲೆ ಭರವಸವಿಡು.


ಜನರು ತಮಗಾದ ಹುಣ್ಣುಗಳಿಂದ ಮತ್ತು ನೋವಿನಿಂದ ಪರಲೋಕದ ದೇವರನ್ನು ದೂಷಿಸಿದರು. ಆದರೆ ಜನರು ತಾವು ಮಾಡುವ ಕೆಟ್ಟಕಾರ್ಯಗಳನ್ನು ತೊರೆದುಬಿಟ್ಟು ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಳ್ಳಲು ಒಪ್ಪಲಿಲ್ಲ.


ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ.


ನಾವು ಏನು ಮಾಡಿದ್ದೇವೆ ಎಂಬುದನ್ನು ಪರಿಶೀಲಿಸಿ ನೋಡೋಣ. ಬಳಿಕ ಯೆಹೋವನಿಗೆ ಅಭಿಮುಖರಾಗೋಣ.


ಕೆಟ್ಟಜನರು ಕೆಟ್ಟತನದಲ್ಲಿ ಜೀವಿಸುವದನ್ನು ನಿಲ್ಲಿಸಲಿ. ಅವರು ಕೆಟ್ಟ ಆಲೋಚನೆಗಳನ್ನು ಮಾಡದಿರಲಿ. ಅವರು ಯೆಹೋವನ ಬಳಿಗೆ ಹಿಂತಿರುಗಲಿ. ಆಗ ಯೆಹೋವನು ಅವರನ್ನು ಆದರಿಸುವನು. ದೇವರಾದ ಯೆಹೋವನು ಕ್ಷಮಿಸುವುದರಿಂದ ಅವರು ಆತನ ಬಳಿಗೆ ಬರಲಿ.


ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.


“ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.


ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.


ಪೌಲನು ಮಾತನ್ನು ಮುಂದುವರಿಸಿ ಹೀಗೆಂದನು: “ರಾಜನಾದ ಅಗ್ರಿಪ್ಪನೇ, ನಾನು ಪರಲೋಕದ ಈ ದರ್ಶನವನ್ನು ಕಂಡ ಮೇಲೆ ಅದಕ್ಕೆ ವಿಧೇಯನಾದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು