Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:23 - ಪರಿಶುದ್ದ ಬೈಬಲ್‌

23 ಕ್ರಿಸ್ತನು ಬಾಧೆಪಟ್ಟು ಸತ್ತು, ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದುಬಂದು, ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಬೆಳಕನ್ನು ತರುತ್ತಾನೆಂದು ಮೋಶೆ ಮತ್ತು ಪ್ರವಾದಿಗಳು ಹೇಳಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆ ಸಂಗತಿಗಳು ಏನೆಂದರೆ; ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ, ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದೇನೆಂದರೆ, ಲೋಕೋದ್ಧಾರಕನು ಯಾತನೆಯನ್ನು ಅನುಭವಿಸಬೇಕು; ಸತ್ತು ಪುನರುತ್ಥಾನವಾದವರಲ್ಲಿ ಮೊತ್ತಮೊದಲಿಗನಾಗಿ ಯೆಹೂದ್ಯರಿಗೂ ಅನ್ಯಧರ್ಮೀಯರಿಗೂ ಪರಂಜ್ಯೋತಿಯನ್ನು ಪ್ರಕಟಿಸಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆ ಸಂಗತಿಗಳು ಏನಂದರೆ - ಕ್ರಿಸ್ತನು ಬಾಧೆಪಟ್ಟು ಸಾಯಬೇಕಾದವನು ಮತ್ತು ಆತನು ಸತ್ತವರೊಳಗಿಂದ ಮೊದಲನೆಯವನಾಗಿ ಎದ್ದು ಯೆಹೂದ್ಯರಿಗೂ ಅನ್ಯಜನರಿಗೂ ಬೆಳಕನ್ನು ಪ್ರಸಿದ್ಧಿಪಡಿಸುವವನಾಗಿರುವನು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕ್ರಿಸ್ತ ಯೇಸು ಶ್ರಮೆಹೊಂದಿ, ಸತ್ತವರೊಳಗಿಂದ ಜೀವಂತರಾಗಿ ಮೊದಲು ಎದ್ದು ತಮ್ಮ ಜನರಿಗೂ ಯೆಹೂದ್ಯರಲ್ಲದವರಿಗೂ ಬೆಳಕಿನ ಸಂದೇಶವನ್ನು ತರುವರು ಎಂದು ಪ್ರವಾದಿಗಳು ಮತ್ತು ಮೋಶೆಯು ಹೇಳಿದ್ದಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಕ್ರಿಸ್ತ್ ಮರುನ್ ಮರ್‍ನಾತ್ನಾ ಅದ್ದಿಚೊ ಹೊವ್ನ್ ಉಟುನ್ ಯೆವ್ನ್, ಜುದೆವಾಕ್ನಿ ಜುದೆವ್ ನ್ಹಯ್ ಹೊತ್ತ್ಯಾಕ್ನಿ ಉಜ್ವೊಡ್ ಹಾನ್ತಾ ಮನುನ್ ಮೊಯ್ಜೆನ್ ಅನಿ ಪ್ರವಾದಿಯಾನಿ ಸಾಂಗ್ಲಾತ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:23
29 ತಿಳಿವುಗಳ ಹೋಲಿಕೆ  

ಕ್ರಿಸ್ತನು ತನ್ನ ಮಹಿಮೆಯನ್ನು ಪ್ರವೇಶಿಸುವ ಮೊದಲು ಇಂಥ ಶ್ರಮೆಗಳನ್ನು ಅನುಭವಿಸಬೇಕು ಎಂದು ಪ್ರವಾದಿಗಳು ಹೇಳಿದ್ದಾರೆ” ಅಂದನು.


ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಲಭಿಸಲಿ. ಯೇಸು ನಂಬಿಗಸ್ತ ಸಾಕ್ಷಿಯಾಗಿದ್ದಾನೆ. ಸತ್ತವರೊಳಗಿಂದ ಮೇಲೆದ್ದು ಬಂದವರಲ್ಲಿ ಆತನೇ ಮೊದಲಿಗನಾಗಿದ್ದಾನೆ. ಆತನು ಲೋಕದ ರಾಜರುಗಳಿಗೆ ಅಧಿಪತಿಯಾಗಿದ್ದಾನೆ. ಯೇಸು ನಮ್ಮನ್ನು ಪ್ರೀತಿಸುತ್ತಾನೆ. ಆತನು ತನ್ನ ರಕ್ತದಿಂದ (ಮರಣ) ನಮ್ಮ ಪಾಪಗಳನ್ನು ನಿವಾರಿಸಿ ಬಿಡುಗಡೆಗೊಳಿಸಿದನು;


ಕ್ರಿಸ್ತನು ದೇಹಕ್ಕೆ (ಸಭೆಯ) ಶಿರಸ್ಸಾಗಿದ್ದಾನೆ. ಪ್ರತಿಯೊಂದೂ ಆತನಿಂದಲೇ ಬರುತ್ತದೆ. ಮರಣದಿಂದ ಪ್ರಥಮವಾಗಿ ಎದ್ದುಬಂದವನು ಆತನೇ. ಆದ್ದರಿಂದ ಎಲ್ಲಾದರಲ್ಲಿಯೂ ಯೇಸುವೇ ಅತ್ಯಂತ ಪ್ರಾಮುಖ್ಯನಾಗಿದ್ದಾನೆ.


ಸಮಸ್ತವನ್ನು ಸೃಷ್ಟಿಸಿದಾತನು ದೇವರೇ. ಸಮಸ್ತವು ಆತನ ಮಹಿಮೆಗಾಗಿಯೇ ಸೃಷ್ಟಿಯಾಯಿತು. ದೇವರು ತನ್ನವರೇ ಆದ ಅನೇಕ ಜನರನ್ನು ಹೊಂದಿಕೊಂಡು ಅವರೊಂದಿಗೆ ತನ್ನ ಮಹಿಮೆಯನ್ನು ಹಂಚಿಕೊಳ್ಳಲು ಬಯಸಿದನು. ಆದ್ದರಿಂದ ಆತನು ಅವರನ್ನು ರಕ್ಷಣೆಗೆ ನಡೆಸಲು ಪರಿಪೂರ್ಣನಾದ ಒಬ್ಬಾತನನ್ನು ನಿರ್ಮಿಸಿದನು. ಆತನೇ ಯೇಸು. ದೇವರು ಆತನನ್ನು ಬಾಧೆಗಳ ಮೂಲಕವೇ ಪರಿಪೂರ್ಣನಾದ ರಕ್ಷಕನನ್ನಾಗಿ ಮಾಡಿದನು.


ನಾನು ದಾವೀದನ ಸಂತತಿಯವರನ್ನೂ ಜೆರುಸಲೇಮಿನಲ್ಲಿ ವಾಸಿಸುವವರನ್ನೂ ದಯೆಕರುಣೆಗಳ ಆತ್ಮದಿಂದ ತುಂಬಿಸುವೆನು. ಅವರು ತಾವು ಈಟಿಯಿಂದ ತಿವಿದ ನನ್ನನ್ನು ದೃಷ್ಟಿಸಿ ನೋಡುವರು; ತುಂಬಾ ದುಃಖಿಸುವರು. ತಮಗಿದ್ದ ಒಬ್ಬನೇ ಮಗನನ್ನು ಕಳಕೊಂಡವರಂತೆ ರೋಧಿಸುವರು.


ನಾನು ಸ್ವೀಕರಿಸಿಕೊಂಡ ಸಂದೇಶವನ್ನು ನಾನು ನಿಮಗೆ ತಿಳಿಸಿದೆನು. ಆ ಸಂಗತಿಗಳು ಬಹಳ ಮುಖ್ಯವಾದುವುಗಳಾಗಿವೆ. ಪವಿತ್ರ ಗ್ರಂಥವು ಹೇಳುವಂತೆ, ಕ್ರಿಸ್ತನು ನಮ್ಮ ಪಾಪಗಳಿಗೋಸ್ಕರವಾಗಿ ಸತ್ತು


ಆತನು ಯೆಹೂದ್ಯರಲ್ಲದ ಜನರಿಗೆ ನಿನ್ನ ಮಾರ್ಗವನ್ನು ತೋರಿಸುವ ಬೆಳಕಾಗಿದ್ದಾನೆ. ಆತನಿಂದ ನಿನ್ನ ಜನರಾದ ಇಸ್ರೇಲರಿಗೆ ಕೀರ್ತಿಯಾಗುವುದು.”


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ: “ಖಡ್ಗವೇ, ಕುರುಬನನ್ನು ಹೊಡೆ. ನನ್ನ ಸ್ನೇಹಿತನಿಗೆ ಹೊಡೆ. ಕುರುಬನನ್ನು ಹೊಡೆ. ಆಗ ಕುರಿಗಳು ಚದರಿಹೋಗುವವು. ಮತ್ತು ನಾನು ಆ ಚಿಕ್ಕವುಗಳನ್ನು ಶಿಕ್ಷಿಸುವೆನು.


ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.


ನನ್ನ ಪ್ರಾಣವನ್ನು ಯಾರೂ ನನ್ನಿಂದ ಕಸಿದುಕೊಳ್ಳಲಾರರು; ನಾನೇ ಅದನ್ನು ಇಚ್ಛಾಪೂರ್ವಕವಾಗಿ ಕೊಡುತ್ತೇನೆ. ನನ್ನ ಪ್ರಾಣವನ್ನು ಕೊಡುವುದಕ್ಕೂ ಅದನ್ನು ಮತ್ತೆ ಪಡೆದುಕೊಳ್ಳುವುದಕ್ಕೂ ನನಗೆ ಹಕ್ಕಿದೆ. ಹೀಗೆ ಮಾಡಬೇಕೆಂದು ತಂದೆಯೇ ನನಗೆ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು.


ನೀನು ಅವರಿಗೆ ಸತ್ಯವನ್ನು ತಿಳಿಸಿ ಅವರನ್ನು ಕತ್ತಲೆಯಿಂದ ಬೆಳಕಿಗೆ ಬರುವಂತೆಯೂ ಸೈತಾನನ ಅಧಿಕಾರಕ್ಕೆ ವಿಮುಖರಾಗಿ ದೇವರ ಕಡೆಗೆ ತಿರುಗಿಕೊಳ್ಳುವಂತೆಯೂ ಮಾಡಬೇಕು. ಆಗ ಅವರ ಪಾಪಗಳು ಕ್ಷಮಿಸಲ್ಪಡುತ್ತವೆ. ನನ್ನಲ್ಲಿ ನಂಬಿಕೆ ಇಡುವುದರ ಮೂಲಕ ಪವಿತ್ರರಾದ ಜನರೊಂದಿಗೆ ಅವರು ಪಾಲು ಹೊಂದುವರು’ ಎಂದನು.”


ಸತ್ತವರನ್ನು ದೇವರು ಜೀವಂತವಾಗಿ ಎಬ್ಬಿಸುತ್ತಾನೆ ಎಂಬುದು ನಂಬತಕ್ಕದ್ದಲ್ಲವೆಂದು ನೀವು ಭಾವಿಸಿಕೊಂಡಿರುವುದೇಕೆ?


ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಸಮಾಧಿಗೆ ಸೇರಿ ಕೊಳೆಯುವುದಿಲ್ಲ ಎಂಬ ವಿಷಯದಲ್ಲಿ ದೇವರು ಇಂತೆಂದಿದ್ದಾನೆ: ‘ನಾನು ದಾವೀದನಿಗೆ ಮಾಡಿದ ಸತ್ಯವೂ ಪವಿತ್ರವೂ ಆದ ವಾಗ್ದಾನಗಳನ್ನು ನಿನಗೆ ಕೊಡುತ್ತೇನೆ.’


ಹೀಗಾಗುತ್ತದೆ ಎಂದು ದೇವರು ಮೊದಲೇ ತಿಳಿಸಿದ್ದನು. ಕ್ರಿಸ್ತನು ಶ್ರಮೆ ಅನುಭವಿಸಿ ಸಾಯುವನೆಂದು ದೇವರು ತನ್ನ ಪ್ರವಾದಿಗಳ ಮೂಲಕ ಮೊದಲೇ ತಿಳಿಸಿದ್ದನ್ನು ಹೀಗೆ ನೆರವೇರಿಸಿದ್ದಾನೆ.


ಯೇಸು ಆಕೆಗೆ, “ನಾನೇ ಪುನರುತ್ಥಾನ. ನಾನೇ ಜೀವ. ನನ್ನನ್ನು ನಂಬುವವನು ತಾನು ಸತ್ತನಂತರವೂ ಮತ್ತೆ ಜೀವವನ್ನು ಹೊಂದುವನು.


ಬಳಿಕ ಯೇಸು ಅವರಿಗೆ, “ಕ್ರಿಸ್ತನು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಸತ್ತವರೊಳಗಿಂದ ಎದ್ದುಬರುವನು ಎಂದು ಬರೆಯಲ್ಪಟ್ಟಿದೆ.


ಯೇಸು ಪುನರುತ್ಥಾನ ಹೊಂದಿದ ಬಳಿಕ, ಅವರು ಪವಿತ್ರ ನಗರವಾದ ಜೆರುಸಲೇಮಿಗೆ ಹೋದರು. ಜನರು ಅವರನ್ನು ಕಣ್ಣಾರೆ ಕಂಡರು.


“ಯೆಹೋವನೆಂಬ ನಾನು ನ್ಯಾಯವನ್ನು ಸ್ಥಾಪಿಸಲು ನಿನ್ನನ್ನು ಕರೆದೆನು. ನಾನು ನಿನ್ನ ಕೈಗಳನ್ನು ಹಿಡಿದು ಸಂರಕ್ಷಿಸುವೆನು. ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆ ನನ್ನಲ್ಲಿದೆಯೆಂಬುದಕ್ಕೆ ನೀನು ಗುರುತಾಗಿರುವೆ. ಎಲ್ಲಾ ಜನರಿಗೆ ನೀನು ಹೊಳೆಯುವ ಪ್ರಕಾಶವಾಗಿರುವೆ.


ಯೆಹೋವನು ನನಗೆ ಹೇಳಿದ್ದೇನೆಂದರೆ: “ನನ್ನ ಸೇವಕನಾದ ಯಾಕೋಬನ ಕುಲಗಳನ್ನು ಮೇಲೆತ್ತಿ ಇಸ್ರೇಲಿನ ಅಳಿದುಳಿದವರನ್ನು ಪುನಃಸ್ಥಾಪಿಸುವೆ. ಆದರೆ ನಿನಗೆ ಇನ್ನೊಂದು ಕೆಲಸವಿದೆ. ಅದು ಇದಕ್ಕಿಂತಲೂ ಮಹತ್ತಾದದ್ದು. ನಾನು ನಿನ್ನನ್ನು ಎಲ್ಲಾ ಜನಾಂಗಗಳಿಗೆ ಬೆಳಕನ್ನಾಗಿ ಮಾಡುವೆನು. ಲೋಕದ ಎಲ್ಲಾ ಜನರನ್ನು ರಕ್ಷಿಸಲು ನೀನು ನನ್ನ ಮಾರ್ಗವಾಗುವೆ.”


ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.


“ಸಮುವೇಲನು ಮತ್ತು ಅವನ ನಂತರದ ಪ್ರವಾದಿಗಳು ಇಂದಿನ ಈ ಕಾಲದ ಬಗ್ಗೆ ಮಾತಾಡಿದರು.


ಈ ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು