ಅಪೊಸ್ತಲರ ಕೃತ್ಯಗಳು 26:29 - ಪರಿಶುದ್ದ ಬೈಬಲ್29 ಪೌಲನು, “ಸುಲಭವೋ ಕಷ್ಟವೋ ಅದು ನನಗೆ ಮುಖ್ಯವಲ್ಲ. ನೀನು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಪ್ರತಿಯೊಬ್ಬರೂ ರಕ್ಷಣೆಹೊಂದಿ ನನ್ನಂತೆಯೇ ಆಗಬೇಕೆಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಪೌಲನು ಪ್ರತ್ಯುತ್ತರವಾಗಿ, “ಅಲ್ಪಕಾಲವಾಗಲಿ, ದೀರ್ಘಕಾಲವಾಗಲಿ, ನೀವು ಮಾತ್ರವಲ್ಲ, ಇಂದು ನನ್ನನ್ನು ಆಲಿಸುತ್ತಿರುವ ಎಲ್ಲರೂ ನನ್ನಂತೆಯೇ ಆಗಬೇಕೆಂಬುದೇ ದೇವರಲ್ಲಿ ನಾನು ಮಾಡುವ ಪ್ರಾರ್ಥನೆ. ಆದರೆ ಈ ಸಂಕೋಲೆಗಳು ಮಾತ್ರ ನಿಮಗೆ ಬೇಡ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಪೌಲನು - ಅಲ್ಪಪ್ರಯತ್ನದಿಂದಾಗಲಿ ಅಧಿಕಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ ಈ ಬೇಡಿಗಳ ಹೊರತು ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ತನ್ನಾ ಪಾವ್ಲುನ್, “ಸರಳ್ ಕಿ ಕಸ್ಟ್ ಕಿ ತೆ ಮಾಕಾ ಮುಖ್ಯ್ ನ್ಹಯ್ ತಿಯಾ ಎಕುಚ್ ನ್ಹಯ್, ಆಜ್ ಮಿಯಾ ಸಾಂಗಲ್ಲೆ ಆಯ್ಕುನ್ ಘೆಟಲ್ಲೊ ಹರಿಎಕ್ಲೊ ರಾಕನ್ ಹೊವ್ಚೆ ಅನಿ ಮಾಜ್ಯಾ ಸಾರ್ಕೆ ಹೊವ್ಚೆ ಮನುನ್ ಮಿಯಾ ದೆವಾಚ್ಯಾ ಜಗ್ಗೊಳ್ ಮಾಗ್ನಿ ಕರ್‍ತಾ, ಹೊಲ್ಯಾರ್ ಹ್ಯೊ ಅನ್ಮಾನ್ ತುಕಾ ನಕ್ಕೊ!” ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |
ಅಬ್ಷಾಲೋಮನು ಸತ್ತಿದ್ದಾನೆಂಬುದು ಆಗ ರಾಜನಿಗೆ ತಿಳಿಯಿತು. ರಾಜನು ಬಹಳ ತಳಮಳಗೊಂಡನು. ಅವನು ನಗರ ದ್ವಾರದಲ್ಲಿದ್ದ ಕೊಠಡಿಗೆ ಹೋಗಿ ಅಲ್ಲಿ ಗೋಳಾಡಿದನು. ಬಳಿಕ ಅಲ್ಲಿಂದ ತನ್ನ ಕೊಠಡಿಗೆ ಹೋಗುತ್ತಾ, “ನನ್ನ ಮಗನೇ, ಅಬ್ಷಾಲೋಮನೇ, ನನ್ನ ಮಗನಾದ ಅಬ್ಷಾಲೋಮನೇ! ನಿನಗೆ ಬದಲಾಗಿ ನಾನು ಸತ್ತಿದ್ದರೆ ಚೆನ್ನಾಗಿತ್ತು. ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ!” ಎಂದು ಗೋಳಾಡಿದನು.