ಅಪೊಸ್ತಲರ ಕೃತ್ಯಗಳು 27:1 - ಪರಿಶುದ್ದ ಬೈಬಲ್1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾಯಿತು. ಪೌಲನಿಗೂ ಇತರ ಕೆಲವು ಕೈದಿಗಳಿಗೂ ಜೂಲಿಯಸ್ ಎಂಬ ಸೇನಾಧಿಕಾರಿಯು ಕಾವಲಾಗಿದ್ದನು. ಜೂಲಿಯಸನು ಚಕ್ರವರ್ತಿಯ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ, ಪೌಲನನ್ನೂ, ಬೇರೆ ಕೆಲವು ಸೆರೆಯವರನ್ನೂ ಔಗುಸ್ತ ಸೇನೆಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ನಾವು ಸಮುದ್ರಮಾರ್ಗವಾಗಿ ಇತಾಲ್ಯದೇಶಕ್ಕೆ ಹೋಗಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಬೇರೆ ಕೆಲವು ಸೆರೆಯವರನ್ನೂ ಚಕ್ರವರ್ತಿಯ ಪಟಾಲವಿುಗೆ ಸೇರಿದ ಯೂಲ್ಯನೆಂಬ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ನಾವು ಇಟಲಿಗೆ ಸಮುದ್ರ ಪ್ರಯಾಣ ಮಾಡಬೇಕೆಂದು ತೀರ್ಮಾನವಾದ ಮೇಲೆ ಪೌಲನನ್ನೂ ಇತರ ಕೈದಿಗಳನ್ನೂ ಯೂಲ್ಯನೆಂಬ ಹೆಸರಿನ ಒಬ್ಬ ಶತಾಧಿಪತಿಗೆ ಒಪ್ಪಿಸಿದರು. ಅವನು ಚಕ್ರವರ್ತಿಯ ದಳಕ್ಕೆ ಸೇರಿದವನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಅಮಿ ಇಟಲಿಕ್ ಢೊನಿತ್ನಾ ಜಾವ್ಚೆ ಮನುನ್ ನಿರ್ದಾರ್ ಕರ್ಲಾಂವ್ ಪಾವ್ಲುಕ್ ಅನಿ ಹುರಲ್ಯಾ ಚೊರಾಕ್ನಿ ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನ್ಯ ರೊಮಾಚೊ ಶತಾದಿಪತಿ ರಾಕ್ವಲಿ ಹೊವ್ನ್ ಹೊತ್ತೊ, ಜುಲಿಯಸ್ ಮನ್ತಲೊ ಚಕ್ರವರ್ತಿಚ್ಯಾ ಸೈನಿಕಾತ್ನಿ ಸೆವಾ ಕರಿತ್ ಹೊತ್ತೊ. ಅಧ್ಯಾಯವನ್ನು ನೋಡಿ |
ಕೊರಿಂಥದಲ್ಲಿ ಪೌಲನು ಅಕ್ವಿಲ ಎಂಬ ಯೆಹೂದ್ಯನನ್ನು ಕಂಡನು. ಅಕ್ವಿಲನು ಪೊಂತ ಎಂಬ ನಾಡಿನವನು. ಆದರೆ ಅಕ್ವಿಲ ಮತ್ತು ಅವನ ಹೆಂಡತಿ ಪ್ರಿಸ್ಕಿಲ್ಲ ಇಟಲಿಯಿಂದ ಕೊರಿಂಥಕ್ಕೆ ಇತ್ತೀಚಿಗೆ ಬಂದಿದ್ದರು. ಎಲ್ಲಾ ಯೆಹೂದ್ಯರು ರೋಮನ್ನು ಬಿಟ್ಟುಹೋಗಬೇಕೆಂದು ಕ್ಲಾಡಿಯಸನು ಆಜ್ಞಾಪಿಸಿದ್ದರಿಂದ ಅವರು ಇಟಲಿಯನ್ನು ಬಿಟ್ಟುಬಂದಿದ್ದರು. ಪೌಲನು ಅಕ್ವಿಲ ಮತ್ತು ಪ್ರಿಸ್ಕಿಲ್ಲರನ್ನು ಭೇಟಿಯಾಗಲು ಹೋದನು.