ಅಪೊಸ್ತಲರ ಕೃತ್ಯಗಳು 27:12 - ಪರಿಶುದ್ದ ಬೈಬಲ್12 ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಬಂದರು ಪ್ರದೇಶ; ಚಳಿಗಾಲವನ್ನು ಕಳೆಯುವುದಕ್ಕೆ ಅನುಕೂಲವಲ್ಲವಾದುದರಿಂದ, ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ, ಅಲ್ಲೇ ಆ ಚಳಿಗಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ತಮ್ಮ ಅಭಿಪ್ರಾಯಗಳನ್ನು ಹೇಳಿದರು. ಫೊಯಿನಿಕ್ಸವು ಕ್ರೇತ ದ್ವೀಪದ ಒಂದು ಬಂದರು ಪ್ರದೇಶ, ಈಶಾನ್ಯ ದಿಕ್ಕಿಗೂ, ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅಲ್ಲದೆ ಚಳಿಗಾಲವನ್ನು ಕಳೆಯಲು ಆ ಬಂದರು ಹಿತಕರವಾಗಿರಲಿಲ್ಲ. ಆದ್ದರಿಂದ ಅಲ್ಲಿಂದ ಹೊರಟು, ಸಾಧ್ಯವಾದರೆ, ಫೆನಿಕ್ಸ್ ಎಂಬ ಊರನ್ನು ಸೇರಿ, ಅಲ್ಲೇ ಚಳಿಗಾಲವನ್ನು ಕಳೆಯಬಹುದೆಂದು ಹೆಚ್ಚುಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು. ಫೆನಿಕ್ಸ್, ಕ್ರೇಟ್ ದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆ ರೇವು ಹಿಮಕಾಲವನ್ನು ಕಳೆಯುವದಕ್ಕೆ ಅನುಕೂಲವಲ್ಲದ್ದರಿಂದ ಅಲ್ಲಿಂದ ಹೊರಟು ಸಾಧ್ಯವಾದರೆ ಹೇಗೂ ಫೊಯಿನಿಕ್ಸ ಊರನ್ನು ಸೇರಿ ಅಲ್ಲೇ ಆ ಹಿಮಕಾಲವನ್ನು ಕಳೆಯಬೇಕೆಂದು ಹೆಚ್ಚು ಜನರು ಆಲೋಚನೆ ಹೇಳಿದರು. ಫೊಯಿನಿಕ್ಸವು ಕ್ರೇತದ್ವೀಪದ ಒಂದು ರೇವು; ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಚಳಿಗಾಲ ಕಳೆಯಲು ಆ ಬಂದರು ಅನುಕೂಲವಾಗಿರಲಿಲ್ಲ. ಆದ್ದರಿಂದ ಹೆಚ್ಚು ಮಂದಿ ಪ್ರಯಾಣ ಮುಂದುವರಿಸಬೇಕೆಂದು ತೀರ್ಮಾನಿಸಿದರು. ಸಾಧ್ಯವಾದರೆ ಫೊಯಿನಿಕ್ಸನ್ನು ತಲುಪಿ ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂಬುದು ಅವರ ಯೋಚನೆಯಾಗಿತ್ತು. ಫೊಯಿನಿಕ್ಸ, ಕ್ರೇತದ್ವೀಪದ ಒಂದು ಬಂದರು. ಇದು ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಲೈ ಲೊಕಾನಿ ಥಂಡೆಚಿ ದಿಸಾ ಕಳ್ದುಕ್ ಫೆಲಿಕ್ಸಾಕ್ ಜಾವ್ನ್ ಪಾವ್ಚೆ ಮನುನ್ ಕಟ್ಪಟ್ಲ್ಯಾನಿ ,ಫೆಲಿಕ್ಸಾಮನ್ತಲೊ ಢೊನ್ ಇಬೆರಾತಲೊ ಜಾಗೊ ಕ್ರೆಟ್ ದ್ವಿಪಾತ್ ಹೊತ್ತೊ, ತೊ ತ್ಯಾ ಎಳಾರ್ ಢೊನ್ ಚಾಲ್ವುಕ್ ವಾರೊ ಮಾರ್‍ತಲ್ಯಾ ದಿಕ್ಕಾಕ್ಡೆ ತೊಂಡ್ ಕರುನ್ ಹೊತ್ತೊ. ಅಧ್ಯಾಯವನ್ನು ನೋಡಿ |