Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:13 - ಪರಿಶುದ್ದ ಬೈಬಲ್‌

13 ಬಳಿಕ ಒಳ್ಳೆಯ ಗಾಳಿಯು ದಕ್ಷಿಣದ ಕಡೆಯಿಂದ ಬೀಸತೊಡಗಿತು. ಹಡಗಿನಲ್ಲಿದ್ದ ಜನರು, “ನಮಗೆ ಬೇಕಾಗಿದ್ದು ಈ ಗಾಳಿಯೇ, ಈಗ ಅದು ನಮಗೆ ದೊರಕಿತು!” ಎಂದು ಭಾವಿಸಿಕೊಂಡರು. ಆದ್ದರಿಂದ ಅವರು ಹಡಗಿನ ಲಂಗರನ್ನು ಮೇಲಕ್ಕೆ ಎಳೆದರು. ನಾವು ಕ್ರೇಟ್ ದ್ವೀಪದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರುಗಳನ್ನು ತೆಗೆದು ಕ್ರೇತ ದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದಕ್ಷಿಣದಿಂದ ತೆಳುಗಾಳಿ ಬೀಸಲಾರಂಭಿಸಿತು. ಪ್ರಯಾಣಿಕರು ತಮ್ಮ ಉದ್ದೇಶ ಕೈಗೂಡಿತೆಂದು ಭಾವಿಸಿದರು. ಅವರು ಹಡಗಿನ ಲಂಗರುಗಳನ್ನು ಎತ್ತಿ, ಕ್ರೇಟ್ ದ್ವೀಪವನ್ನು ಅನುಸರಿಸುತ್ತಾ, ತೀರದ ಮಗ್ಗುಲಲ್ಲೇ ಪ್ರಯಾಣ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ತೆಂಕಣ ಗಾಳಿ ಮೆಲ್ಲಗೆ ಬೀಸಲಾಗಿ ತಮ್ಮ ಉದ್ದೇಶವು ಸಾರ್ಥಕವಾಯಿತೆಂದು ಭಾವಿಸಿ ಲಂಗರ ಎತ್ತಿ ಕ್ರೇತದ್ವೀಪವನ್ನು ಅನುಸರಿಸಿ ತೀರದ ಮಗ್ಗುಲಲ್ಲೇ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದಕ್ಷಿಣ ಸುಳಿಗಾಳಿ ಬೀಸಲು ಪ್ರಾರಂಭಿಸಿದಾಗ, ಅವರು ತಾವು ಬಯಸಿದ್ದು ದೊರೆಯಿತೆಂದು ಭಾವಿಸಿದರು; ಆದ್ದರಿಂದ ಅವರು ಲಂಗರು ಎತ್ತಿಕಟ್ಟಿ ಕ್ರೇತದ್ವೀಪದ ತೀರದ ಸಮೀಪವಾಗಿಯೇ ಸಮುದ್ರ ಪ್ರಯಾಣ ಬೆಳೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಾನಾ ಅಮಿ ಜಾವ್ಕ್ ಆಸ್ಯಾ ಕರಲ್ಯಾ ದಿಕ್ಕಾಕ್ನಾ ಬರೊ ವಾರೊ ಯೆವ್ಕ್ ಲಾಗ್ಲೊ, ತನ್ನಾ ಢೊನಿತ್ನಿ ಸಗ್ಳ್ಯಿಲೊಕಾಬಿ, ಆಮ್ಕಾ ಪಾಜೆ ಹೊಲ್ಲೊ ಅಸ್ಲೊಚ್ ವಾರೊ ಅತ್ತಾ ತೊ ಅಮ್ಕಾ ಗಾವ್ಲೊ! ಮನುನ್ ಕಳ್ವುನ್ ಘೆವ್ಕ್ ಲಾಗ್ಲೆ, ಅನಿ ತೆನಿ ಢೊನಾಕ್ ಭಾಂದುನ್ ಥವಲ್ಲೊ ಗೊಕ್ಕೊ ವೈರ್ ಪರ್ತುನ್ ಘೆಟ್ಲ್ಯಾನಿ, ಅಮಿ ಕ್ರೆಟ್ ಮನ್ತಲ್ಯಾ ದ್ವಿಪಾಚ್ಯಾ ಕರಾವಳಿಕ್ನಾ ಗೆಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:13
10 ತಿಳಿವುಗಳ ಹೋಲಿಕೆ  

ದಕ್ಷಿಣ ದಿಕ್ಕಿನಿಂದ ಗಾಳಿ ಬೀಸತೊಡಗಿದಾಗ, ‘ಈ ದಿನ ತುಂಬಾ ಸೆಕೆ ಇರುವುದು’ ಎನ್ನುತ್ತೀರಿ. ಅಂತೆಯೇ ಸೆಕೆ ಇರುವುದು.


ಉತ್ತರದ ಗಾಳಿಯೇ, ಎಚ್ಚರವಾಗು! ದಕ್ಷಿಣದ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು. ಅದರ ಸುವಾಸನೆಯು ಹರಡಿಕೊಳ್ಳಲಿ. ನನ್ನ ಪ್ರಿಯನು ನನ್ನ ತೋಟವನ್ನು ಪ್ರವೇಶಿಸಲಿ. ಅವನು ಅದರ ರುಚಿಕರವಾದ ಹಣ್ಣನ್ನು ತಿನ್ನಲಿ.


ಬಳಿಕ ಯೆಹೋವನು ಪೂರ್ವದಿಂದ ಬಲವಾದ ಗಾಳಿ ಬೀಸುವಂತೆ ಮಾಡಿದನು. ಆಗ ಲಾವಕ್ಕಿಗಳು ಮಳೆಯಂತೆ ಅವರಿದ್ದಲ್ಲಿಗೆ ಬಂದು ಬಿದ್ದವು.


ಯೋಬನೇ, ನಿನಗೆ ಇವುಗಳ ಬಗ್ಗೆ ಗೊತ್ತಿಲ್ಲ. ದಕ್ಷಿಣ ದಿಕ್ಕಿನ ಬಿಸಿಗಾಳಿಯಿಂದ ಭೂಮಿಯು ಸ್ತಬ್ಧವಾದಾಗ, ನೀನು ಬೆವತು ಬಟ್ಟೆಗಳು ಒದ್ದೆಯಾಗುವುದಷ್ಟೇ ನಿನಗೆ ತಿಳಿದಿದೆ.


ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.


ನಾವು ಪ್ರಯಾಸದಿಂದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು. ಬಳಿಕ ನಾವು “ಸುರಕ್ಷಿತ ರೇವು” ಎಂಬ ಸ್ಥಳಕ್ಕೆ ಬಂದೆವು. ಲಸಾಯ ಪಟ್ಟಣವು ಅದರ ಸಮೀಪದಲ್ಲಿತ್ತು.


ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು.


ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ.


ಇನ್ನೂ ಪೂರ್ಣವಾಗಿಲ್ಲದ ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿಯೂ ಪ್ರತಿಯೊಂದು ಪಟ್ಟಣದಲ್ಲಿ ಸಭಾಹಿರಿಯರನ್ನು ಆರಿಸುವುದಕ್ಕಾಗಿಯೂ ನಾನು ನಿನ್ನನ್ನು ಕ್ರೇತದಲ್ಲಿ ಬಿಟ್ಟು ಬಂದೆನು.


ಅವರ ಪ್ರವಾದಿಗಳಲ್ಲಿ ಒಬ್ಬನು, “ಕ್ರೇತದ ಜನರು ಯಾವಾಗಲೂ ಸುಳ್ಳು ಹೇಳುತ್ತಾರೆ. ಅವರು ದುಷ್ಟ ಮೃಗಗಳಾಗಿದ್ದಾರೆ; ಸೋಮಾರಿತನದಿಂದ ಕೆಲಸವನ್ನೇ ಮಾಡದೆ ಹೊಟ್ಟೆಬಾಕರಾಗಿದ್ದಾರೆ” ಎಂದು ಹೇಳಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು