ಅಪೊಸ್ತಲರ ಕೃತ್ಯಗಳು 27:21 - ಪರಿಶುದ್ದ ಬೈಬಲ್21 ಆ ಜನರು ಬಹಳ ದಿನಗಳವರೆಗೆ ಊಟಮಾಡಲಿಲ್ಲ. ಆಗ ಒಂದು ದಿನ ಪೌಲನು ಎದ್ದುನಿಂತುಕೊಂಡು ಅವರಿಗೆ, “ಜನರೇ, ಕ್ರೇಟ್ ದ್ವೀಪದಿಂದ ಹೊರಡಬೇಡಿರಿ ಎಂದು ನಾನು ನಿಮಗೆ ಹೇಳಿದೆ. ನೀವು ನನ್ನ ಮಾತನ್ನು ಕೇಳಬೇಕಿತ್ತು. ಆಗ ನಿಮಗೆ ಇಷ್ಟು ಕಷ್ಟವಾಗಲಿ ನಷ್ಟವಾಗಲಿ ಆಗುತ್ತಿರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ, ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು; “ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಬಹಳ ದಿನಗಳವರೆಗೆ ಅವರು ಊಟವಿಲ್ಲದೆ ಇದ್ದರು. ಆಗ ಪೌಲನು ಎದ್ದುನಿಂತು, “ಗೆಳೆಯರೇ, ನೀವು ನನ್ನ ಮಾತನ್ನು ಕೇಳಬೇಕಿತ್ತು. ಕ್ರೇಟ್ ದ್ವೀಪದಿಂದ ಮುಂದಕ್ಕೆ ಪ್ರಯಾಣ ಮಾಡಬಾರದಿತ್ತು. ಆಗ ಇಷ್ಟೆಲ್ಲಾ ಕಷ್ಟನಷ್ಟವನ್ನು ತಡೆಯಬಹುದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಬಹುಕಾಲ ಊಟವಿಲ್ಲದೆ ಇದ್ದ ಮೇಲೆ ಪೌಲನು ಅವರ ಮಧ್ಯದಲ್ಲಿ ನಿಂತುಕೊಂಡು - ಎಲೈ ಜನರೇ, ನೀವು ಕ್ರೇತದಿಂದ ಹೊರಟು ಈ ಕಷ್ಟನಷ್ಟಗಳಿಗೆ ಗುರಿಯಾಗದಂತೆ ನನ್ನ ಮಾತನ್ನು ಕೇಳಬೇಕಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಬಹಳ ದಿನಗಳವರೆಗೆ ಜನರು ಊಟ ಮಾಡದೇ ಇದ್ದಾಗ, ಪೌಲನು ಅವರ ಮುಂದೆ ಎದ್ದು ನಿಂತುಕೊಂಡು ಹೀಗೆ ಹೇಳಿದನು: “ಸ್ನೇಹಿತರೇ, ನೀವು ಕ್ರೇತದಿಂದ ಮುಂದೆ ಪ್ರಯಾಣ ಮಾಡಬಾರದೆಂದು ಹೇಳಿದ ನನ್ನ ಮಾತಿಗೆ ವಿಧೇಯರಾಗಿದ್ದರೆ ಈ ಕಷ್ಟನಷ್ಟವನ್ನು ತಡೆಯಬಹುದಿತ್ತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಪಾವ್ಲುನ್ ತೆಂಚ್ಯಾ ಇದ್ರಾಕ್ ಉಟುನ್ ಇಬೆ ರ್‍ಹಾವ್ನ್ ಮಾಜಿ ಗೊಸ್ಟ್ ಆಯ್ಕುನ್ ತುಮಿ ಕ್ರೆಟ್ ದ್ವಿಪಾತ್ನಾ ಯೆಯ್ ನಸ್ತಾನಾ ಹೊತ್ತೆ ಹೊಲ್ಯಾರ್ ಹ್ಯೊ ತರಾಸ್ ಅನಿ ಲುಕ್ಷಾನ್ ಹೊಯ್ನಶಿ ಹೊತ್ತೊ, ಅಧ್ಯಾಯವನ್ನು ನೋಡಿ |
ಆ ರೇವು (ಸುರಕ್ಷಿತ ರೇವು) ಚಳಿಗಾಲದಲ್ಲಿ ಹಡಗು ನಿಲ್ಲುವುದಕ್ಕೆ ಒಳ್ಳೆಯ ಸ್ಥಳವಾಗಿರಲಿಲ್ಲ. ಆದ್ದರಿಂದ ಹಡಗು ಅಲ್ಲಿಂದ ಹೊರಡಲೇಬೇಕೆಂದು ಹೆಚ್ಚುಮಂದಿ ನಿರ್ಧರಿಸಿದರು. ನಾವು ಫೆನಿಕ್ಸ್‌ಗೆ ತಲುಪಬಹುದೆಂದು ಅವರ ನಿರೀಕ್ಷೆಯಾಗಿತ್ತು. ಚಳಿಗಾಲದಲ್ಲಿ ಹಡಗು ಅಲ್ಲಿ ತಂಗಬಹುದಾಗಿತ್ತು. ಫೆನಿಕ್ಸ್ ಕ್ರೇಟ್ ದ್ವೀಪದ ಒಂದು ಪಟ್ಟಣ. ಈಶಾನ್ಯ ದಿಕ್ಕಿಗೂ ಆಗ್ನೇಯ ದಿಕ್ಕಿಗೂ ಅಭಿಮುಖವಾಗಿದ್ದ ಬಂದರನ್ನು ಅದು ಹೊಂದಿತ್ತು.