ಅಪೊಸ್ತಲರ ಕೃತ್ಯಗಳು 27:23 - ಪರಿಶುದ್ದ ಬೈಬಲ್23 ಕಳೆದ ರಾತ್ರಿ ದೇವರ ಬಳಿಯಿಂದ ದೂತನೊಬ್ಬನು ನನ್ನ ಬಳಿಗೆ ಬಂದಿದ್ದನು. ಆ ದೇವರನ್ನೇ ನಾನು ಆರಾಧಿಸುವುದು. ನಾನು ಆತನವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಏಕೆಂದರೆ, ನಾನು ಯಾರವನಾಗಿದ್ದೇನೋ, ಯಾರನ್ನು ಸ್ತುತಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ಯಾವ ದೇವರಿಗೆ ಸೇರಿದ್ದೇನೋ ಮತ್ತು ಯಾರನ್ನು ಸೇವೆ ಮಾಡುತ್ತಿದ್ದೇನೋ ಆ ದೇವರ ದೂತನೊಬ್ಬನು ನಿನ್ನೆ ರಾತ್ರಿ ನನ್ನ ಬಳಿ ನಿಂತುಕೊಂಡು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಕಳದಲ್ಲ್ಯಾ ರಾತ್ತಿನ್ ದೆವಾಕ್ನಾ ಎಕ್ ದುತ್ ಮಾಜ್ಯಾ ಬಾಜುಕ್ ಯೆವ್ನ್ ಇಬೆ ಹೊತ್ತೊ ಮಿಯಾ ಆರಾದನ್ ಕರ್ತಲೆ ತ್ಯಾಚ್ ದೆವಾಕ್ ಅನಿ ಮಿಯಾ ತೆಜೊಚ್. ಅಧ್ಯಾಯವನ್ನು ನೋಡಿ |
ಆ ಬಳಿಕ ನಾನು ಉಳಿದವರನ್ನು ಪರೀಕ್ಷಿಸುವೆನು. ಅವರಿಗೆ ಅನೇಕ ಸಂಕಟ ಬರಮಾಡುವೆನು. ಅದು ಬೆಳ್ಳಿಯನ್ನು ಬೆಂಕಿಯಲ್ಲಿ ಪರೀಕ್ಷಿಸಿದಂತಿರುವುದು. ಒಬ್ಬನು ಬಂಗಾರವನ್ನು ಪರೀಕ್ಷಿಸುವಂತೆ ನಾನು ಅವರನ್ನು ಪರೀಕ್ಷಿಸುವೆನು. ಆಗ ಅವರು ಸಹಾಯ ಮಾಡುವಂತೆ ನನಗೆ ಮೊರೆಯಿಡುವರು ಮತ್ತು ನಾನು ಅವರಿಗೆ ಉತ್ತರಕೊಡುವೆನು. ಆಗ ನಾನು, ‘ನೀವು ನನ್ನ ಜನರು’ ಎಂದು ಹೇಳುವೆನು. ಅದಕ್ಕವರು, ‘ಯೆಹೋವನು ನಮ್ಮ ದೇವರು’ ಎಂದು ಹೇಳುವರು.”
ಆಗ ನೆಬೂಕದ್ನೆಚ್ಚರನು, “ಶದ್ರಕ್, ಮೇಶಕ್, ಅಬೇದ್‌ನೆಗೋ ಇವರುಗಳ ದೇವರಿಗೆ ಸ್ತೋತ್ರವಾಗಲಿ. ಅವರ ದೇವರು ತನ್ನ ದೂತನನ್ನು ಕಳುಹಿಸಿ ತನ್ನ ಸೇವಕರನ್ನು ಬೆಂಕಿಯಿಂದ ರಕ್ಷಿಸಿದ್ದಾನೆ. ಈ ಮೂರು ಜನರು ತಮ್ಮ ದೇವರ ಮೇಲೆ ವಿಶ್ವಾಸವಿಟ್ಟರು. ಅವರು ನನ್ನ ಆಜ್ಞೆಯನ್ನು ಪಾಲಿಸಲು ಒಪ್ಪಲಿಲ್ಲ. ಬೇರೆ ಯಾವ ದೇವರನ್ನೂ ಪೂಜಿಸುವುದಕ್ಕೆ ಅಥವಾ ಸೇವಿಸುವುದಕ್ಕೆ ಬದಲಾಗಿ ಸಾಯಲು ಅವರು ಸಿದ್ಧರಾಗಿದ್ದರು.