Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:24 - ಪರಿಶುದ್ದ ಬೈಬಲ್‌

24 ದೇವರ ದೂತನು, ‘ಪೌಲನೇ, ಭಯಪಡಬೇಡ! ನೀನು ಸೀಸರನ ಮುಂದೆ ನಿಂತುಕೊಳ್ಳಬೇಕು. ನಿನ್ನೊಂದಿಗೆ ನೌಕಾಯಾನ ಮಾಡತ್ತಿರುವ ಎಲ್ಲಾ ಜನರ ಪ್ರಾಣಗಳನ್ನು ಉಳಿಸುವುದಾಗಿ ದೇವರು ನಿನಗೆ ವಾಗ್ದಾನವನ್ನು ಮಾಡಿದ್ದಾನೆ’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ‘ಪೌಲನೇ, ಭಯಪಡಬೇಡ, ನೀನು ಕೈಸರನ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣವನ್ನು, ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು’ ನನ್ನ ಸಂಗಡ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಪೌಲನೇ, ಭಯಪಡಬೇಡ, ನೀನು ಚಕ್ರವರ್ತಿಯ ಮುಂದೆ ನಿಲ್ಲಬೇಕು; ಇದಲ್ಲದೆ ನಿನ್ನ ಸಂಗಡ ಈ ಹಡಗಿನಲ್ಲಿ ಪ್ರಯಾಣಮಾಡುವವರೆಲ್ಲರ ಪ್ರಾಣ ದೇವರು ನಿನ್ನ ಮೇಲಣ ದಯೆಯಿಂದ ಉಳಿಸಿಕೊಟ್ಟಿದ್ದಾನೆಂದು ನನ್ನ ಸಂಗಡ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ದೆವಾಚ್ಯಾ ದುತಾನ್ ಮಾಕಾ, ಪಾವ್ಲು, ಭಿಂವ್‌ನಕ್ಕೊ! ತಿಯಾ ಸಿಸರಾಚ್ಯಾ ಇದ್ರಾಕ್ ಇಬೆ ರ್‍ಹಾವ್ಕ್ ಪಾಜೆ ತುಜ್ಯಾ ವೈಲ್ಯಾ ದಯಾ ವೈನಾ ತುಜ್ಯಾ ವಾಂಗ್ಡಾ ಜಾಯ್ತ್ ಹೊತ್ತ್ಯಾ ಹರ್ ಎಕ್ಲ್ಯಾಚೊ ಜಿವ್ಬಿ ದೆವ್ ಹುರ್ವುತಾ ಮನುನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:24
35 ತಿಳಿವುಗಳ ಹೋಲಿಕೆ  

ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


“ಜನರಿಗೆ ಹೆದರಬೇಡಿ. ಅವರು ಶರೀರವನ್ನು ಮಾತ್ರ ಕೊಲ್ಲಬಹುದು. ಆತ್ಮವನ್ನು ಅವರು ಕೊಲ್ಲಲಾರರು. ಶರೀರವನ್ನೂ ಆತ್ಮವನ್ನೂ ನರಕಕ್ಕೆ ಹಾಕಬಲ್ಲ ದೇವರಿಗೆ ಭಯಪಡಿರಿ.


ನೀವು ಮಾಡಿದ ತಪ್ಪುಗಳನ್ನು ಒಬ್ಬರಿಗೊಬ್ಬರು ಯಾವಾಗಲೂ ಹೇಳಿಕೊಳ್ಳಿರಿ. ಬಳಿಕ ಒಬ್ಬರಿಗೊಬ್ಬರು ಪ್ರಾರ್ಥಿಸಿರಿ. ನೀವು ಹೀಗೆ ಮಾಡಿದರೆ, ದೇವರು ನಿಮ್ಮನ್ನು ಗುಣಪಡಿಸುವನು. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಲವಾಗಿದೆ.


ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.


ದೇವರು ಆ ಸೀಮೆಯ ನಗರಗಳನ್ನು ನಾಶಮಾಡಿದರೂ ಅಬ್ರಹಾಮನನ್ನು ಜ್ಞಾಪಿಸಿಕೊಂಡು ಲೋಟನ ಪ್ರಾಣವನ್ನು ಉಳಿಸಿದನು; ಆದರೆ ಲೋಟನು ವಾಸಿಸುತ್ತಿದ್ದ ನಗರವನ್ನು ನಾಶಮಾಡಿದನು.


ನಾನು ಆತನನ್ನು ನೋಡಿದಾಗ, ಆತನ ಪಾದಗಳ ಬಳಿ ಸತ್ತವನಂತೆ ಕುಸಿದುಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು, “ಹೆದರಬೇಡ! ನಾನೇ ಆದಿ ಮತ್ತು ಅಂತ್ಯ.


ಎಲೀಷನು, “ನೀನು ಹೆದರದಿರು! ನಮಗಾಗಿ ಯುದ್ಧಮಾಡುವ ಸೇನೆಯು ಅರಾಮ್ಯರಿಗಾಗಿ ಯುದ್ಧಮಾಡುವ ಸೇನೆಗಿಂತ ಬಹಳ ಹೆಚ್ಚಿನದಾಗಿದೆ!” ಎಂದು ಹೇಳಿದನು.


ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು.


ನಾನು ನಿನ್ನನ್ನು ಆಶೀರ್ವದಿಸುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡಿ ನಿನ್ನ ಹೆಸರನ್ನು ಪ್ರಖ್ಯಾತಿಪಡಿಸುವೆನು; ನೀನು ಆಶೀರ್ವಾದದಾಯಕನಾಗುವಂತೆ ಮಾಡುವೆನು.


ಉಳಿದ ಜನರು ಹಲಗೆಗಳ ಅಥವಾ ಹಡಗಿನ ತುಂಡುಗಳ ಸಹಾಯದಿಂದ ಹೋಗಬೇಕೆಂದು ತಿಳಿಸಿದನು. ಹೀಗೆ ಜನರೆಲ್ಲರೂ ದಡವನ್ನು ಸೇರಿದರು. ಅವರಲ್ಲಿ ಒಬ್ಬರೂ ಸಾಯಲಿಲ್ಲ.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯ ದೇಶಗಳ ಮೂಲಕ ಜೆರುಸಲೇಮಿಗೆ ಹೋಗಲು ಯೋಜನೆ ಮಾಡಿದನು. “ನಾನು ಜೆರುಸಲೇಮನ್ನು ಸಂದರ್ಶಿಸಿದ ಮೇಲೆ ರೋಮ್ ನಗರವನ್ನು ಸಹ ಸಂದರ್ಶಿಸಬೇಕು” ಎಂದು ಪೌಲನು ಯೋಚಿಸಿಕೊಂಡನು.


ಯೇಸು, “ಹಗಲಿಗೆ ಹನ್ನೆರಡು ತಾಸುಗಳಿರುತ್ತವೆ. ಹೌದಲ್ಲವೇ? ಹಗಲಿನಲ್ಲಿ ನಡೆಯುವವನು ಎಡವಿಬೀಳುವುದಿಲ್ಲ. ಏಕೆಂದರೆ ಈ ಲೋಕದ ಬೆಳಕಿನಿಂದ ಅವನು ನೋಡಬಲ್ಲನು.


ನಿಮ್ಮನ್ನು ಅಧಿಕಾರಿಗಳ ಸಮ್ಮುಖಕ್ಕೂ ಅರಸುಗಳ ಸಮ್ಮುಖಕ್ಕೂ ಕರೆದುಕೊಂಡು ಹೋಗುವರು. ನನ್ನ ನಿಮಿತ್ತ ಜನರು ನಿಮಗೆ ಹೀಗೆ ಮಾಡುವರು. ಆದರೆ ನೀವು ಆ ಅರಸುಗಳಿಗೂ ಅಧಿಕಾರಿಗಳಿಗೂ ಯಹೂದ್ಯರಲ್ಲದ ಜನರಿಗೂ ನನ್ನ ವಿಷಯವಾಗಿ ಹೇಳುವಿರಿ.


ಆದರೆ ಜನಾಂಗಗಳಲ್ಲಿ ಚದರಿರುವ ಇಸ್ರೇಲಿನ ಅಳಿದುಳಿದವರು ಯೆಹೋವನಿಂದ ಹೊರಡುವ ಮಂಜಿನಂತಿರುವರು. ಅದು ಯಾರನ್ನೂ ಕಾಯುವದಿಲ್ಲ. ಅವರು ಹುಲ್ಲಿನ ಮೇಲೆ ಬಿದ್ದಿರುವ ಮಳೆಯಂತಿರುವರು. ಆ ಮಳೆಯು ಯಾರನ್ನೂ ಕಾಯುವದಿಲ್ಲ.


ಎಲೀಯನು ಆ ಸ್ತ್ರೀಗೆ, “ಚಿಂತಿಸದಿರು, ಮನೆಗೆ ಹೋಗಿ ನೀನು ಹೇಳಿದಂತೆ ಆಹಾರವನ್ನು ಸಿದ್ಧಪಡಿಸು. ಆದರೆ ನಿನ್ನಲ್ಲಿರುವ ಹಿಟ್ಟಿನಿಂದ ಮೊದಲು ಒಂದು ಚಿಕ್ಕ ರೊಟ್ಟಿಯನ್ನು ಮಾಡು. ಆ ರೊಟ್ಟಿಯನ್ನು ನನಗೆ ತಂದುಕೊಡು; ನಂತರ ನಿನಗೆ ಮತ್ತು ನಿನ್ನ ಮಗನಿಗೆ ಅಡಿಗೆ ಮಾಡಿಕೋ.


ದೇವರು ಅವನಿಗೆ, “ನಾನೇ ದೇವರು, ನಾನೇ ನಿನ್ನ ತಂದೆಯ ದೇವರು. ನೀನು ಈಜಿಪ್ಟಿಗೆ ಹೋಗಲು ಹೆದರಬೇಡ. ಈಜಿಪ್ಟಿನಲ್ಲಿ ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವೆ.


ಯೆಹೋವನು ಯೋಸೇಫನ ಸಂಗಡವಿದ್ದು ಅವನ ಎಲ್ಲಾ ಕೆಲಸಕಾರ್ಯಗಳನ್ನು ಯಶಸ್ವಿಗೊಳಿಸುತ್ತಿದ್ದದ್ದರಿಂದ ಮುಖ್ಯಾಧಿಕಾರಿಯು ಎಲ್ಲಾ ವಿಷಯಗಳನ್ನು ಯೋಸೇಫನಿಗೆ ವಹಿಸಿ ನಿಶ್ಚಿಂತೆಯಾಗಿದ್ದನು.


ಪೋಟೀಫರನು ಯೋಸೇಫನಿಗೆ ಮನೆಯ ಮೇಲ್ವಿಚಾರಣೆಯನ್ನು ಕೊಟ್ಟು ಆಸ್ತಿಗೆ ಅವನನ್ನು ಜವಾಬ್ದಾರನನ್ನಾಗಿ ಮಾಡಿದ ಮೇಲೆ ಯೆಹೋವನು ಪೋಟೀಫರನ ಮನೆಯನ್ನೂ ಬೆಳೆಗಳನ್ನೂ ಆಸ್ತಿಯನ್ನೂ ಆಶೀರ್ವದಿಸಿದನು.


ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.


ಆಮೇಲೆ ದಾನಿಯೇಲನು ಅರ್ಯೋಕನ ಬಳಿಗೆ ಹೋದನು. ಅರಸನಾದ ನೆಬೂಕದ್ನೆಚ್ಚರನು ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲುವದಕ್ಕೆ ಅರ್ಯೋಕನನ್ನು ಆರಿಸಿದ್ದನು. ದಾನಿಯೇಲನು ಅರ್ಯೋಕನಿಗೆ, “ಬಾಬಿಲೋನಿನ ವಿದ್ವಾಂಸರನ್ನು ಕೊಲ್ಲಬೇಡ. ನನ್ನನ್ನು ಅರಸನ ಹತ್ತಿರ ಕರೆದುಕೊಂಡು ಹೋಗು. ನಾನು ಅವನಿಗೆ ಅವನ ಕನಸನ್ನು ಮತ್ತು ಅದರ ಅರ್ಥವನ್ನು ತಿಳಿಸುತ್ತೇನೆ” ಎಂದನು.


ಆದರೆ ಪೌಲನು ಸೇನಾಧಿಕಾರಿಗೆ ಮತ್ತು ಇತರ ಸೈನಿಕರಿಗೆ, “ಈ ನಾವಿಕರು ಹಡಗಿನಲ್ಲಿ ಇರದಿದ್ದರೆ ನಿಮ್ಮ ಪ್ರಾಣಗಳು ಉಳಿಯಲು ಸಾಧ್ಯವಿಲ್ಲ” ಎಂದು ಹೇಳಿದನು.


ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು.


ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ.


ಯೋಬನೇ, ನಿನ್ನ ದುಷ್ಟತನದಿಂದ ನಿನ್ನಂಥವನಿಗೇ ಕೇಡಾಗುವುದು; ನಿನ್ನ ಒಳ್ಳೆಯ ಕಾರ್ಯಗಳಿಂದ ನಿನ್ನಂಥವನಿಗೇ ಒಳ್ಳೆಯದಾಗುವುದು.


ನಾನು ನಿನ್ನನ್ನು ಕರೆದಾಗ, ನೀನು ಸಮೀಪಕ್ಕೆ ಬಂದು, “ಭಯಪಡದಿರು” ಎಂದು ಹೇಳಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು