Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:41 - ಪರಿಶುದ್ದ ಬೈಬಲ್‌

41 ಆದರೆ ಹಡಗು ಉಸುಬಿನ ದಿಬ್ಬಕ್ಕೆ ಅಪ್ಪಳಿಸಿತು. ಹಡಗಿನ ಮುಂಭಾಗವು ಅದರಲ್ಲಿ ಸಿಕ್ಕಿಕೊಂಡಿತು. ಹಡಗು ಚಲಿಸಲಾಗಲಿಲ್ಲ. ಬಳಿಕ ದೊಡ್ಡ ಅಲೆಗಳು ಹಡಗಿನ ಹಿಂಭಾಗಕ್ಕೆ ಬಡಿದು ಚೂರುಚೂರು ಮಾಡಲಾರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಆದರೆ ಮಧ್ಯದಲ್ಲಿ ಅವರಿಗೆ ಮರಳದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ದಿಣ್ಣೆಗೆ ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ಹುಚ್ಚು ಅಲೆಗಳ ಹೊಡೆತದಿಂದ ಒಡೆದು ತುಂಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಆದರೆ ಮಧ್ಯದಲ್ಲಿ ಹಡಗು ಮರಳು ದಿಬ್ಬಕ್ಕೆ ಢಿಕ್ಕಿಹೊಡೆದು ನೆಲ ಹತ್ತಿತ್ತು. ಹಡಗಿನ ಮುಂಭಾಗ ದಿಣ್ಣೆಗೆ ಸಿಲುಕಿ ಅಲ್ಲಾಡದೆ ನಿಂತಿತು; ಹಿಂಭಾಗ ಹುಚ್ಚು ಅಲೆಗಳ ಹೊಡೆತಕ್ಕೆ ಸಿಕ್ಕಿ ತುಂಡುತುಂಡಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಆದರೆ ಮಧ್ಯದಲ್ಲಿ ಅವರಿಗೆ ಮರಳುದಿಬ್ಬ ಸಿಕ್ಕಿದಾಗ ಅದಕ್ಕೆ ನಾವೆಯನ್ನು ಹತ್ತಿಸಿದರು. ಮುಂಭಾಗವು ತಗಲಿಕೊಂಡು ಅಲ್ಲಾಡದೆ ನಿಂತಿತು. ಹಿಂಭಾಗವು ತೆರೆಗಳ ಹೊಡೆತದಿಂದ ಒಡೆದುಹೋಗುತ್ತಾ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆದರೆ ನೌಕೆ ಮಧ್ಯದಲ್ಲಿ ಮರುಳು ದಿಬ್ಬಕ್ಕೆ ಅಪ್ಪಳಿಸಿ ಮುಳುಗಲಿಕ್ಕೆ ಪ್ರಾರಂಭಿಸಿತು. ನೌಕೆಯ ಮುಂಭಾಗ ಮರಳಲ್ಲಿ ಸಿಕ್ಕಿ ಅಲ್ಲಾಡದೇ ನಿಂತಿತು; ಹಿಂಭಾಗ ಬಿರುಗಾಳಿಯ ಹೊಡೆತಕ್ಕೆ ಸಿಕ್ಕಿ ಮುರಿದುಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ಖರೆ ಮೊಟಿ ಢೊನ್ ರೆತಿಚ್ಯಾ ಗುಡ್ಯಾಕ್ ಆಡ್ಲುನ್ ಢೊನಾಚೊ ಫಿಡ್ಲೊ ಭಾಗ್ ರೆತಿತ್ ಸಿರ್ಕುನ್ ಪಡಲ್ಯಾಕ್ ಢೊನ್ ಚಾಲ್ವುಕ್ ಹೊವ್ಕ್ ನಾ, ಮಾನಾ ಮೊಟಿ ಲಾಟಾ ಯೆವ್ನ್ ಢೊನಾಚ್ಯಾ ಫಾಟ್ಲ್ಯಾ ಭಾಜುಕ್ ಮಾರುನ್ ತುಕ್ಡೆ ತುಕ್ಡೆ ಕರುನ್ ಟಾಕುಕ್ ಲಾಗ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:41
11 ತಿಳಿವುಗಳ ಹೋಲಿಕೆ  

ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.


ಬಳಿಕ ಹಡಗು ಒಡೆದುಹೋಗದಂತೆ ಹಡಗಿನ ಸುತ್ತಲೂ ಹಗ್ಗಗಳನ್ನು ಬಿಗಿದರು. ಅನಂತರ “ಸರ್ತಿಸ್” ಎಂಬ ಕಳ್ಳುಸುಬಿನಲ್ಲಿ ಹಡಗು ಎಲ್ಲಿ ಸಿಕ್ಕಿಕೊಳ್ಳುವುದೊ ಎಂದು ಅವರಿಗೆ ಭಯವಾಯಿತು. ಆದ್ದರಿಂದ ಅವರು ಹಾಯಿಯನ್ನು ಇಳಿಸಿ ಹಡಗನ್ನು ಬಡಿದುಕೊಂಡು ಹೋಗಲು ಗಾಳಿಗೆ ಅವಕಾಶ ಮಾಡಿಕೊಟ್ಟರು.


ನೀನು ಈಗ ಸಮುದ್ರದ ನೀರಿನಿಂದ ಮುರಿದುಬಿದ್ದಿರುವೆ. ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿರುವೆ. ನೀನು ಮಾರುವ ಸರಕುಗಳೂ ನಿನ್ನ ಜನರೂ ಬಿದ್ದುಹೋದರು.


ಆಗ ಎಲಿಯೇಜರನು ಯೆಹೋಷಾಫಾಟನ ವಿರುದ್ಧವಾಗಿ ಪ್ರವಾದಿಸಿದನು. ಅವನು ದೋದಾವಾಹುವಿನ ಮಗನು. ಅವನು ಮಾರೇಷ ಎಂಬ ಪಟ್ಟಣದವನಾಗಿದ್ದನು. ಅವನು, “ಯೆಹೋಷಾಫಾಟನೇ, ನೀನು ಅಹಜ್ಯನೊಂದಿಗೆ ಸೇರಿಕೊಂಡಿರುವೆ. ಇದಕ್ಕಾಗಿ ಯೆಹೋವನು ನಿನ್ನ ಕೆಲಸಗಳನ್ನು ನಾಶಮಾಡುವನು” ಎಂದು ಹೇಳಿದನು. ಅವನ ಹಡಗುಗಳು ಸಮುದ್ರದಲ್ಲಿ ಒಡೆದುಹೋದದ್ದರಿಂದ ಅವುಗಳು ತಾರ್ಷೀಷಿಗೆ ಹೋಗಲಾಗಲಿಲ್ಲ.


ರಾಜನಾದ ಯೆಹೋಷಾಫಾಟನು ಸರಕು ಸಾಗಿಸುವ ಹಡಗುಗಳನ್ನು ತಯಾರಿಸಿದನು. ಯೆಹೋಷಾಫಾಟನು ಓಫೀರ್ ದೇಶದಿಂದ ಬಂಗಾರವನ್ನು ತರುವುದಕ್ಕಾಗಿ ಈ ಹಡಗುಗಳನ್ನು ಕಳುಹಿಸಿದನು. ಆದರೆ ಆ ಹಡಗುಗಳು ತಮ್ಮ ಸ್ವಂತ ಬಂದರಾದ ಎಚ್ಯೋನ್ಗೆಬೆರಿನಲ್ಲಿ ನಾಶವಾದವು. ಅವು ಓಫೀರ್ ದೇಶವನ್ನು ಮುಟ್ಟಲೇ ಇಲ್ಲ.


ನಾವಿಕರಲ್ಲಿ ಕೆಲವರು ಹಡಗನ್ನು ಬಿಟ್ಟುಹೋಗಬೇಕೆಂದಿದ್ದರು. ಅವರು ದೋಣಿಯನ್ನು ನೀರಿಗೆ ಇಳಿಸಿ, ಹಡಗಿನ ಮುಂಭಾಗದಲ್ಲಿ ಇನ್ನೂ ಕೆಲವು ಲಂಗರುಗಳನ್ನು ಇಳಿಸುವವರಂತೆ ನಟಿಸಿದರು.


ಆದ್ದರಿಂದ ಅವರು ಚುಕ್ಕಾಣಿಗಳನ್ನು ಬಿಗಿಯಾಗಿ ಹಿಡಿದುಕೊಂಡಿದ್ದ ಹಗ್ಗಗಳನ್ನು ಕತ್ತರಿಸಿಹಾಕಿದರು. ಬಳಿಕ ಮುಂಭಾಗದ ಹಾಯಿಯನ್ನು ಗಾಳಿಗೆ ಎತ್ತಿಕಟ್ಟಿ ಹಡಗನ್ನು ದಡದತ್ತ ನಡೆಸತೊಡಗಿದರು.


ಕೈದಿಗಳಲ್ಲಿ ಯಾರೂ ಈಜಿಕೊಂಡು ಹೋಗಿ ತಪ್ಪಿಸಿಕೊಳ್ಳಬಾರದೆಂದು ಸೈನಿಕರು ಕೈದಿಗಳನ್ನು ಕೊಲ್ಲಲು ನಿರ್ಧರಿಸಿದರು.


ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು