ಅಪೊಸ್ತಲರ ಕೃತ್ಯಗಳು 28:10 - ಪರಿಶುದ್ದ ಬೈಬಲ್10-11 ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ, ನಾವು ಅಲ್ಲಿಂದ ನಮ್ಮ ಪಯಣ ಮುಂದುವರಿಸಿದಾಗ, ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವರೆಲ್ಲರು ನಮ್ಮನ್ನು ಹಲವಾರು ವಿಧದಲ್ಲಿ ಬಹುಮಾನಿಸಿದರು; ಮಾತ್ರವಲ್ಲ, ನಾವು ಅಲ್ಲಿಂದ ನೌಕಾಯಾನವನ್ನು ಮುಂದುವರಿಸಿದಾಗ, ನಮಗೆ ಅವಶ್ಯವಾದುದೆಲ್ಲವನ್ನು ತಂದು ಹಡಗಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಅವರು ನಮ್ಮನ್ನು ಬಹಳವಾಗಿ ಸನ್ಮಾನಿಸಿದ್ದಲ್ಲದೆ ನಾವು ಬಿಟ್ಟು ಹೊರಟಾಗ ನಮಗೆ ಅವಶ್ಯವಾದ ಪದಾರ್ಥಗಳನ್ನು ತಂದು ಹಡಗಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಅವರು ಅನೇಕ ವಿಧವಾಗಿ ನಮ್ಮನ್ನು ಗೌರವಿಸಿದರು. ನಾವು ಪ್ರಯಾಣಕ್ಕೆ ಸಿದ್ಧರಾದಾಗ ನಮಗೆ ಅಗತ್ಯವಿದ್ದವುಗಳನ್ನೆಲ್ಲಾ ತಂದು ಒದಗಿಸಿಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ತ್ಯಾ ದ್ವಿಪಾತ್ಲ್ಯಾ ಲೊಕಾನಿ ಅಮ್ಕಾ ಭೊಮಾನಾ ದಿಲ್ಯಾನಿ, ಅಮಿ ಥೈತ್ನಾ ಜಾವ್ಕ್ ತಯಾರ್ ಹೊಲ್ಲ್ಯಾ ತನ್ನಾ ತೆನಿ ಅಮ್ಕಾ ಪಾಜೆ ಹೊಲ್ಲಿ ಸಗ್ಳ್ಯಿ ಸಾಮಾನಾ ದಿಲ್ಯಾನಿ. ಅಧ್ಯಾಯವನ್ನು ನೋಡಿ |
ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.