ಅಪೊಸ್ತಲರ ಕೃತ್ಯಗಳು 28:15 - ಪರಿಶುದ್ದ ಬೈಬಲ್15 ನಾವು ಇಲ್ಲಿರುವುದು ರೋಮಿನಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. ಅವರು ನಮ್ಮನ್ನು ಭೇಟಿಯಾಗುವುದಕ್ಕಾಗಿ “ಅಪ್ಪಿಯ” ಮಾರುಕಟ್ಟೆಗೂ ಮತ್ತು “ತ್ರಿಛತ್ರ” ಎಂಬ ಸ್ಥಳಕ್ಕೂ ಬಂದರು. ಈ ವಿಶ್ವಾಸಿಗಳನ್ನು ಕಂಡಾಗ ಪೌಲನು ಧೈರ್ಯಗೊಂಡು ದೇವರಿಗೆ ಸ್ತೋತ್ರ ಸಲ್ಲಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ, ನಮ್ಮನ್ನು ಭೇಟಿಮಾಡುವುದಕ್ಕಾಗಿ ಕೆಲವರು ಅಪ್ಪಿಯಪೇಟೆಯ ವರೆಗೂ, ಕೆಲವರು ತ್ರಿಛತ್ರವೆಂಬ ಸ್ಥಳದ ವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರಿಗೆ ಸ್ತೋತ್ರವನ್ನು ಸಲ್ಲಿಸಿ ಧೈರ್ಯಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅಲ್ಲಿದ್ದ ಕ್ರೈಸ್ತಭಕ್ತಾದಿಗಳು ನಾವು ಬಂದ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ‘ಅಪ್ಪಿಯಾ’ ಮಾರುಕಟ್ಟೆಗೂ ತ್ರಿಛತ್ರದ ಬಳಿಗೂ ಬಂದರು. ಅವರನ್ನು ಕಂಡದ್ದೇ ಪೌಲನಿಗೆ ಪ್ರೋತ್ಸಾಹ ಉಂಟಾಯಿತು. ಅವನು ದೇವರಿಗೆ ಸ್ತೋತ್ರ ಸಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅಲ್ಲಿದ್ದ ಸಹೋದರರು ನಮ್ಮ ಸಮಾಚಾರವನ್ನು ಕೇಳಿದಾಗ ನಮ್ಮನ್ನು ಎದುರುಗೊಳ್ಳುವದಕ್ಕಾಗಿ ಕೆಲವರು ಅಪ್ಪಿಯಪೇಟೆಯವರೆಗೂ ಕೆಲವರು ತ್ರಿಛತ್ರವೆಂಬ ಸ್ಥಳದವರೆಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತೋತ್ರವನ್ನು ಮಾಡಿ ಧೈರ್ಯಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಅಲ್ಲಿದ್ದ ಸಹೋದರರು ನಾವು ಬರುತ್ತೇವೆಂಬ ವಿಷಯವನ್ನು ಕೇಳಿ ನಮ್ಮನ್ನು ಎದುರುಗೊಳ್ಳಲು ಅಪ್ಪಿಯ ಪೇಟೆಗೂ ತ್ರಿಛತ್ರದ ಬಳಿಗೂ ಬಂದರು. ಪೌಲನು ಅವರನ್ನು ನೋಡಿ ದೇವರ ಸ್ತುತಿ ಮಾಡಿ ಧೈರ್ಯ ತಂದುಕೊಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ಅಮಿ ಹಿತ್ತೆ ಹಾತ್ ಮನ್ತಲೆ ರೊಮಾತ್ಲ್ಯಾ ದೆವಾಚ್ಯಾ ಲೊಕಾಕ್ನಿ ಗೊತ್ತ್ ಹೊಲೆ , ತೆನಿ ಅಮ್ಕಾ ಭೆಟುಕ್ ಮನುನ್ ಅಪ್ಪಿಯ್ ಬಾಜಾರಾಕ್ನಾ , ಅನಿ ತ್ರಿಛತ್ರ್ ಮನ್ತಲ್ಯಾ ಜಾಗ್ಯಾಕ್ ಯೆಲ್ಯಾನಿ ಹ್ಯಾ ದೆವಾಚ್ಯಾ ಲೊಕಾಕ್ನಿ ಬಗ್ತಾನಾ ಪಾವ್ಲುಕ್ ಧೈರ್ಯ್ ಹೊಲೊ ಅನಿ ತೆನಿ ದೆವಾಕ್ ಧನ್ಯಾವಾದ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |