Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:18 - ಪರಿಶುದ್ದ ಬೈಬಲ್‌

18 ರೋಮಿನವರು ನನಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ಆದರೆ ನನ್ನನ್ನು ಮರಣದಂಡನೆಗೆ ಗುರಿಮಾಡುವಂಥ ಯಾವ ಅಪರಾಧವನ್ನೂ ಅವರು ನನ್ನಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ನನ್ನನ್ನು ಬಿಡುಗಡೆಮಾಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ನನ್ನನ್ನು ವಿಚಾರಣೆಮಾಡಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ರೊಮಾತ್ಲ್ಯಾನಿ ಮಾಕಾ ಲೈ ಪರಸ್ನೆ ಇಚಾರ್‍ಲ್ಯಾನಿ, ಖರೆ ಮರ್ನ್ನಾಕ್ ಗುರಿ ಕರ್‍ತಲ್ಯಾ ಸಾರ್ಕೆ ಕಸ್ಲಿಬಿ ಚುಕ್ ತೆಂಕಾ ಮಾಜ್ಯಾಕ್ಡೆ ದಿಸುಕ್ನಾ ತಸೆ ಹೊವ್ನ್ ತೆನಿ ಮಾಕಾ ಸುಟ್ಕಾ ಕರುಚೆ ಮನುನ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:18
8 ತಿಳಿವುಗಳ ಹೋಲಿಕೆ  

ಅಲ್ಲಿ ನನಗೆ ತಿಳಿದುಬಂದದ್ದೇನೆಂದರೆ, ಪೌಲನು ದುಷ್ಕೃತ್ಯಗಳನ್ನು ಮಾಡಿದ್ದಾನೆಂದು ಯೆಹೂದ್ಯರು ಹೇಳಿದರೂ ಅವರ ಆಪಾದನೆಗಳು ಅವರ ಸ್ವಂತ ಯೆಹೂದ್ಯ ಧರ್ಮಶಾಸ್ತ್ರಕ್ಕೆ ಸಂಬಂಧಪಟ್ಟದ್ದಾಗಿದ್ದವು. ಅಲ್ಲದೆ ಇವನನ್ನು ಸೆರೆಮನೆಗಾಗಲಿ ಮರಣದಂಡನೆಗಾಗಲಿ ಗುರಿಪಡಿಸಬಹುದಾದ ಯಾವ ಅಪರಾಧವೂ ಇರಲಿಲ್ಲ.


ಫೇಲಿಕ್ಸನು ಯೇಸುವಿನ ಮಾರ್ಗದ ಬಗ್ಗೆ ಮೊದಲೇ ಸಾಕಷ್ಟು ಅರ್ಥಮಾಡಿಕೊಂಡಿದ್ದನು. ಅವನು ವಿಚಾರಣೆಯನ್ನು ನಿಲ್ಲಿಸಿ, “ಸೇನಾಧಿಪತಿಯಾದ ಲೂಸಿಯನು ಇಲ್ಲಿಗೆ ಬಂದಾಗ, ಈ ಸಂಗತಿಗಳ ಬಗ್ಗೆ ನಾನು ತೀರ್ಪನ್ನು ಕೊಡುತ್ತೇನೆ” ಎಂದು ಹೇಳಿದನು.


ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ, ಮಾತಾಡಲು ಸೂಚಿಸಿದನು. ಆಗ ಪೌಲನು ಹೀಗೆಂದನು: “ರಾಜ್ಯಪಾಲನಾದ ಫೇಲಿಕ್ಸನೇ, ನೀನು ಅನೇಕ ವರ್ಷಗಳಿಂದ ಈ ದೇಶಕ್ಕೆ ನ್ಯಾಯಾಧೀಶನಾಗಿರುವುದು ನನಗೆ ಗೊತ್ತಿದೆ. ಆದ್ದರಿಂದ ಸಂತೋಷದಿಂದ ನಿನ್ನ ಮುಂದೆ ನನ್ನನ್ನು ಪ್ರತಿಪಾದಿಸಿಕೊಳ್ಳುವೆನು.


ಮರುದಿನ, ಪೌಲನಿಗೆ ವಿರೋಧವಾಗಿ ಯೆಹೂದ್ಯರು ತಂದ ಆಪಾದನೆ ಏನೆಂದು ತಿಳಿದುಕೊಳ್ಳಲು ಸೇನಾಧಿಪತಿಯು ನಿರ್ಧರಿಸಿದನು. ಆದ್ದರಿಂದ ಅವನು ಮಹಾಯಾಜಕರಿಗೂ ಯೆಹೂದ್ಯರ ನ್ಯಾಯಸಭೆಯವರಿಗೂ ಒಟ್ಟಾಗಿ ಸೇರಿಬರಲು ಆಜ್ಞಾಪಿಸಿದನು. ಸೇನಾಧಿಪತಿಯು ಪೌಲನ ಸರಪಣಿಗಳನ್ನು ತೆಗೆದುಹಾಕಿ ಅವನನ್ನು ಹೊರಗೆ ಕರೆದುಕೊಂಡು ಬಂದು ಸಭೆಯ ಮುಂದೆ ನಿಲ್ಲಿಸಿದನು.


ನಾನು ಇವನನ್ನು ವಿಚಾರಣೆ ಮಾಡಿದಾಗ ಇವನಲ್ಲಿ ನನಗೆ ಯಾವ ತಪ್ಪೂ ಕಾಣಲಿಲ್ಲ. ಆದರೆ ಸೀಸರನಿಂದಲೇ ತನಗೆ ನ್ಯಾಯತೀರ್ಪಾಗಬೇಕೆಂದು ಇವನು ಕೇಳಿಕೊಂಡಿದ್ದಾನೆ. ಆದ್ದರಿಂದ ಇವನನ್ನು ರೋಮಿಗೆ ಕಳುಹಿಸಲು ನಾನು ತೀರ್ಮಾನಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು