Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:23 - ಪರಿಶುದ್ದ ಬೈಬಲ್‌

23 ಪೌಲನು ಮತ್ತು ಯೆಹೂದ್ಯರು ಸಭೆಸೇರಲು ಒಂದು ದಿನವನ್ನು ಗೊತ್ತುಮಾಡಿದರು. ಅಂದು ಇನ್ನೂ ಅನೇಕ ಮಂದಿ ಯೆಹೂದ್ಯರು ಪೌಲನ ಮನೆಯಲ್ಲಿ ಸಭೆಸೇರಿದರು. ಪೌಲನು ಬೆಳಗ್ಗೆಯಿಂದ ಸಂಜೆಯವರೆಗೂ ಅವರೊಂದಿಗೆ ಮಾತಾಡಿದನು; ದೇವರ ರಾಜ್ಯದ ಬಗ್ಗೆ ಅವರಿಗೆ ವಿವರಿಸಿದನು. ಯೇಸುವಿನ ವಿಷಯವಾದ ಸಂಗತಿಗಳಲ್ಲಿ ನಂಬಿಕೆ ಇಡುವಂತೆ ಅವರನ್ನು ಒಪ್ಪಿಸಲು ಪ್ರಯತ್ನಿಸಿದನು. ಇದಕ್ಕಾಗಿ ಅವನು ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಬಳಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವರು ಅವನಿಗೆ ಒಂದು ದಿವಸವನ್ನು ಗೊತ್ತುಮಾಡಲು ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗಿನಿಂದ ಸಾಯಂಕಾಲದವರೆಗೂ ದೇವರ ರಾಜ್ಯವನ್ನು ಕುರಿತು ಪ್ರಮಾಣವಾಗಿ ಸಾಕ್ಷಿಹೇಳುತ್ತಾ ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವರು ಒಂದು ದಿನ ಪೌಲನೊಂದಿಗಿರಲು ಏರ್ಪಡಿಸಿ, ಅವನಿದ್ದ ಸ್ಥಳಕ್ಕೆ ಬಹುಮಂದಿ ಕೂಡಿಬಂದರು. ಬೆಳಿಗ್ಗೆಯಿಂದ ಸಂಜೆಯವರೆಗೆ ಅವನು ದೇವರ ರಾಜ್ಯದ ಬಗ್ಗೆ ಖಚಿತವಾಗಿ ಸಾಕ್ಷಿ ಕೊಡುತ್ತಾ, ಮೋಶೆಯ ನಿಯಮ ಮತ್ತು ಪ್ರವಾದಿಗಳ ಗ್ರಂಥಗಳಿಂದ ಯೇಸುವಿನ ಬಗ್ಗೆ ವಿವರಿಸಿ ಅವರ ಮನವೊಲಿಸಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತಸೆ ಹೊವ್ನ್, ತೆನಿ ಪಾವ್ಲುಚ್ಯಾ ವಾಂಗ್ಡಾ ಬೈಟೆಕ್ ಕರುಕ್ ಎಕ್ ದಿಸ್ ಗೊತ್ತ್ ಕರ್‍ಲ್ಯಾನಿ, ಅನಿ ತ್ಯಾ ದಿಸಿ ಜುದೆವಾಂಚಿ ಲೊಕಾ ತಾಂಡೊ ಹೊವ್ನ್ ಗೊಳಾ ಹೊವ್ನ್ ಪಾವ್ಲುಚ್ಯಾ ಘರಾತ್ ಯೆಲಿ, ಸಕ್ಕಾಳಾಕ್ನಾ ರಾತ್ ಪತರ್ಬಿ ತೆನಿ ತೆಂಕಾ, ದೆವಾಚ್ಯಾ ರಾಜಾಚ್ಯಾ ವಿಶಯಾತ್ಲಿ ಬರಿ ಖಬರ್ ಸೊಡ್ಸುನ್ ಸಾಂಗ್ಲ್ಯಾನ್, ಅನಿ ಮೊಯ್ಜೆಚೆ ಖಾಯ್ದ್ಯಾಂಚೆ ಪುಸ್ತಕ್ ಅನಿ ಪ್ರವಾದ್ಯಾಂಚಿ ಬರ್ವನ್ಗಿ ವಾಪ್ರುನ್ ಜೆಜುಚ್ಯಾ ವಿಶಯಾತ್ ತೆಂಚೊ ಮನ್ ಪರ್ತುಕ್ ಕಟ್ಪಟ್ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:23
19 ತಿಳಿವುಗಳ ಹೋಲಿಕೆ  

ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.


ಅವನು ಜನರೆಲ್ಲರ ಮುಂದೆ ಯೆಹೂದ್ಯರ ವಿರುದ್ಧ ಬಹು ಬಲವಾಗಿ ವಾದಿಸಿ, ಪವಿತ್ರ ಗ್ರಂಥವನ್ನು ಆಧಾರವಾಗಿ ತೆಗೆದುಕೊಂಡು ಯೇಸುವೇ ಕ್ರಿಸ್ತನೆಂಬುದನ್ನು ಸ್ಪಷ್ಟವಾಗಿ ನಿರೂಪಿಸಿದನು.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಾನು ನಿರೀಕ್ಷಿಸಿಕೊಂಡಿರುವುದರಿಂದಲೇ ಈಗ ವಿಚಾರಣೆಗೆ ಗುರಿಯಾಗಿದ್ದೇನೆ.


ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು.


ಯೇಸು ಅವರಿಗೆ, “ನಾನು ಮೊದಲು ನಿಮ್ಮ ಸಂಗಡ ಇದ್ದುದನ್ನು ಜ್ಞಾಪಕಮಾಡಿಕೊಳ್ಳಿರಿ. ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿ ಪ್ರವಾದಿಗಳ ಗ್ರಂಥಗಳಲ್ಲಿ, ಕೀರ್ತನೆಗಳಲ್ಲಿ ಬರೆದಿರುವ ಪ್ರತಿಯೊಂದು ಸಂಗತಿಯೂ ನೆರವೇರಬೇಕಾಗಿದೆ ಎಂದು ನಾನು ಹೇಳಿದೆನು” ಅಂದನು.


ಪ್ರತಿ ಸಬ್ಬತ್‌ದಿನದಂದು ಪೌಲನು ಸಭಾಮಂದಿರದಲ್ಲಿ ಯೆಹೂದ್ಯರೊಂದಿಗೂ ಗ್ರೀಕರೊಂದಿಗೂ ಚರ್ಚಿಸುತ್ತಾ ಯೇಸುವಿನಲ್ಲಿ ನಂಬಿಕೆ ಇಡುವಂತೆ ಅವರನ್ನು ಪ್ರೋತ್ಸಾಹಿಸಿದನು.


ಯೇಸು, “ನನ್ನನ್ನು ಕಳುಹಿಸಿದಾತನು (ದೇವರು) ನಾನು ಏನು ಮಾಡಬೇಕೆಂದು ಬಯಸುವನೋ ಅದನ್ನು ಮಾಡುವುದೇ ನನಗೆ ಆಹಾರವಾಗಿದೆ. ಆತನು ನನಗೆ ಕೊಟ್ಟಿರುವ ಕೆಲಸವನ್ನು ಪೂರೈಸುವುದೇ ನನಗೆ ಆಹಾರವಾಗಿದೆ.


ಸಹೋದರಿಯಾದ ಅಪ್ಫಿಯಳಿಗೆ, ನಮ್ಮ ಜೊತೆಸೈನಿಕನಾದ ಅರ್ಖಿಪ್ಪನಿಗೆ ಮತ್ತು ಫಿಲೆಮೋನನ ಮನೆಯಲ್ಲಿ ಸೇರಿಬರುವ ಸಭೆಯವರೆಲ್ಲರಿಗೆ ಬರೆಯುವ ಪತ್ರ.


ಯೇಸುವು ಜನರಿಗೆ ಯಾವಾಗಲೂ ಸಾಮ್ಯಗಳ ಮೂಲಕ ಉಪದೇಶಿಸಿದನು. ಆದರೆ ತನ್ನ ಶಿಷ್ಯರು ಮಾತ್ರ ಇರುವಾಗ ಎಲ್ಲವನ್ನೂ ಅವರಿಗೆ ವಿವರಿಸಿ ತಿಳಿಸುತ್ತಿದ್ದನು.


ನನಗೆ ಐದು ಮಂದಿ ಸಹೋದರರಿದ್ದಾರೆ. ಅವರು ಈ ಯಾತನೆಯ ಸ್ಥಳಕ್ಕೆ ಬಾರದಂತೆ ಲಾಜರನು ಅವರನ್ನು ಎಚ್ಚರಿಸಲಿ’ ಎಂದು ಹೇಳಿದನು.


ಇದು ಆತನ ಮರಣಾನಂತರ ನಡೆದ ಸಂಗತಿ. ತಾನು ಜೀವಂತವಾಗಿರುವುದನ್ನು ಆತನು ಅಪೊಸ್ತಲರಿಗೆ ತೋರ್ಪಡಿಸಿದನು ಮತ್ತು ಶಕ್ತಿಯುತವಾದ ಅನೇಕ ಕಾರ್ಯಗಳನ್ನು ಮಾಡುವುದರ ಮೂಲಕ ಅದನ್ನು ನಿರೂಪಿಸಿದನು. ಯೇಸು ಜೀವಂತವಾಗಿ ಎದ್ದುಬಂದ ನಂತರದ ನಲವತ್ತು ದಿನಗಳ ಅವಧಿಯಲ್ಲಿ ಅಪೊಸ್ತಲರು ಆತನನ್ನು ಅನೇಕ ಸಲ ನೋಡಿದರು. ಯೇಸು ದೇವರ ರಾಜ್ಯದ ಕುರಿತು ಅಪೊಸ್ತಲರೊಂದಿಗೆ ಮಾತಾಡಿದನು.


ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು.


“ಆದರೆ ನಾನು ನಿನಗೆ ಹೇಳುವುದೇನೆಂದರೆ, ಯೇಸುವಿನ ಮಾರ್ಗದ ಹಿಂಬಾಲಕನಾದ ನಾನು ನಮ್ಮ ಪಿತೃಗಳ ದೇವರನ್ನು ಆರಾಧಿಸುತ್ತೇನೆ. ಯೇಸುವಿನ ಮಾರ್ಗವು ಸರಿಯಲ್ಲವೆಂದು ಯೆಹೂದ್ಯರು ಹೇಳುತ್ತಾರೆ. ಆದರೆ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಪುಸ್ತಕಗಳಲ್ಲಿಯೂ ಬರೆದಿರುವ ಪ್ರತಿಯೊಂದನ್ನು ನಾನು ನಂಬುತ್ತೇನೆ.


ದೇವರ ರಾಜ್ಯದ ಬಗ್ಗೆ ಬೋಧಿಸುತ್ತಿದ್ದನು; ಪ್ರಭು ಯೇಸುಕ್ರಿಸ್ತನ ಬಗ್ಗೆ ಉಪದೇಶಿಸುತ್ತಿದ್ದನು; ಬಹು ಧೈರ್ಯದಿಂದ ಮಾತಾಡುತ್ತಿದ್ದನು. ಅವನಿಗೆ ಅಡ್ಡಿಮಾಡಲು ಯಾರೂ ಪ್ರಯತ್ನಿಸಲಿಲ್ಲ.


ನಾನು ಇಳಿದುಕೊಳ್ಳಲು ಒಂದು ಕೊಠಡಿಯನ್ನು ದಯವಿಟ್ಟು ಸಿದ್ಧಗೊಳಿಸು. ದೇವರು ನಿನ್ನ ಪ್ರಾರ್ಥನೆಗಳನ್ನು ಕೇಳಿ ನನ್ನನ್ನು ನಿಮ್ಮ ಬಳಿಗೆ ಬರಲು ಅವಕಾಶ ನೀಡುವನೆಂಬ ಭರವಸೆ ನನಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು