ಅಪೊಸ್ತಲರ ಕೃತ್ಯಗಳು 28:28 - ಪರಿಶುದ್ದ ಬೈಬಲ್28 “ದೇವರು ತನ್ನ ರಕ್ಷಣೆಯನ್ನು ಯೆಹೂದ್ಯರಲ್ಲದವರಿಗೆ ಕಳುಹಿಸಿದ್ದಾನೆ. ಅವರು ಅದಕ್ಕೆ ಕಿವಿಗೊಡುವರು. ಯೆಹೂದ್ಯರಾದ ನಿಮಗೆ ಇದು ತಿಳಿದಿರಲಿ!” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 “ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಎಂದೇ ದೇವರಿಂದ ಬಂದಿರುವ ಜೀವ ಉದ್ಧಾರಕ ಸಂದೇಶವನ್ನು ಯೆಹೂದ್ಯೇತರರಿಗೆ ಕಳುಹಿಸಲಾಗಿದೆ. ಅವರು ಅದಕ್ಕೆ ಕಿವಿಗೊಡುವರು. ಇದು ನಿಮಗೆ ತಿಳಿದಿರಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆದಕಾರಣ ದೇವರಿಂದಾದ ಈ ರಕ್ಷಣೆಯು ಅನ್ಯಜನರಿಗೆ ಹೇಳಿಕಳುಹಿಸಲ್ಪಟ್ಟಿದೆ ಎಂದು ನಿಮಗೆ ಚೆನ್ನಾಗಿ ತಿಳಿದಿರಲಿ; ಅವರಾದರೂ ಕೇಳುವರು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 “ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಅನಿ ಪಾವ್ಲುನ್ ದೆವಾಚ್ಯಾ ರಾಕ್ವನಾಚಿ ಬರಿ ಖಬರ್ ಜುದೆವಾಂಚೆ ನ್ಹಯ್ ಹೊಲ್ಲ್ಯಾಕ್ನಿ ಸಾಟ್ನಿ ಧಾಡುನ್ ಹೊಲಾ ತೆನಿ ತೆ ಆಯ್ಕ್ ತಾತ್, ಹೆ ತುಮ್ಕಾ ಗೊತ್ತ್ ರ್‍ಹಾಂವ್ದಿತ್! ಮನುನ್ ಸಾಂಗುನ್ಗೆತ್ ಬೊಲ್ನೆ ಸಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ದೇವರು ತನ್ನನ್ನು ಸ್ವೀಕರಿಸಿಕೊಂಡಿದ್ದಾನೆಂಬುದನ್ನು ತೋರಿಸುವುದಕ್ಕಾಗಿ ಅಬ್ರಹಾಮನು ಅನಂತರ ಸುನ್ನತಿ ಮಾಡಿಸಿಕೊಂಡನು. ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವುದಕ್ಕಿಂತ ಮೊದಲೇ ನಂಬಿಕೆಯ ಮೂಲಕ ನೀತಿವಂತನಾಗಿದ್ದನು ಎಂಬುದಕ್ಕೆ ಅವನ ಸುನ್ನತಿಯೇ ಆಧಾರವಾಗಿದೆ. ಆದಕಾರಣ ನಂಬುವ ಎಲ್ಲಾ ಜನರಿಗೆ, ಅವರು ಸುನ್ನತಿ ಮಾಡಿಸಿಕೊಂಡಿಲ್ಲದಿದ್ದರೂ ಅಬ್ರಹಾಮನು ತಂದೆಯಾಗಿದ್ದಾನೆ. ಏಕೆಂದರೆ ಅವರು ತಮ್ಮ ನಂಬಿಕೆಯ ಮೂಲಕ ನೀತಿವಂತರೆಂದು ಎಣಿಸಲ್ಪಡುವರು.
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!