ಅಪೊಸ್ತಲರ ಕೃತ್ಯಗಳು 28:9 - ಪರಿಶುದ್ದ ಬೈಬಲ್9 ಇದಾದ ನಂತರ ದ್ವೀಪದಲ್ಲಿದ್ದ ಇತರ ರೋಗಿಗಳೆಲ್ಲ ಪೌಲನ ಬಳಿಗೆ ಬಂದರು. ಪೌಲನು ಅವರನ್ನು ಸಹ ಗುಣಪಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಾದ, ನಂತರ ಆ ದ್ವೀಪದಲ್ಲಿದ್ದ ಉಳಿದ ರೋಗಿಗಳು, ಪೌಲನ ಬಳಿಗೆ ಬಂದು ಸ್ವಸ್ಥರಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇದಾದ ನಂತರ ದ್ವೀಪದಲ್ಲಿದ್ದ ಮಿಕ್ಕರೋಗಿಗಳೂ ಬಂದು ಪೌಲನಿಂದ ಆರೋಗ್ಯವನ್ನು ಪಡೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಾದ ಮೇಲೆ ಆ ದ್ವೀಪದಲ್ಲಿದ್ದ ವಿುಕ್ಕಾದ ರೋಗಿಗಳು ಅವನ ಬಳಿಗೆ ಬಂದು ಸ್ವಸ್ಥರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಹೀಗಾದ ತರುವಾಯ ಆ ದ್ವೀಪದಲ್ಲಿಯೇ ಉಳಿದ ರೋಗಿಗಳು ಸಹ ಬಂದು ಗುಣಹೊಂದಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಹೆ ಹೊಲ್ಲ್ಯಾ ಮಾನಾ ದ್ವಿಪಾತ್ಲಿ ಹುರಲ್ಲಿ ಬರೆ ನತ್ತಿ ಲೊಕಾಬಿ ಪಾವ್ಲುಕ್ಡೆ ಯೆಲಿ, ಪಾವ್ಲುನ್ ತೆಂಕಾಬಿ ಗುನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.
ಆ ದ್ವೀಪ ನಿವಾಸಿಗಳು ನಮ್ಮನ್ನು ಬಹಳವಾಗಿ ಸನ್ಮಾನಿಸಿದರು. ನಾವು ಅಲ್ಲಿ ಮೂರು ತಿಂಗಳಿದ್ದೆವು. ನಾವು ಅಲ್ಲಿಂದ ಹೊರಡಲು ಸಿದ್ಧರಾದಾಗ ಅವರು ನಮಗೆ ಬೇಕಾದ ವಸ್ತುಗಳನ್ನು ಕೊಟ್ಟರು. ಅಲೆಕ್ಸಾಂಡ್ರಿಯ ಪಟ್ಟಣದಿಂದ ಬಂದ ಹಡಗೊಂದನ್ನು ನಾವು ಹತ್ತಿದೆವು. ಆ ಹಡಗು ಚಳಿಗಾಲದ ನಿಮಿತ್ತ ಮಾಲ್ಟ ದ್ವೀಪದಲ್ಲೇ ತಂಗಿತ್ತು. ಆ ಹಡಗಿನ ಮುಂಭಾಗದಲ್ಲಿ ಎರಡು ಗ್ರೀಕ್ ದೇವತೆಗಳ ಚಿಹ್ನೆಯಿತ್ತು.