ಅಪೊಸ್ತಲರ ಕೃತ್ಯಗಳು 3:12 - ಪರಿಶುದ್ದ ಬೈಬಲ್12 ಆಗ ಪೇತ್ರನು ಅವರಿಗೆ, “ನನ್ನ ಯೆಹೂದ್ಯ ಸಹೋದರರೇ, ಇದನ್ನು ಕಂಡು ನೀವು ಯಾಕೆ ಆಶ್ಚರ್ಯಗೊಂಡಿರುವಿರಿ? ಈ ಮನುಷ್ಯನನ್ನು ನಡೆಯುವಂತೆ ಮಾಡಿದ್ದು ನಮ್ಮ ಶಕ್ತಿಯೆಂದು ನೀವು ನಮ್ಮನ್ನು ನೋಡುತ್ತಿರುವಿರಾ? ನಾವು ಒಳ್ಳೆಯವರಾಗಿರುವುದರಿಂದ ಈ ಕಾರ್ಯವಾಯಿತೆಂದು ಭಾವಿಸಿಕೊಂಡಿದ್ದೀರಾ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪೇತ್ರನು ಇದನ್ನು ನೋಡಿ ಜನರಿಗೆ; “ಇಸ್ರಾಯೇಲ್ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನೀವು ನಮ್ಮನೇಕೆ ಈ ರೀತಿ ದೃಷ್ಟಿಯಿಟ್ಟು ನೋಡುತ್ತಿದ್ದಿರಿ? ನಾವು ನಮ್ಮ ಸ್ವಂತ ಶಕ್ತಿಯಿಂದಾಗಲಿ, ನಮ್ಮ ದೈವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಪೇತ್ರನು ಇದನ್ನು ನೋಡಿ ಜನರಿಗೆ - ಇಸ್ರಾಯೇಲ್ ಜನರೇ, ನೀವು ಯಾಕೆ ಇದಕ್ಕೆ ಆಶ್ಚರ್ಯಪಡುತ್ತೀರಿ? ನೀವು ನಮ್ಮ ಮೇಲೆ ದೃಷ್ಟಿಯಿಟ್ಟು ನೋಡುವದೇನು? ನಾವು ಸ್ವಂತ ಶಕ್ತಿಯಿಂದಾಗಲಿ ದೇವಭಕ್ತಿಯಿಂದಾಗಲಿ ಇವನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಬೇಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನರನ್ನು ಕಂಡು ಪೇತ್ರನು ಅವರಿಗೆ ಹೇಳಿದ ಮಾತುಗಳಿವು: “ಇಸ್ರಾಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮ ಸ್ವಂತ ಬಲದಿಂದಾಗಲಿ, ಭಕ್ತಿಯಿಂದಾಗಲಿ ಈ ಮನುಷ್ಯನನ್ನು ನಡೆಯುವಂತೆ ಮಾಡಿದೆವೆಂದು ಭಾವಿಸಿ ನಮ್ಮ ಕಡೆಗೆ ಏಕೆ ನೋಡುತ್ತಿರುವಿರಿ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಮಾನಾ ಪೆದ್ರುನ್ ತ್ಯಾ ಲೊಕಾಕ್ನಿ ಬಗುನ್ ಮಾಜ್ಯಾ ಇಸ್ರಾಯೆಲಾಂಚ್ಯಾ ಲೊಕಾನು ಹೆ ಬಗುನ್ ತುಮಿ ಕಶ್ಯಾಕ್ ಅಜಾಪ್ ಹೊತ್ತ್ಯಾಶಿ? ಹೊ ಚಲುಲಾಗಲೆ ಮಾಜ್ಯಾ ತಾಕ್ತಿನ್ ಮಿಯಾ ಕರ್‍ಲಾ ಮನುನ್ ಬಗುಲ್ಯಾಸಿ ಕಾಯ್? ಅಮಿ ಬರೆ ಪಾನಾನ್ ಹೊತ್ಯಾಕ್ ಹಿ ಕಾಮಾ ಹೊವ್ಲಾತ್ ಮನುನ್ ಚಿಂತುಲ್ಲ್ಯಾಸಿ ಕಾಯ್? ಅಧ್ಯಾಯವನ್ನು ನೋಡಿ |
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.