ಅಪೊಸ್ತಲರ ಕೃತ್ಯಗಳು 3:13 - ಪರಿಶುದ್ದ ಬೈಬಲ್13 ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಪಿತಾಮಹ ಅಬ್ರಹಾಮ, ಇಸಾಕ ಮತ್ತು ಯಕೋಬರ ದೇವರು, ಅಂದರೆ ನಮ್ಮ ಪೂರ್ವಜರ ದೇವರು, ತಮ್ಮ ದಾಸ ಯೇಸುವಿನ ಮಹಿಮೆಯನ್ನು ಬೆಳಗಿಸಿದ್ದಾರೆ. ನೀವಾದರೋ ಅವರನ್ನು ಅಧಿಕಾರಿಗಳ ಕೈಗೊಪ್ಪಿಸಿದಿರಿ. ರಾಜ್ಯಪಾಲ ಪಿಲಾತನು ಅವರನ್ನು ಬಿಡುಗಡೆಮಾಡಲು ನಿರ್ಧರಿಸಿದಾಗ ಕೂಡ ಅವನ ಸಮ್ಮುಖದಲ್ಲೇ ಅವರನ್ನು ಧಿಕ್ಕರಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ ಆತನನ್ನು ಬೇಡವೆಂದಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಬ್ರಹಾಮನ, ಇಸಾಕನ, ಯಾಕೋಬನ ದೇವರು, ನಮ್ಮ ಪಿತೃಗಳ ದೇವರು, ತಮ್ಮ ಸೇವಕರಾದ ಯೇಸುವನ್ನು ಮಹಿಮೆಪಡಿಸಿದ್ದಾರೆ. ಅವರನ್ನು ಬಿಡಿಸಬೇಕೆಂದು ಪಿಲಾತನು ನಿರ್ಣಯಿಸಿಕೊಂಡಿದ್ದರೂ ನೀವು ಯೇಸುವನ್ನು ಕೊಲ್ಲುವುದಕ್ಕೆ ಒಪ್ಪಿಸಿಕೊಟ್ಟು ಪಿಲಾತನ ಮುಂದೆ ಅವರನ್ನು ನಿರಾಕರಿಸಿದಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅಬ್ರಾಹಾಮಾಚೊ, ಇಸಾಕಾಚೊ, ಅನಿ ಜಾಕೊಬಾಚೊ ದೆವ್ ತೊಚ್ ಅನಿ ಅಮ್ಚ್ಯಾ ಪುರ್ವಜ್ಯಾಂಚೊ ಸಗ್ಳ್ಯಾಂಚೊ ದೆವ್, ತೆನಿ ಅಪ್ಲೊ ಸೆವಕ್ ಜೆಜುಚಿ ಮಹಿಮಾ ಹೊಯ್ ಸಾರ್ಕೆ ಕರ್‍ಲಾ, ತಸೆ ಹೊಲ್ಯಾರ್ಬಿ ತುಮಿ ಜೆಜುಕ್ ಜಿವಾನಿ ಮಾರುಕ್ ಪಿಲಾತಾಕ್ಡೆ ಒಪ್ಸುನ್ ದಿಲ್ಯಾಸಿ ಪಿಲಾತಾನ್ ತೆಕಾ ಸೊಡುಚೆ ಮನುನ್ ತುಮ್ಚ್ಯಾಕ್ಡೆ ಬೊಲ್ಯಾರ್ಬಿ ತುಮಿ ತೆಕಾ ಸೊಡ್ಸುಕ್ ಅವಕಾಸ್ ದಿವ್ಕನ್ಯಾಸಿ. ಅಧ್ಯಾಯವನ್ನು ನೋಡಿ |