Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 3:17 - ಪರಿಶುದ್ದ ಬೈಬಲ್‌

17 “ಸಹೋದರರೇ, ನೀವು ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನನಗೆ ಗೊತ್ತಿದೆ. ನಿಮ್ಮ ನಾಯಕರು ಸಹ ಅರ್ಥಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಸಹೋದರರೇ, ನೀವೂ ನಿಮ್ಮ ಅಧಿಕಾರಿಗಳೂ ತಿಳಿಯದೆ ಯೇಸುವಿಗೆ ಹೀಗೆ ಮಾಡಿದಿರೆಂದು ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ತಿಳಿಯದೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಈಗ, ಪ್ರಿಯರೇ, ನೀವು ಅಜ್ಞಾನದಿಂದ ಹಾಗೆ ವರ್ತಿಸಿದಿರೆಂದು ನನಗೆ ಗೊತ್ತು. ಹಾಗೆಯೇ ನಿಮ್ಮ ನಾಯಕರೂ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ಮಾಜ್ಯಾ ಭಾವಾನೊ ಅನಿ ಭೆನಿಯಾನೊ, ತುಮ್ಕಾ ಕಳಿಸ್ತಾನಾ ಅಶೆ ಕರ್ಲ್ಯಾಸಿ ಮನ್ತಲೆ ಮಾಕಾ ಗೊತ್ತ್ ಹಾಯ್, ತುಮ್ಚ್ಯಾ ಮೊಟ್ಯಾ ಮಾನ್ಸಾನಿಬಿ ಜೆಜುಕ್ ತಿರಸ್ಕಾರ್ ಕರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 3:17
23 ತಿಳಿವುಗಳ ಹೋಲಿಕೆ  

ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.


ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಹೂದ್ಯರು ಮತ್ತು ಯೆಹೂದ್ಯನಾಯಕರು ಯೇಸುವೇ ರಕ್ಷಕನೆಂಬುದನ್ನು ಅರ್ಥಮಾಡಿಕೊಳ್ಳಲಿಲ್ಲ. ಪ್ರವಾದಿಗಳು ಯೇಸುವಿನ ಬಗ್ಗೆ ಬರೆದಿದ್ದ ಮಾತುಗಳನ್ನು ಪ್ರತಿ ಸಬ್ಬತ್‌ದಿನದಂದು ಓದಲಾಗುತ್ತಿತ್ತು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ. ಆ ಯೆಹೂದ್ಯರು ಯೇಸುವನ್ನು ಅಪರಾಧಿಯೆಂದು ತೀರ್ಪುಮಾಡಿದರು. ಹೀಗೆ ಮಾಡುವುದರ ಮೂಲಕವಾಗಿ ಅವರು ಪ್ರವಾದಿಗಳ ನುಡಿಗಳನ್ನು ನೆರವೇರಿಸಿದರು!


ಈ ಲೋಕದ ಯಾವ ಅಧಿಪತಿಗಳೂ ಈ ಜ್ಞಾನವನ್ನು ಅರ್ಥಮಾಡಿಕೊಳ್ಳಲಿಲ್ಲ. ಅವರು ಅರ್ಥಮಾಡಿಕೊಂಡಿದ್ದರೆ, ಮಹಿಮೆಯುಳ್ಳ ಪ್ರಭುವನ್ನು ಶಿಲುಬೆಗೇರಿಸುತ್ತಿರಲಿಲ್ಲ.


ಜನರು ತಂದೆಯನ್ನು ಮತ್ತು ನನ್ನನ್ನು ತಿಳಿದಿಲ್ಲದ ಕಾರಣ ಇವುಗಳನ್ನು ಮಾಡುವರು.


ಮೊದಲು, ನಾನು ಕ್ರಿಸ್ತನ ವಿರುದ್ಧ ಮಾತನಾಡಿದ್ದೆನು. ಆತನನ್ನು ಹಿಂಸಿಸಿದ್ದೆನು. ಆತನಿಗೆ ನೋವಾಗುವಂಥ ಕಾರ್ಯಗಳನ್ನು ಮಾಡಿದ್ದೆನು. ಆದರೆ ನಾನೇನು ಮಾಡುತ್ತಿದ್ದೇನೆಂಬುದು ನನಗೆ ತಿಳಿದಿರಲಿಲ್ಲವಾದ್ದರಿಂದ ದೇವರು ನನಗೆ ಕರುಣೆ ತೋರಿದನು. ನಂಬದಿರುವಾಗ ನಾನು ಅವುಗಳನ್ನು ಮಾಡಿದೆನು.


ಆದರೆ ಅವರ ಬುದ್ಧಿಗೆ ಮಂಕು ಕವಿದಿದ್ದರಿಂದ ಅವರು ಅರ್ಥಮಾಡಿಕೊಳ್ಳಲಾಗಲಿಲ್ಲ. ಅವರು ಹಳೆ ಒಡಂಬಡಿಕೆಯನ್ನು ಓದುವಾಗ ಇಂದಿಗೂ ಅದೇ ಮುಸುಕು ಅರ್ಥವನ್ನು ಮರೆಮಾಡುತ್ತದೆ. ಆ ಮುಸುಕನ್ನು ತೆಗೆದು ಹಾಕಲಿಲ್ಲ. ಏಕೆಂದರೆ ಕ್ರಿಸ್ತನ ಮೂಲಕವಾಗಿ ಮಾತ್ರ ಅದು ತೆಗೆದುಹಾಕಲ್ಪಡುತ್ತದೆ.


ಇಸ್ರೇಲರು ಹುಟ್ಟುವುದಕ್ಕಿಂತ ಮೊದಲೇ ದೇವರು ಅವರನ್ನು ತನ್ನ ಜನರನ್ನಾಗಿ ಆರಿಸಿಕೊಂಡನು. ಆತನು ಅವರನ್ನು ಹೊರಕ್ಕೆ ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಪವಿತ್ರ ಗ್ರಂಥವು ಏನು ಹೇಳುತ್ತದೆ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ಇಸ್ರೇಲಿನ ಜನರ ವಿರೋಧವಾಗಿ ಎಲೀಯನು ದೇವರಿಗೆ ಮಾಡಿದ ಪ್ರಾರ್ಥನೆಯ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿದೆ.


“ನಾನು ಫರಿಸಾಯನಾಗಿದ್ದಾಗ ನಜರೇತಿನ ಯೇಸುವಿನ ಹೆಸರಿಗೆ ವಿರೋಧವಾಗಿ ಅನೇಕ ಕಾರ್ಯಗಳನ್ನು ಮಾಡಬೇಕೆಂದು ಆಲೋಚಿಸಿಕೊಂಡೆನು.


ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’ ಎಂದರು.


ಯೆಹೂದ್ಯನಾಯಕರು, “ನೀನೂ ಗಲಿಲಾಯದವನೋ? ಪವಿತ್ರ ಗ್ರಂಥವನ್ನು ಅಧ್ಯಯನಮಾಡು. ಗಲಿಲಾಯದಿಂದ ಯಾವ ಪ್ರವಾದಿಯೂ ಬರುವುದಿಲ್ಲವೆಂಬುದು ಆಗ ನಿನಗೆ ತಿಳಿಯುತ್ತದೆ” ಎಂದು ಉತ್ತರಕೊಟ್ಟರು.


ಆದ್ದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನಕ್ಕೆ ಶಾಪಕೊಡಬೇಕು, ಯಾಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ಈ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.


ಬಹಳ ಸಮಯ ದಾಟಿಹೋದರೂ ಮೋಶೆ ಬೆಟ್ಟದಿಂದ ಕೆಳಗಿಳಿಯಲಿಲ್ಲವಾದ್ದರಿಂದ ಇಸ್ರೇಲರು ಆರೋನನ ಬಳಿಗೆ ಒಟ್ಟಾಗಿ ಬಂದು, “ನೋಡು, ಮೋಶೆಯು ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದನು. ಆದರೆ ಅವನಿಗೇನಾಯಿತೋ ನಮಗೆ ತಿಳಿಯದು. ಆದ್ದರಿಂದ ನಮ್ಮನ್ನು ಮುನ್ನಡೆಸಲು ಕೆಲವು ದೇವರುಗಳನ್ನು ಮಾಡಿಕೊಡು” ಎಂದು ಹೇಳಿದರು.


ಯೋಸೇಫನು ಅವರಿಗೆ, “ನೀವು ಹೀಗೇಕೆ ಮಾಡಿದಿರಿ? ನಾನು ಶಕುನ ನೋಡಿ ರಹಸ್ಯಗಳನ್ನು ತಿಳಿದುಕೊಳ್ಳಬಲ್ಲೆನೆಂಬುದು ನಿಮಗೆ ಗೊತ್ತಿರಲಿಲ್ಲವೇ?” ಎಂದು ಕೇಳಿದನು.


ಆದರೆ ಯೋಸೇಫನು ತಿರಸ್ಕರಿಸಿದನು. ಅವನು, “ನನ್ನ ಧಣಿಯು ಈ ಮನೆಯ ಜವಾಬ್ದಾರಿಕೆಗಳನ್ನೆಲ್ಲಾ ನನಗೆ ವಹಿಸಿ ನಿಶ್ಚಿಂತೆಯಿಂದಿದ್ದಾನೆ.


ಅದಕ್ಕೆ ಅಬೀಮೆಲೆಕನು, “ಅದನ್ನು ಯಾರು ಮಾಡಿದರೋ ನನಗೆ ಗೊತ್ತಿಲ್ಲ. ಇಂದಿನವರೆಗೂ ನೀನು ಇದನ್ನು ನನಗೆ ಹೇಳಲೇ ಇಲ್ಲ” ಎಂದು ಹೇಳಿದನು.


ನಾನು ಜೀವದಿಂದಿದ್ದರೆ ಫಲಫಲಿಸುವ ಕೆಲಸ ನನಗಿರುತ್ತದೆ. ಆದರೆ ನಾನು ಸಾಯಬೇಕೇ? ಅಥವಾ ಬದುಕಬೇಕೇ? ಏನನ್ನು ಆರಿಸಿಕೊಳ್ಳಬೇಕೋ ನನಗೆ ಗೊತ್ತಿಲ್ಲ.


ಪಿಲಾತನು ಮಹಾಯಾಜಕರನ್ನೂ ಯೆಹೂದ್ಯನಾಯಕರನ್ನೂ ಇತರ ಜನರನ್ನೂ ಒಟ್ಟಾಗಿ ಕರೆಸಿ,


ಜನರು ನನ್ನ ದೆಸೆಯಿಂದ ಇದನ್ನೆಲ್ಲಾ ನಿಮಗೆ ಮಾಡುವರು. ನನ್ನನ್ನು ಕಳುಹಿಸಿದಾತನನ್ನು ಅವರು ತಿಳಿದಿಲ್ಲ.


“ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.


ಯೆಹೂದ್ಯರು ಪೌಲನಿಗೆ, “ನಿನ್ನ ಬಗ್ಗೆ ಜುದೇಯದಿಂದ ನಮಗೆ ಯಾವ ಪತ್ರಗಳೂ ಬಂದಿಲ್ಲ. ಅಲ್ಲಿಂದ ಪ್ರಯಾಣ ಮಾಡಿ ಬಂದ ನಮ್ಮ ಯೆಹೂದ್ಯ ಸಹೋದರರಲ್ಲಿ ಯಾರೂ ನಿನ್ನ ಬಗ್ಗೆ ಸುದ್ದಿಯನ್ನು ತರಲಿಲ್ಲ ಮತ್ತು ಕೆಟ್ಟದ್ದನ್ನು ಹೇಳಲಿಲ್ಲ. ನಿನ್ನ ಆಲೋಚನೆಗಳನ್ನು ನಾವು ಕೇಳಬಯಸುತ್ತೇವೆ. ಎಲ್ಲಾ ಕಡೆಗಳಲ್ಲಿರುವ ಜನರು ಈ ಗುಂಪಿನ (ಕ್ರೈಸ್ತರ) ವಿರೋಧವಾಗಿ ಮಾತಾಡುತ್ತಿದ್ದಾರೆ ಎಂಬುದು ನಮಗೆ ಗೊತ್ತಿದೆ” ಎಂದು ಹೇಳಿದರು.


ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು