ಅಪೊಸ್ತಲರ ಕೃತ್ಯಗಳು 3:2 - ಪರಿಶುದ್ದ ಬೈಬಲ್2 ಅವರು ದೇವಾಲಯಕ್ಕೆ ಹೋಗುತ್ತಿದ್ದಾಗ ಅಲ್ಲೊಬ್ಬ ಹುಟ್ಟುಕುಂಟನಿದ್ದನು. ಅವನಿಗೆ ನಡೆಯಲಾಗುತ್ತಿರಲಿಲ್ಲ. ಆದ್ದರಿಂದ ಅವನ ಕೆಲವು ಸ್ನೇಹಿತರು ಅವನನ್ನು ಪ್ರತಿದಿನ ದೇವಾಲಯಕ್ಕೆ ಹೊತ್ತುಕೊಂಡು ಬಂದು, ದೇವಾಲಯದ ಹೊರ ಬಾಗಿಲುಗಳ ಒಂದರ ಸಮೀಪದಲ್ಲಿ ಕುಳ್ಳಿರಿಸುತ್ತಿದ್ದರು. ಆ ಬಾಗಿಲಿನ ಹೆಸರು “ಸುಂದರ ದ್ವಾರ.” ಅವನು ದೇವಾಲಯಕ್ಕೆ ಹೋಗುವ ಜನರಿಂದ ಭಿಕ್ಷೆ ಬೇಡುತ್ತಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಲ್ಲಿ ಹುಟ್ಟು ಕುಂಟನಾಗಿದ್ದ ಒಬ್ಬ ಮನುಷ್ಯನನ್ನು ಕೆಲವರು ಹೊತ್ತುಕೊಂಡು ಬಂದರು; ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವುದಕ್ಕಾಗಿ ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ಅವನನ್ನು ಪ್ರತಿದಿನ ಕೂರಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ಸುಂದರದ್ವಾರ’ ಎಂದು ಕರೆಯಲಾದ ಬಾಗಿಲ ಬಳಿ ಹುಟ್ಟುಕುಂಟನೊಬ್ಬ ಇದ್ದನು. ಅವನನ್ನು ಪ್ರತಿದಿನ ಹೊತ್ತುತಂದು ಈ ದ್ವಾರದ ಬಳಿ ಬಿಡಲಾಗುತ್ತಿತ್ತು. ಅವನು ದೇವಾಲಯಕ್ಕೆ ಬರುತ್ತಿದ್ದ ಜನರಿಂದ ಭಿಕ್ಷೆಬೇಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ದೇವಾಲಯದೊಳಕ್ಕೆ ಹೋಗುವವರಿಂದ ಭಿಕ್ಷೆಬೇಡುವದಕ್ಕಾಗಿ ಅವನನ್ನು ದೇವಾಲಯದ ಸುಂದರದ್ವಾರವೆಂಬ ಬಾಗಿಲಿನಲ್ಲಿ ದಿನಾಲು ಕೂಡ್ರಿಸುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದೇವಾಲಯದೊಳಗೆ ಹೋಗುವವರಿಂದ ಭಿಕ್ಷೆ ಬೇಡಲು ಪ್ರತಿದಿನ “ಸುಂದರದ್ವಾರ” ಎಂದು ಕರೆಯಲಾಗುತ್ತಿದ್ದ ದೇವಾಲಯದ ದ್ವಾರದ ಬಳಿಯಲ್ಲಿ ಹುಟ್ಟುಕುಂಟನೊಬ್ಬನನ್ನು ಕೆಲವರು ಹೊತ್ತುಕೊಂಡು ಬಂದು ಬಿಡುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಎಕ್ ಜಲ್ಮಿ ಸೊಟ್ಟೊ ಹೊತ್ತೊ ತೆಜ್ಯಾಕ್ಡೆ ಚಲುಕ್ ಹೊಯ್ನಶಿ, ತೆಸೆ ಹೊವ್ನ್ ತೆಚಿ ವಾಂಗ್ಡಿ ಲೊಕಾ ತೆಕಾ ಸದ್ದಿ ಉಕ್ಲುನ್ ಘೆವ್ನ್ ಜಾವ್ನ್ ಭಿಕ್ ಮಾಗುಸಾಟಿ ತೆಕಾ ಸುದಂರ್ ದ್ವಾರ್ ಮನ್ತಲ್ಯಾ ದಡ್ಪ್ಯಾಕ್ಡೆ ಬಸ್ವುನ್ ಥೈಯ್ತ್, ತೊ ಸೊಟ್ಟೊ ತ್ಯಾ ದಡ್ಪ್ಯಾಕ್ಡೆ ಬಸುನ್ ದೆವಾಚ್ಯಾ ಗುಡಿತ್ ಜಾಯ್ತ್ ಯೆತಲ್ಯಾಂಚ್ಯಾಕ್ಡೆ ಭಿಕ್ ಮಾಗುನ್ಗೆತ್ ಹೊತ್ತೊ. ಅಧ್ಯಾಯವನ್ನು ನೋಡಿ |