ಅಪೊಸ್ತಲರ ಕೃತ್ಯಗಳು 3:21 - ಪರಿಶುದ್ದ ಬೈಬಲ್21 “ಆದರೆ ಎಲ್ಲವನ್ನು ಸರಿಪಡಿಸುವ ಕಾಲ ಬರುವ ತನಕ ಯೇಸು ಪರಲೋಕದಲ್ಲೇ ಇರಬೇಕು. ದೇವರು ಬಹುಕಾಲದ ಹಿಂದೆ ತನ್ನ ಪವಿತ್ರ ಪ್ರವಾದಿಗಳ ಸಂದೇಶದ ಮೂಲಕ ಮಾತಾಡಿದಾಗ, ಈ ಕಾಲದ ಬಗ್ಗೆ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಮುಖಾಂತರ ಹೇಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸಮಸ್ತವನ್ನೂ ಪುನರ್‍ಸ್ಥಾಪನೆಗೊಳಿಸುವವರೆಗೆ ಕ್ರಿಸ್ತಯೇಸು ಸ್ವರ್ಗದಲ್ಲಿಯೇ ಇರಬೇಕಾಗಿದೆ. ಇದನ್ನು ದೇವರು ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲಕ್ಕೆ ಹಿಂದೆಯೇ ಪ್ರಕಟಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ಸಮಸ್ತವನ್ನು ಸರಿಮಾಡುವ ಕಾಲವು ಬರುವ ತನಕ ಪರಲೋಕವೇ ಆ ಕ್ರಿಸ್ತನ ಸ್ಥಾನವಾಗಿರಬೇಕು. ಆ ಕಾಲದ ವಿಷಯವಾಗಿ ದೇವರು ಪೂರ್ವದಲ್ಲಿದ್ದ ತನ್ನ ಪರಿಶುದ್ಧ ಪ್ರವಾದಿಗಳ ಬಾಯಿಂದ ಹೇಳಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರು ತಮ್ಮ ಪವಿತ್ರ ಪ್ರವಾದಿಗಳ ಮುಖಾಂತರ ಬಹುಕಾಲದ ಹಿಂದೆಯೇ ವಾಗ್ದಾನಮಾಡಿದ ಪ್ರಕಾರ, ಅವರು ಸಮಸ್ತವನ್ನು ಪುನಃಸ್ಥಾಪಿಸಿದರು. ಆ ಕಾಲ ಬರುವವರೆಗೆ ಕ್ರಿಸ್ತ ಯೇಸು ಪರಲೋಕದಲ್ಲಿಯೇ ಇರುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ಸಗ್ಳ್ಯೆಬಿ ಸಮಾ ಕರ್‍ತಲೊ ಎಳ್ ಯೆಯ್ ಪತರ್ ಜೆಜು ಸರ್‍ಗಾತುಚ್ ರ್‍ಹಾವ್ಚೊ ಮನುನ್ ದೆವಾನ್ ಅಪ್ಲ್ಯಾ ಪವಿತ್ರ್ ಪ್ರವಾದ್ಯಾಂಚ್ಯಾ ಬರ್‍ಯಾ ಖಬ್ರಿಯಾತ್ನಿ ಸಾಂಗಲ್ಲ್ಯಾನ್ . ಅಧ್ಯಾಯವನ್ನು ನೋಡಿ |