ಅಪೊಸ್ತಲರ ಕೃತ್ಯಗಳು 3:26 - ಪರಿಶುದ್ದ ಬೈಬಲ್26 ದೇವರು ತನ್ನ ವಿಶೇಷ ಸೇವಕನನ್ನು (ಯೇಸುವನ್ನು) ಮೊಟ್ಟಮೊದಲು ನಿಮ್ಮ ಬಳಿಗೆ ಕಳುಹಿಸಿದನು. ನಿಮ್ಮನ್ನು ಆಶೀರ್ವದಿಸುವುದಕ್ಕಾಗಿ ದೇವರು ಯೇಸುವನ್ನು ಕಳುಹಿಸಿದನು. ಆತನು ನಿಮ್ಮನ್ನು ನಿಮ್ಮ ಕೆಟ್ಟಕಾರ್ಯಗಳಿಂದ ದೂರಮಾಡಿ ಆಶೀರ್ವದಿಸುತ್ತಾನೆ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಪ್ರತಿಷ್ಠೆಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅಂತೆಯೇ, ಅವರು ತಮ್ಮ ದಾಸನನ್ನು ಎಬ್ಬಿಸಿದ್ದಾರೆ. ನಿಮ್ಮೆಲ್ಲರನ್ನು ದುರ್ಮಾರ್ಗದಿಂದ ದೂರಮಾಡಿ ಧನ್ಯರಾಗಿಸಲು ಅವರನ್ನು ಮೊತ್ತಮೊದಲು ನಿಮ್ಮಲ್ಲಿಗೆ ಕಳುಹಿಸಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮೊದಲು ನಿಮಗಾಗಿಯೇ ದೇವರು ತನ್ನ ಸೇವಕನನ್ನು ಏರ್ಪಡಿಸಿ ಈತನು ನಿಮ್ಮಲ್ಲಿ ಪ್ರತಿಯೊಬ್ಬನನ್ನು ಅವನವನ ಕೆಟ್ಟ ನಡತೆಗಳಿಂದ ತಿರುಗಿಸಿ ನಿಮ್ಮನ್ನು ಆಶೀರ್ವದಿಸಬೇಕೆಂದು ಆತನನ್ನು ಕಳುಹಿಸಿಕೊಟ್ಟಿದ್ದಾನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ದೇವರು ತಮ್ಮ ಸೇವಕರಾದ ಯೇಸುವನ್ನು ಜೀವಂತವಾಗಿ ಎಬ್ಬಿಸಿದಾಗ, ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ದುರ್ಮಾರ್ಗಗಳಿಂದ ತಿರುಗಿಸಿ ನಿಮ್ಮನ್ನು ಮೊಟ್ಟಮೊದಲು ಆಶೀರ್ವದಿಸಲು ಯೇಸುವನ್ನು ನಿಮ್ಮ ಬಳಿಗೆ ಕಳುಹಿಸಿದರು.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ದೆವಾನ್ ಮುಖ್ಯ್ ಸೆವಕ್ ಅದ್ದಿಚ್ಯಾ ಅದ್ದಿ ಮರ್ನಾಕ್ನಾ ಉಟ್ವುನ್ ತುಮ್ಕಾ ಆಶಿರ್ವಾದ್ ದಿವ್ಕ್ ಸಾಟ್ನಿ, ತುಮ್ಚ್ಯಾಕ್ಡೆ ಧಾಡುನ್ ದಿಲ್ಯಾನ್, ತೊ ತುಮ್ಚ್ಯಾ ಬುರ್ಶಾ ಕಾಮಾತ್ನಾ ದುರ್ ಕರುನ್ ತುಮ್ಕಾ ಆಶಿರ್ವಾದ್ ದಿತಾ. ಅಧ್ಯಾಯವನ್ನು ನೋಡಿ |
ನಾನು ಜನರಿಗೆ, ‘ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಿರಿ’ ಎಂತಲೂ ಅವರಿಗಾಗಿರುವ ಮಾನಸಾಂತರವನ್ನು ಯೋಗ್ಯವಾದ ಕಾರ್ಯಗಳ ಮೂಲಕ ತೋರ್ಪಡಿಸಬೇಕೆಂತಲೂ ಹೇಳಿದೆನು. ಮೊದಲನೆಯದಾಗಿ ದಮಸ್ಕಕ್ಕೂ ಬಳಿಕ ಜೆರುಸಲೇಮಿಗೂ ಜುದೇಯದ ಪ್ರತಿಯೊಂದು ಭಾಗಕ್ಕೂ ಹೋಗಿ ಅಲ್ಲಿರುವ ಜನರಿಗೆ ಈ ಸಂಗತಿಗಳನ್ನು ತಿಳಿಸಿದೆನು. ಅಲ್ಲದೆ ಯೆಹೂದ್ಯರಲ್ಲದ ಜನರ ಬಳಿಗೂ ಹೋದೆನು.
“ಎಫ್ರಾಯೀಮ್ ಅಳುವುದನ್ನು ನಾನು ಕೇಳಿದ್ದೇನೆ. ಎಫ್ರಾಯೀಮು ಹೀಗೆ ಹೇಳುವದನ್ನು ನಾನು ಕೇಳಿದ್ದೇನೆ. ‘ಯೆಹೋವನೇ, ನೀನು ನಿಜವಾಗಿ ನನ್ನನ್ನು ದಂಡಿಸಿದೆ. ನಾನು ಪಾಠವನ್ನು ಕಲಿತೆನು. ನಾನು ತರಬೇತಿ ಹೊಂದದ ಒಂದು ಹೋರಿಯುಂತಿದ್ದೆನು. ನನ್ನನ್ನು ದಂಡಿಸುವದನ್ನು ದಯವಿಟ್ಟು ನಿಲ್ಲಿಸು. ನಾನು ನಿನ್ನಲ್ಲಿಗೆ ಹಿಂದಿರುಗಿ ಬರುತ್ತೇನೆ. ನಿಜವಾಗಿಯೂ ನೀನೇ ನನ್ನ ದೇವರಾದ ಯೆಹೋವನು.
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.