ಅಪೊಸ್ತಲರ ಕೃತ್ಯಗಳು 4:19 - ಪರಿಶುದ್ದ ಬೈಬಲ್19 ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಗ ಪೇತ್ರ ಮತ್ತು ಯೊವಾನ್ನರು, “ನಾವು ದೇವರಿಗೆ ವಿಧೇಯರಾಗಬೇಕೋ? ನಿಮಗೆ ವಿಧೇಯರಾಗಬೇಕೋ? ದೇವರ ದೃಷ್ಟಿಯಲ್ಲಿ ಯಾವುದು ಸರಿ? ನೀವೇ ನಿರ್ಣಯಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅದಕ್ಕೆ ಪೇತ್ರ ಯೋಹಾನರು ಅವರಿಗೆ - ದೇವರ ಮಾತನ್ನು ಕೇಳುವದಕ್ಕಿಂತಲೂ ನಿಮ್ಮ ಮಾತನ್ನು ಕೇಳುವದು ದೇವರ ಮುಂದೆ ನ್ಯಾಯವೋ ಏನು? ನೀವೇ ತೀರ್ಪುಮಾಡಿಕೊಳ್ಳಿರಿ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೆ ಪೇತ್ರ ಮತ್ತು ಯೋಹಾನರು, “ದೇವರಿಗಿಂತ ಹೆಚ್ಚಾಗಿ ನಿಮಗೆ ಕಿವಿಗೊಡುವುದು ದೇವರ ದೃಷ್ಟಿಯಲ್ಲಿ ಸರಿಯಾದದ್ದೋ? ಎಂಬುದರ ಬಗ್ಗೆ ನೀವೇ ತೀರ್ಮಾನ ಮಾಡಿಕೊಳ್ಳಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖರೆ ತೆಂಕಾ ಪೆದ್ರುನ್ ಅನಿ ಜುವಾಂವಾಕ್, ಅಮಿ ತುಮ್ಕಾ ಮಾನುಚೆ ಕಿ? ನಾ ತರ್ ದೆವಾಕ್ ಮಾನುಚೆ? ಹ್ಯಾತುರ್ ಖಚ್ಚಿ ದೆವಾಚಿ ಇಚ್ಚಾ ತುಮಿಚ್ ಸಾಂಗಾ. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.
ಅಹಾಜನು ಯಾಜಕನಾದ ಊರೀಯನಿಗೆ, “ಈ ದೇಶದ ಜನರೆಲ್ಲರೂ ಪ್ರಾತಃಕಾಲದಲ್ಲಿ ಸರ್ವಾಂಗಹೋಮವನ್ನೂ ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ ಮತ್ತು ಪಾನದ್ರವ್ಯಗಳನ್ನೂ ಸಮರ್ಪಿಸಲು ಮಹಾವೇದಿಕೆಯನ್ನು ಬಳಸಬೇಕು; ಸರ್ವಾಂಗಹೋಮಕ್ಕಾಗಿ ಮತ್ತು ಸಮಾಧಾನಯಜ್ಞಕ್ಕಾಗಿ ವಧಿಸುವ ಪಶುಗಳ ರಕ್ತವನ್ನು ಈ ಮಹಾವೇದಿಕೆಯ ಮೇಲೆ ಚಿಮುಕಿಸಿ. ಆದರೆ ನಾನು ದೇವರಿಂದ ದೈವೋತ್ತರಗಳನ್ನು ಕೇಳಲು ತಾಮ್ರವೇದಿಕೆಯನ್ನು ಉಪಯೋಗಿಸುತ್ತೇನೆ” ಎಂದು ಹೇಳಿದನು.
ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ಈ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
ಯಾಕೆಂದರೆ ನೀವು ಒಮ್ರಿಯ ಆಜ್ಞೆಯನ್ನು ಪರಿಪಾಲಿಸಿದಿರಿ. ಅಹಾಬನ ಮನೆಯವರು ಮಾಡುತ್ತಿದ್ದ ದುಷ್ಕೃತ್ಯಗಳನ್ನು ನೀವು ಮಾಡುತ್ತೀರಿ. ನೀವು ಅವರ ಬೋಧನೆಯನ್ನು ಅನುಸರಿಸುತ್ತೀರಿ. ಆದ್ದರಿಂದ ನೀವು ನಾಶವಾಗುವಂತೆ ಮಾಡುವೆನು. ಕೆಡವಲ್ಪಟ್ಟ ನಿಮ್ಮ ನಗರವನ್ನು ನೋಡಿದ ಜನರು ಆಶ್ಚರ್ಯದಿಂದ ಸಿಳ್ಳುಹಾಕುವರು. ಆಗ ಬೇರೆ ಜನಾಂಗದವರು ನಿಮ್ಮ ಮೇಲೆ ಹೊರಿಸಿದ ಅವಮಾನವನ್ನು ನೀವು ಸಹಿಸಿಕೊಳ್ಳುವಿರಿ.”