ಅಪೊಸ್ತಲರ ಕೃತ್ಯಗಳು 4:21 - ಪರಿಶುದ್ದ ಬೈಬಲ್21-22 ಯೆಹೂದ್ಯನಾಯಕರಿಗೆ ಅಪೊಸ್ತಲರನ್ನು ದಂಡಿಸಲು ಯಾವ ಮಾರ್ಗವೂ ತೋಚಲಿಲ್ಲ, ಯಾಕೆಂದರೆ ಸಂಭವಿಸಿದ ಕಾರ್ಯಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. (ಈ ಸೂಚಕಕಾರ್ಯದಿಂದ ಗುಣಹೊಂದಿದ ವ್ಯಕ್ತಿಗೆ ನಲವತ್ತು ವರ್ಷಕ್ಕಿಂತಲೂ ಹೆಚ್ಚು ವಯಸ್ಸಾಗಿತ್ತು.) ಆದ್ದರಿಂದ ಯೆಹೂದ್ಯನಾಯಕರು ಅಪೊಸ್ತಲರನ್ನು ಮತ್ತೆ ಎಚ್ಚರಿಸಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಡೆದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಿದ್ದರು. ಇದನ್ನು ಅರಿತ ಆ ಸಭಾಸದಸ್ಯರಿಗೆ ಪ್ರೇಷಿತರನ್ನು ಶಿಕ್ಷಿಸುವ ಮಾರ್ಗ ತೋಚದೆಹೋಯಿತು. ಆದುದರಿಂದ ಅವರನ್ನು ಇನ್ನೂ ಅಧಿಕವಾಗಿ ಎಚ್ಚರಿಸಿ ಕಳುಹಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಡೆದಿದ್ದ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಾ ಇದ್ದ ಕಾರಣ ಅವರ ದೆಸೆಯಿಂದ ಸಭಿಕರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅನಂತರ ನ್ಯಾಯಸಭೆಯವರು ಅವರನ್ನು ಬೆದರಿಸಿ ಕಳುಹಿಸಿಬಿಟ್ಟರು. ಅಲ್ಲಿ ಸಂಭವಿಸಿದ ಅದ್ಭುತಕ್ಕಾಗಿ ಜನರೆಲ್ಲರೂ ದೇವರನ್ನು ಕೊಂಡಾಡುತ್ತಾ ಇದ್ದುದರಿಂದ, ಪೇತ್ರ ಯೋಹಾನರನ್ನು ಹೇಗೆ ದಂಡಿಸಬೇಕೆಂಬುದನ್ನು ಅವರು ನಿರ್ಣಯಿಸಲಾರದೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಖರೆ ತ್ಯಾ ಜುದೆವಾಂಚ್ಯಾ ನ್ಯಾಯ್ ಕರ್‍ತಲ್ಯಾ ಮುಖಂಡಾಂಚ್ಯಾಕ್ಡೆ ಕಸ್ಲೆಬಿ ಶಿಕ್ಷಾ ದಿವ್ಕ್ ಹೊವ್ಕ್ ನಾ, ಪೆದ್ರುಕ್ ಅನಿ ಜುವಾಂವಾಕ್ ಉಶಾರ್ಕಿ ತವ್ಡೆಚ್ ದಿಲ್ಯಾನಿ ತೆಂಕಾ ಕಶ್ಯಾಕ್ ಮಟ್ಲ್ಯಾರ್ ಥೈ ಹೊಲ್ಲಿ ಸಂಗ್ತಿಯಾ ಬಗುನ್ ಲೊಕಾ ಸಗ್ಳ್ಯಿ ದೆವಾಕ್ ಹೊಗ್ಳಾಪ್ ಕರುಲಾಗಲಿ. ಅಧ್ಯಾಯವನ್ನು ನೋಡಿ |