ಅಪೊಸ್ತಲರ ಕೃತ್ಯಗಳು 4:27 - ಪರಿಶುದ್ದ ಬೈಬಲ್27 ಹೆರೋದರಾಜನು, ಪೊಂತಿಯಸ್ ಪಿಲಾತನು, ಜನಾಂಗಗಳು ಮತ್ತು ಯೆಹೂದ್ಯರು ಈ ಪಟ್ಟಣದಲ್ಲಿ ಒಟ್ಟಾಗಿ ಸೇರಿಕೊಂಡು ಯೇಸುವನ್ನು ವಿರೋಧಿಸಿದಾಗ ಈ ಸಂಗತಿಗಳು ನಿಜವಾಗಿಯೂ ನೆರವೇರಿದವು. ಯೇಸು ನಿನ್ನ ಪವಿತ್ರ ಸೇವಕನಾಗಿದ್ದಾನೆ. ನೀನು ಆತನನ್ನು ಅಭಿಷೇಕಿಸಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ, ಪೊಂತ್ಯ ಪಿಲಾತನೂ, ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರೊಡನೆ ಮತ್ತು ಇಸ್ರಾಯೇಲ್ ಜನರೊಡನೆ ಒಟ್ಟಾಗಿ ಸೇರಿಕೊಂಡು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆ ಮಾತಿಗೆ ಅನುಸಾರವಾಗಿಯೇ ಈ ಪಟ್ಟಣದಲ್ಲಿ ಹೆರೋದನೂ ಪೊಂತ್ಯ ಪಿಲಾತನೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತವಾಗಿ ಕೂಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕ ಯೇಸುವಿನ ವಿರೋಧವಾಗಿ ದುರಾಲೋಚನೆ ಮಾಡಲು ಹೆರೋದನು ಮತ್ತು ಪೊಂತ್ಯ ಪಿಲಾತನು, ಯೆಹೂದ್ಯರಲ್ಲದವರೊಂದಿಗೂ ಇಸ್ರಾಯೇಲರೊಂದಿಗೂ ಈ ಪಟ್ಟಣದಲ್ಲೇ ಸೇರಿ ಬಂದಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಖರೆಚ್ ಬಿ ಹೆರೊದ್ ಅನಿ ಪೊಂತಿಯಸ್ ಪಿಲಾತ್ ಸಗ್ಳ್ಯಾ ಜುದೆವಾಂಚ್ಯಾ ಲೊಕಾಂಚ್ಯಾ ವಾಂಗ್ಡಾ ಅನಿ ಇಸ್ರಾಯೆಲ್ ಲೊಕಾಂಚ್ಯಾ ವಾಗ್ಡಾ ಕ್ರಿಸ್ತ್ ತುಜೊ ಪವಿತ್ರ್ ಸೆವಕಾಕ್ ವಿರೊದ್ ಹೊವ್ನ್ ಶಾರಾತ್ ಗೊಳಾ ಹೊಲೆ. ಅಧ್ಯಾಯವನ್ನು ನೋಡಿ |
ಇಸ್ರೇಲಿನ ಪರಿಶುದ್ಧನೂ ವಿಮೋಚಕನೂ ಆದ ಯೆಹೋವನು ಇಸ್ರೇಲನ್ನು ಬಿಡಿಸುವನು. ಆತನು ಹೇಳುವುದೇನೆಂದರೆ, “ನನ್ನ ಸೇವಕನು ದೀನನಾಗಿದ್ದಾನೆ. ಆತನು ಅರಸರನ್ನು ಸೇವಿಸುವನು. ಆದರೆ ಜನರು ಆತನನ್ನು ದ್ವೇಷಿಸುವರು. ಆದರೆ ರಾಜರುಗಳು ಅವನನ್ನು ನೋಡಿ ಎದ್ದುನಿಂತು ಗೌರವಿಸುವರು. ಶ್ರೇಷ್ಠ ನಾಯಕರು ಆತನ ಮುಂದೆ ಅಡ್ಡಬೀಳುವರು.” ಇದು ಇಸ್ರೇಲರ ಪರಿಶುದ್ಧನಾದ ಯೆಹೋವನ ಚಿತ್ತಕ್ಕನುಸಾರವಾಗಿದೆ. ಆತನು ಭರವಸೆಗೆ ಯೋಗ್ಯನಾಗಿದ್ದಾನೆ. ಆತನೇ ನಿನ್ನನ್ನು ಆರಿಸಿಕೊಂಡನು.