Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:3 - ಪರಿಶುದ್ದ ಬೈಬಲ್‌

3 ಯೆಹೂದ್ಯ ನಾಯಕರು ಪೇತ್ರ ಮತ್ತು ಯೋಹಾನರನ್ನು ಬಂಧಿಸಿ ಸೆರೆಮನೆಗೆ ಹಾಕಿದರು. ಆಗಲೇ ಕತ್ತಲಾಗಿತ್ತು. ಆದ್ದರಿಂದ ಅವರು ಪೇತ್ರ ಮತ್ತು ಯೋಹಾನರನ್ನು ಮರುದಿನದವರೆಗೆ ಸೆರೆಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇದನ್ನು ಕೇಳಿ ಸಿಟ್ಟುಗೊಂಡಿದ್ದ ಅವರು ಪೇತ್ರ ಯೊವಾನ್ನರನ್ನು ಬಂಧಿಸಿದರು. ಆಗಲೇ ಹೊತ್ತು ಮೀರಿದ್ದರಿಂದ ಮಾರನೆಯ ದಿನದವರೆಗೆ ಅವರನ್ನು ಸೆರೆಮನೆಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರನ್ನು ಹಿಡಿದು ಆಗಲೇ ಸಾಯಂಕಾಲವಾಗಿದ್ದದರಿಂದ ಮರುದಿನದವರೆಗೆ ಕಾವಲಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವರು ಪೇತ್ರ ಯೋಹಾನರನ್ನು ಬಂಧಿಸಿ, ಸಂಜೆಯಾದ್ದರಿಂದ ಮರುದಿನದವರೆಗೆ ಅವರನ್ನು ಸೆರೆಮನೆಯಲ್ಲಿ ಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೆ ಹೊವ್ನ್ ಪೆದ್ರುಕ್ ಅನಿ ಜುವಾಂವಾಕ್ ಜುದೆವಾಂಚ್ಯಾ ಮುಖಂಡಾನಿ ದುಸ್ರ್ಯಾಂದಿಸಿ ಪತರ್ ಬಿ ಬಂಧಿಖಾನ್ಯಾತ್ ಥವಲ್ಲ್ಯಾನಿ ಕಶ್ಯಾಕ್ ಮಟ್ಲ್ಯಾರ್ ತ್ಯಾ ದಿಸಾ ಕಾಳೊಕ್ ಹೊವ್ನ್ ಗೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:3
11 ತಿಳಿವುಗಳ ಹೋಲಿಕೆ  

ಅವರು ಅಪೊಸ್ತಲರನ್ನು ಬಂಧಿಸಿ ರಾಜ್ಯಮಟ್ಟದ ಸೆರೆಮನೆಗೆ ಹಾಕಿದರು.


ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.


ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.


ಬಳಿಕ ಆ ಸೈನಿಕರು, ಅವರ ಸೇನಾಧಿಪತಿ ಹಾಗೂ ಯೆಹೂದ್ಯ ಕಾವಲುಗಾರರು ಯೇಸುವನ್ನು ಹಿಡಿದು ಕಟ್ಟಿ, ಅನ್ನನ ಬಳಿಗೆ ತಂದರು.


ಅವರು ಯೇಸುವನ್ನು ಬಂಧಿಸಿ ಪ್ರಧಾನಯಾಜಕನ ಮನೆಯೊಳಗೆ ಕರೆದುಕೊಂಡು ಬಂದರು. ಪೇತ್ರನು ಅವರನ್ನು ಹಿಂಬಾಲಿಸಿದನು. ಆದರೆ ಅವನು ಯೇಸುವಿನ ಹತ್ತಿರ ಬರಲಿಲ್ಲ.


ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?


ಯೋಹಾನನನ್ನು ಸೆರೆಯಲ್ಲಿಟ್ಟಿದ್ದಾರೆಂಬುದು ಯೇಸುವಿಗೆ ತಿಳಿಯಿತು. ಆದ್ದರಿಂದ ಯೇಸು ಗಲಿಲಾಯಕ್ಕೆ ಹಿಂತಿರುಗಿ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು