ಅಪೊಸ್ತಲರ ಕೃತ್ಯಗಳು 4:30 - ಪರಿಶುದ್ದ ಬೈಬಲ್30 ನಿನ್ನ ಕೈಚಾಚಿ ಯೇಸುವಿನ ಹೆಸರಿನ ಮೂಲಕ ರೋಗಿಗಳನ್ನು ಗುಣಪಡಿಸು; ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡು” ಎಂದು ಅವರು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ನಿನ್ನ ಕೈಚಾಚುತ್ತಿರುವಲ್ಲಿ, ನಿನ್ನ ದಾಸರು, ನಿನ್ನ ವಾಕ್ಯವನ್ನು ಧೈರ್ಯದಿಂದ ಹೇಳುವ ಹಾಗೆ ಅನುಗ್ರಹಿಸು” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಸ್ವಸ್ಥಪಡಿಸುವ ನಿಮ್ಮ ಅಮೃತಹಸ್ತವನ್ನು ಚಾಚಿರಿ; ನಿಮ್ಮ ಪರಮಪೂಜ್ಯ ದಾಸ ಯೇಸುವಿನ ನಾಮದಲ್ಲಿ ಅದ್ಭುತಗಳೂ ಸೂಚಕಕಾರ್ಯಗಳೂ ಜರುಗುವಂತಾಗಲಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್30 ಪವಿತ್ರ್ ಜೆಜುಚ್ಯಾ ನಾಂವಾನ್ ರೊಗಾತ್ ಹೊತ್ತ್ಯಾ ಲೊಕಾಕ್ನಿ ಗುನ್ ಕರ್ ಅಜಾಪಾಚಿ ಅನಿ ಚಮತ್ಕಾರಾಚಿ ಕಾಮಾ ಕರುಕ್ ತುಜೊ ಹಾತ್ ಫಿಡೆ ಕರ್ ಮನುನ್ ತೆನಿ ಮಾಗ್ನಿ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |
ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.
ಬೇರೊಂದು ಜನಾಂಗದೊಳಗಿಂದ ಜನರನ್ನು ತನಗೋಸ್ಕರ ತೆಗೆದುಕೊಳ್ಳಲು ಬೇರೆ ಯಾವ ದೇವರಾದರೂ ಎಂದಾದರೂ ಪ್ರಯತ್ನಿಸಿದ್ದುಂಟೇ? ಇಲ್ಲ! ಆದರೆ ದೇವರಾದ ಯೆಹೋವನು ಇಂಥ ಮಹಾಕಾರ್ಯಗಳನ್ನು ಮಾಡುವುದನ್ನು ನೀವು ನೋಡಿದ್ದೀರಿ! ಆತನು ನಿಮಗೆ ತನ್ನ ಶಕ್ತಿಯನ್ನು, ಬಲವನ್ನು, ಅದ್ಭುತಕಾರ್ಯಗಳನ್ನು ಮತ್ತು ಆಶ್ಚರ್ಯಕರವಾದ ಕಾರ್ಯಗಳನ್ನು ತೋರಿಸಿದ್ದಾನೆ. ಆತನು ಈಜಿಪ್ಟಿನ ಮೇಲೆ ಬರಮಾಡಿದ ವಿಪತ್ತುಗಳನ್ನು ಮತ್ತು ಭಯಂಕರವಾದ ಘಟನೆಗಳನ್ನು ನೀವು ನೋಡಿದ್ದೀರಿ!
ನಜರೇತಿನ ಯೇಸು ಕ್ರಿಸ್ತನ ಹೆಸರಿನಿಂದ ಈ ಮನುಷ್ಯನಿಗೆ ಗುಣವಾಯಿತೆಂಬುದನ್ನು ನೀವು ಮತ್ತು ಯೆಹೂದ್ಯರೆಲ್ಲರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ! ನೀವು ಯೇಸುವನ್ನು ಶಿಲುಬೆಗೇರಿಸಿದಿರಿ. ದೇವರು ಆತನನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಈ ಮನುಷ್ಯನು ಕುಂಟನಾಗಿದ್ದನು, ಆದರೆ ಈಗ ಇವನು ಗುಣಹೊಂದಿದ್ದಾನೆ ಮತ್ತು ಯೇಸುವಿನ ಹೆಸರಿನಿಂದ ನಿಮ್ಮ ಮುಂದೆ ನಿಂತುಕೊಳ್ಳಲು ಶಕ್ತನಾಗಿದ್ದಾನೆ!
ಈ ಕಾರ್ಯವನ್ನು ಮಾಡಿದ್ದು ನಾವಲ್ಲ! ದೇವರು! ಆತನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು. ಆತನೇ ನಮ್ಮ ಪಿತೃಗಳೆಲ್ಲರ ದೇವರು. ಆತನು ತನ್ನ ವಿಶೇಷ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ಆದರೆ ನೀವು ಯೇಸುವನ್ನು ಕೊಲ್ಲಲು ಒಪ್ಪಿಸಿಕೊಟ್ಟಿರಿ. ಯೇಸುವನ್ನು ಬಿಡುಗಡೆ ಮಾಡಲು ಪಿಲಾತನು ನಿರ್ಧರಿಸಿದನು. ಆದರೆ ನೀವು ಪಿಲಾತನಿಗೆ, ನಮಗೆ ಯೇಸು ಬೇಕಿಲ್ಲವೆಂದು ಹೇಳಿದಿರಿ.