ಅಪೊಸ್ತಲರ ಕೃತ್ಯಗಳು 4:31 - ಪರಿಶುದ್ದ ಬೈಬಲ್31 ಹೀಗೆ ವಿಶ್ವಾಸಿಗಳು ಪ್ರಾರ್ಥಿಸುತ್ತಿದ್ದಾಗ, ಅವರು ಸಭೆ ಸೇರಿದ್ದ ಸ್ಥಳವು ನಡುಗಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ದೇವರ ವಾಕ್ಯವನ್ನು ಭಯವಿಲ್ಲದೆ ಪ್ರಕಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಹೀಗೆ ಪ್ರಾರ್ಥನೆ ಮಾಡಿದ ಕೂಡಲೇ ಅವರು ನೆರೆದಿದ್ದ ಸ್ಥಳವು ನಡುಗಿತು. ಅವರೆಲ್ಲರು ಪವಿತ್ರಾತ್ಮ ಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಹೀಗೆ ಪ್ರಾರ್ಥನೆ ಮಾಡಿದ ತರುವಾಯ ಅವರು ನೆರೆದಿದ್ದ ಸ್ಥಳವು ಕಂಪನಗೊಂಡಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ಧೈರ್ಯದಿಂದ ದೇವರ ವಾಕ್ಯವನ್ನು ಸಾರತೊಡಗಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ಅಶೆ ದೆವಾಚಿ ಲೊಕಾ ಮಾಗ್ನಿ ಕರಿತ್ ರಾತಾನಾ ತೆಂಚೊ ತಾಂಡ್ಯಾ ಗೊಳಾ ಹೊಲ್ಲೊ ಜಾಗೊ ಥರ್ ಥರ್ಲ್ಲೊ ತೆನಿ ಸಗ್ಳ್ಯೆ ಪವಿತ್ರ್ ಆತ್ಮ್ಯಾನ್ ಭರುನ್ ದೆವಾಚಿ ಗೊಸ್ಟಿಯಾ ಭಿಂಯ್ ನಸ್ತಾನಾ ಸಾಂಗುಲಾಲೆ. ಅಧ್ಯಾಯವನ್ನು ನೋಡಿ |