Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:4 - ಪರಿಶುದ್ದ ಬೈಬಲ್‌

4 ಆದರೆ ಪೇತ್ರ ಮತ್ತು ಯೋಹಾನರ ಬೋಧನೆಯನ್ನು ಕೇಳಿ ಅನೇಕರು ನಂಬಿಕೊಂಡರು. ಆಗ ಆ ಸಮುದಾಯದಲ್ಲಿ ವಿಶ್ವಾಸಿಗಳ ಸಂಖ್ಯೆ ಐದು ಸಾವಿರಕ್ಕೆ ಏರಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದುಸಾವಿರ ತನಕ ಬೆಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದರೆ ಸಂದೇಶವನ್ನು ಕೇಳಿದವರಲ್ಲಿ ಅನೇಕರು ನಂಬಿದರು. ಅವರ ಸಂಖ್ಯೆ ಸುಮಾರು ಐದು ಸಾವಿರಕ್ಕೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಖರೆ ತೆನಿ ಶಿಕಾಪ್ ಕರಲೆ ಆಯ್ಕುನ್ ಲೈ ಲೊಕಾನಿ ವಿಸ್ವಾಸ್ ಕರ್‍ಲ್ಯಾನಿ, ಅನಿ ತೆನಿ ಘೊಮಾನ್ಸಾಂಚೊ ಅಂಕೊಚ್ ಸುಮಾರ್ ಪಾಚ್ ಹಜಾರಾಕ್ ದಾಟಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:4
10 ತಿಳಿವುಗಳ ಹೋಲಿಕೆ  

ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.


ಪೌಲನು ಹೇಳಿದ ಕೆಲವು ಸಂಗತಿಗಳನ್ನು ಕೆಲವು ಮಂದಿ ಯೆಹೂದ್ಯರು ನಂಬಿದರು. ಆದರೆ ಉಳಿದವರು ನಂಬಲಿಲ್ಲ.


ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಗೋಧಿಯ ಕಾಳು ಭೂಮಿಗೆ ಬಿದ್ದು ಸಾಯಲೇಬೇಕು. ಬಳಿಕ ಅದು ಬೆಳೆದು ಅನೇಕ ಕಾಳುಗಳನ್ನು ಫಲಿಸುವುದು. ಸಾಯದಿದ್ದರೆ, ಅದು ಯಾವಾಗಲೂ ಕೇವಲ ಒಂದೇ ಕಾಳಾಗಿರುವುದು.


ಈ ಕಾರಣಕ್ಕಾಗಿ ನಾನು ಆತನನ್ನು ಜನರ ಮಧ್ಯದಲ್ಲಿ ಪ್ರಸಿದ್ಧಿಪಡಿಸುವೆನು. ಆತನು ಬಲಿಷ್ಠರೊಂದಿಗೆ ಸಮಪಾಲನ್ನು ಹೊಂದುವನು. ಆತನು ಜನರಿಗಾಗಿ ತನ್ನ ಪ್ರಾಣವನ್ನು ಕೊಟ್ಟು ಸತ್ತದ್ದಕ್ಕಾಗಿ ನಾನು ಆತನಿಗೆ ಹೀಗೆ ಮಾಡುವೆನು. ಜನರು ಆತನನ್ನು ಅಪರಾಧಿ ಎಂದು ಹೇಳಿದರೂ ವಾಸ್ತವವಾಗಿ ಆತನು ಬಹುಜನರ ಪಾಪಗಳನ್ನು ಹೊತ್ತುಕೊಂಡು ಹೋದನು. ಈಗ ಆತನು ಪಾಪಮಾಡಿದ ಜನರಿಗಾಗಿ ಪ್ರಾರ್ಥನಾಪೂರ್ವಕವಾಗಿ ವಿಜ್ಞಾಪಿಸುವನು.


ಜನರು ಹೀಗೆನ್ನುವರು: ‘ಶಕ್ತಿಯೂ, ಒಳ್ಳೆಯತನವೂ ಯೆಹೋವನಿಂದಲೇ ಬರುವದು.’” ಕೆಲವರು ಯೆಹೋವನ ಮೇಲೆ ಸಿಟ್ಟುಗೊಂಡಿದ್ದಾರೆ. ಆದರೆ ಆತನ ಸಾಕ್ಷಿಗಳು ಆತನು ಮಾಡಿದ ಕಾರ್ಯಗಳ ಕುರಿತು ಹೇಳುವರು. ಆಗ ಸಿಟ್ಟುಗೊಂಡವರು ನಾಚಿಕೆಗೆ ಒಳಗಾಗುವರು.


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಯೆಹೂದನು ರಾಜದಂಡವನ್ನು ಹಿಡಿದುಕೊಳ್ಳುವನು. ಅವನ ಸಂತತಿಯವರು ಶಾಶ್ವತವಾಗಿ ಆಳುವರು; ಅನ್ಯಜನಾಂಗಗಳು ಅವನಿಗೆ ಕಪ್ಪಕಾಣಿಕೆಗಳನ್ನು ತಂದು ಅವನಿಗೆ ವಿಧೇಯರಾಗಿರುವರು.


ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು