Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:1 - ಪರಿಶುದ್ದ ಬೈಬಲ್‌

1 ಅನನೀಯ ಎಂಬ ಒಬ್ಬನಿದ್ದನು. ಅವನ ಹೆಂಡತಿಯ ಹೆಸರು ಸಫೈರ. ಅನನೀಯ ತನ್ನಲ್ಲಿದ್ದ ಸ್ವಲ್ಪ ಜಮೀನನ್ನು ಮಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅನನೀಯ ಮತ್ತು ಸಫೈರ ಎಂಬ ದಂಪತಿಗಳಿದ್ದರು. ಇವರು ತಮ್ಮ ಆಸ್ತಿಯೊಂದನ್ನು ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆದರೆ ಅನನೀಯನೆಂಬ ಒಬ್ಬ ಮನುಷ್ಯನು ಸಪ್ಫೈರಳೆಂಬ ತನ್ನ ಹೆಂಡತಿಯ ಸಮೇತ, ಒಂದು ಭೂವಿುಯನ್ನು ಮಾರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅನನೀಯ ಎಂಬ ಹೆಸರಿನ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಆಸ್ತಿಯ ಒಂದು ಭಾಗವನ್ನು ಮಾರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಖರೆ ಅನನಿಯಾ ಮನ್ತಲ್ಯಾ ನಾವಾಚೊ ಎಕ್ ಮಾನುಸ್ ಅನಿ ತೆಚಿ ಬಾಯ್ಕೊ ಸಾಪಿರಾ ದೊಗೆ ಜನಾಬಿ ಮಿಳುನ್ ಅಪ್ಲೆ ಸೆತಾಚೊ ಎಕ್ ಬಾಗ್ ಇಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:1
9 ತಿಳಿವುಗಳ ಹೋಲಿಕೆ  

ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕೃತ್ಯಗಳಿಗೆ ಬಳಸುತ್ತಾರೆ.


ತಂದೆಯು ನನ್ನ ಜನರನ್ನು ನನಗೆ ಕೊಡುತ್ತಾನೆ. ಆ ಜನರಲ್ಲಿ ಪ್ರತಿಯೊಬ್ಬರೂ ನನ್ನ ಬಳಿಗೆ ಬರುತ್ತಾರೆ. ನನ್ನಲ್ಲಿಗೆ ಬರುವ ಪ್ರತಿಯೊಬ್ಬರನ್ನೂ ನಾನು ಖಂಡಿತವಾಗಿ ಸ್ವೀಕರಿಸಿಕೊಳ್ಳುವೆನು, ಅವರನ್ನು ಎಂದಿಗೂ ತಳ್ಳಿಬಿಡುವುದಿಲ್ಲ.


ಜೆರಿಕೊ ಪಟ್ಟಣದ ಬಾಗಿಲನ್ನು ಮುಚ್ಚಲಾಗಿತ್ತು. ಇಸ್ರೇಲರು ಸಮೀಪದಲ್ಲೇ ಇದ್ದುದರಿಂದ ಪಟ್ಟಣದ ಜನರು ಹೆದರಿಕೊಂಡಿದ್ದರು. ಒಬ್ಬರಾದರೂ ಪಟ್ಟಣದಲ್ಲಿ ಪ್ರವೇಶ ಮಾಡಲಿಲ್ಲ; ಒಬ್ಬರಾದರೂ ಪಟ್ಟಣದಿಂದ ಹೊರ ಬರಲಿಲ್ಲ.


ಆಗ ಯೆಹೋಶುವನು ಆ ಕುಟುಂಬದ ಎಲ್ಲ ಗಂಡಸರನ್ನು ಯೆಹೋವನ ಮುಂದೆ ಬರಲು ಹೇಳಿದನು. ಯೆಹೋವನು ಆಗ ಕರ್ಮೀಯ ಮಗನಾದ ಆಕಾನನನ್ನು ಸೂಚಿಸಿದನು. ಕರ್ಮೀಯು ಜಬ್ದೀಯ ಮಗನಾಗಿದ್ದನು, ಜಬ್ದೀಯು ಜೆರಹನ ಮಗನಾಗಿದ್ದನು.


ನಿಮ್ಮಲ್ಲಿ ಕೆಲವರಲ್ಲಿ ಯಜ್ಞಕ್ಕೆ ಬೇಕಾಗಿರುವ ಒಳ್ಳೆಯ ಗಂಡು ಪಶುಗಳು ಇದ್ದಾಗ್ಯೂ ಅವರು ನನಗೆ ಅವುಗಳನ್ನು ಸಮರ್ಪಿಸುವದಿಲ್ಲ. ಕೆಲವರು ಕಳಂಕವಿಲ್ಲದ ಪಶುಗಳನ್ನು ನನಗೆ ತರುತ್ತಾರೆ. ಅವರು ಅಂಥಾ ಆರೋಗ್ಯಕರ ಪಶುಗಳನ್ನು ನನಗೆ ಸಮರ್ಪಿಸಲು ವಾಗ್ದಾನ ಮಾಡುವರು. ಆದರೆ ಗುಪ್ತವಾಗಿ ಅವರು ಆ ಪಶುವನ್ನು ಬದಲಿಸಿ ನನಗೆ ರೋಗಿಯಾದ ಪಶುಗಳನ್ನು ಕೊಡುತ್ತಾರೆ. ಅವರಿಗೆ ದುರ್ದೆಶೆ ಸಂಭವಿಸಲಿರುವದು. ನಾನು ದೊಡ್ಡ ಅರಸನು. ನೀವು ನನ್ನನ್ನು ಗೌರವಿಸಬೇಕು. ಭೂಲೋಕದ ಸರ್ವಜನರು ನನ್ನನ್ನು ಸನ್ಮಾನಿಸುವರು.” ಇವು ಸರ್ವಶಕ್ತನಾದ ಯೆಹೋವನ ನುಡಿಗಳು.


ಯೋಸೇಫನಿಗೆ ಒಂದು ಹೊಲವಿತ್ತು. ಅವನು ಅದನ್ನು ಮಾರಿ ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಟ್ಟನು.


ಆದರೆ, ಬಂದ ಹಣದಲ್ಲಿ ಒಂದು ಭಾಗವನ್ನು ಮಾತ್ರ ಅವನು ಅಪೊಸ್ತಲರ ಪಾದಗಳ ಬಳಿ ಇಟ್ಟನು. ಅವನು ಸ್ವಲ್ಪ ಹಣವನ್ನು ತನಗೋಸ್ಕರ ರಹಸ್ಯವಾಗಿಟ್ಟುಕೊಂಡನು. ಅವನ ಹೆಂಡತಿಗೆ ಇದು ತಿಳಿದಿತ್ತು. ಆಕೆಯೂ ಅದಕ್ಕೆ ಒಪ್ಪಿಕೊಂಡಿದ್ದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು