ಅಪೊಸ್ತಲರ ಕೃತ್ಯಗಳು 5:25 - ಪರಿಶುದ್ದ ಬೈಬಲ್25 ಬಳಿಕ ಬೇರೊಬ್ಬನು ಬಂದು ಅವರಿಗೆ, “ಕೇಳಿ! ನೀವು ಸೆರೆಮನೆಯಲ್ಲಿ ಹಾಕಿದ್ದ ಜನರು ದೇವಾಲಯದಲ್ಲಿ ನಿಂತಿದ್ದಾರೆ. ಅವರು ಜನರಿಗೆ ಉಪದೇಶ ಮಾಡುತ್ತಿದ್ದಾರೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅಷ್ಟರಲ್ಲಿ ಒಬ್ಬನು ಬಂದು; “ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು” ಅವರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಅಷ್ಟರಲ್ಲಿ ಒಬ್ಬನು ಅಲ್ಲಿಗೆ ಬಂದು, “ಇಗೋ, ನೀವು ಸೆರೆಮನೆಯಲ್ಲಿಟ್ಟವರು ದೇವಾಲಯದಲ್ಲಿ ನಿಂತು ಜನರಿಗೆ ಬೋಧಿಸುತ್ತಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಹೀಗಿರಲಾಗಿ ಯಾರೋ ಒಬ್ಬನು ಬಂದು - ಅಗೋ, ನೀವು ಸೆರೆಮನೆಯಲ್ಲಿಟ್ಟಿದ್ದ ಆ ಮನುಷ್ಯರು ದೇವಾಲಯದಲ್ಲಿ ನಿಂತುಕೊಂಡು ಜನರಿಗೆ ಉಪದೇಶಮಾಡುತ್ತಿದ್ದಾರೆಂದು ಅವರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಯಾರೋ ಒಬ್ಬನು ಬಂದು, “ನೋಡಿರಿ! ನೀವು ಸೆರೆಮನೆಯಲ್ಲಿ ಬಂಧಿಸಿಟ್ಟಿದ್ದ ಆ ಪುರುಷರು ದೇವಾಲಯದ ಅಂಗಳದಲ್ಲಿ ನಿಂತುಕೊಂಡು ಜನರಿಗೆ ಬೋಧಿಸುತ್ತಿದ್ದಾರೆ,” ಎಂದು ವರದಿ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಮಾನಾ ಅನಿ ಎಕ್ಲ್ಯಾನ್ ಯೆವ್ನ್ ತೆಂಕಾ, “ಆಯ್ಕಾ! ತುಮಿ ಬಂದಿಖಾನ್ಯಾತ್ ಘಾಟಲ್ಲಿ ಮಾನ್ಸಾ ಗುಡಿತ್ ಇಬೆ ರಾವ್ನ್ ಲೊಕಾಕ್ನಿ ಶಿಕ್ವುಲಾತ್” ಮನುನ್ ಸಾಂಗಲ್ಯಾನ್. ಅಧ್ಯಾಯವನ್ನು ನೋಡಿ |