ಅಪೊಸ್ತಲರ ಕೃತ್ಯಗಳು 5:26 - ಪರಿಶುದ್ದ ಬೈಬಲ್26 ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆಗ ಆ ದಳಪತಿ ಅಧಿಕಾರಿಗಳೊಡನೆ ಹೋಗಿ ಪ್ರೇಷಿತರನ್ನು ಕರೆದುಕೊಂಡು ಬಂದನು. ಜನರು ತಮ್ಮ ಮೇಲೆ ಕಲ್ಲು ತೂರಬಹುದೆಂಬ ಭಯದಿಂದ ಪ್ರೇಷಿತರ ಮೇಲೆ ಅವರು ಯಾವ ಬಲಪ್ರಯೋಗವನ್ನೂ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆಗ ದಳಪತಿಯು ತನ್ನ ಅಧಿಕಾರಿಗಳೊಂದಿಗೆ ಹೋಗಿ ಅಪೊಸ್ತಲರನ್ನು ಕರೆದುಕೊಂಡು ಬಂದನು. ಜನರು ತಮಗೆ ಕಲ್ಲೆಸೆದಾರೆಂಬ ಭಯ ಅವರಿಗಿದ್ದುದರಿಂದ ಅಪೊಸ್ತಲರನ್ನು ಬಲವಂತಮಾಡದೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ತನ್ನಾ ಅಧಿಕಾರಿನಿ ಅನಿ ಲೊಕಾನಿ ಜಾವ್ನ್ ಅಪೊಸ್ತಲಾಕ್ನಿ ಬಲ್ವುನ್ ಹಾನ್ಲ್ಯಾನಿ , ಖರೆ ಸೈನಿಕಾನಿ ವತ್ತಾಯ್ ಕರುಕ್ ನಾತ್ ಕಶ್ಯಾಕ್ ಮಟ್ಲ್ಯಾರ್ ತೆನಿ ಲೊಕಾಕ್ನಿ ಭಿಂವ್‍ಲ್ಲ್ಯಾನಿ ಲೊಕಾಕ್ನಿ ರಾಗ್ ಯೆವ್ನ್ ಗುಂಡೆ ಮಾರುನ್ ಅಪ್ನಾಕ್ನಿ ಜಿಂವ್ ಕಾಡ್ತಿಲ್ ಮನುನ್ ಭಿಂವ್‍ಲ್ಯಾನಿ. ಅಧ್ಯಾಯವನ್ನು ನೋಡಿ |