Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:29 - ಪರಿಶುದ್ದ ಬೈಬಲ್‌

29 ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅದಕ್ಕೆ ಪ್ರತ್ಯುತ್ತರವಾಗಿ ಪೇತ್ರ ಮತ್ತು ಉಳಿದ ಪ್ರೇಷಿತರು, “ನಾವು ವಿಧೇಯರಾಗಬೇಕಾದದ್ದು ದೇವರಿಗೆ, ಮಾನವರಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಪೇತ್ರನೂ ಉಳಿದ ಅಪೊಸ್ತಲರೂ - ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಪೇತ್ರ ಮತ್ತು ಇತರ ಅಪೊಸ್ತಲರು ಉತ್ತರವಾಗಿ, “ನಾವು ಮನುಷ್ಯರಿಗೆ ವಿಧೇಯರಾಗಿರುವುದಕ್ಕಿಂತ ದೇವರಿಗೆ ವಿಧೇಯರಾಗಿರಬೇಕಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ತನ್ನಾ ಪೆದ್ರುನ್ ಅನಿ ಹುರಲ್ಲ್ಯಾ ಅಪೊಸ್ತಲಾನಿ ಉತ್ತರ್ ದಿಲ್ಯಾನ್ ಅಮಿ ದೆವಾಕ್ ಮಾನುನ್ ಘೆತಾಂವ್ ಖರೆ ಮಾನ್ಸಾಕ್ನಿ ನ್ಹಯ್ ಮಟ್ಲ್ಯಾನ್ !

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:29
10 ತಿಳಿವುಗಳ ಹೋಲಿಕೆ  

ಆಗ ಸೌಲನು ಸಮುವೇಲನಿಗೆ, “ನಾನು ಪಾಪ ಮಾಡಿದ್ದೇನೆ. ನಾನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ; ನೀನು ಹೇಳಿದ್ದನ್ನು ನಾನು ಮಾಡಲಿಲ್ಲ. ನಾನು ಜನರಿಗೆ ಹೆದರಿ ಅವರು ಹೇಳಿದಂತೆ ಮಾಡಿದೆ.


ಆದರೆ ಪೇತ್ರ ಮತ್ತು ಯೋಹಾನ ಅವರಿಗೆ, “ನಾವು ನಿಮಗೆ ವಿಧೇಯರಾಗಬೇಕೇ ಅಥವಾ ದೇವರಿಗೆ ವಿಧೇಯರಾಗಬೇಕೇ? ಇದರಲ್ಲಿ ಯಾವುದು ದೇವರಿಗೆ ಅಪೇಕ್ಷೆಯಾದದು? ನೀವೇ ಹೇಳಿ.


ಆಮೇಲೆ ದೇವರಾದ ಯೆಹೋವನು ಪುರುಷನಿಗೆ, “ವಿಶೇಷವಾದ ಆ ಮರದ ಹಣ್ಣನ್ನು ತಿನ್ನಕೂಡದೆಂದು ನಾನು ನಿನಗೆ ಆಜ್ಞಾಪಿಸಿದ್ದೆ. ಆದರೆ ನೀನು ನಿನ್ನ ಹೆಂಡತಿಯ ಮಾತನ್ನು ಕೇಳಿ ಆ ಮರದ ಹಣ್ಣನ್ನು ತಿಂದೆ. ನಿನ್ನ ದೆಸೆಯಿಂದ ನಾನು ಭೂಮಿಯನ್ನು ಶಪಿಸುವೆನು. ಭೂಮಿಯು ಫಲಿಸುವ ಆಹಾರಕ್ಕಾಗಿ ನೀನು ನಿನ್ನ ಜೀವಮಾನದ ದಿನಗಳಲ್ಲೆಲ್ಲಾ ಕಷ್ಟಪಟ್ಟು ದುಡಿಯಲೇಬೇಕು.


ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.


ಆಗ ಯೆರೆಮೀಯನು ಯೆಹೂದದ ಸಕಲ ಸರದಾರರಿಗೂ ಸಮಸ್ತ ಜನರಿಗೂ ಹೀಗೆ ಹೇಳಿದನು: “ಈ ಆಲಯದ ಬಗ್ಗೆ ಮತ್ತು ಈ ನಗರದ ಬಗ್ಗೆ ಹೀಗೆ ಹೇಳಲು ಯೆಹೋವನು ನನ್ನನ್ನು ಕಳುಹಿಸಿಕೊಟ್ಟಿದ್ದಾನೆ. ನೀವು ಕೇಳಿದ ಪ್ರತಿಯೊಂದು ವಿಷಯವೂ ಯೆಹೋವನಿಂದಲೇ ಬಂದದ್ದು.


ಆಗ ಅವರು ರಾಜನಿಗೆ, “ದಾನಿಯೇಲನೆಂಬ ಆ ಮನುಷ್ಯ ನಿನ್ನ ಕಡೆಗೆ ಎಳ್ಳಷ್ಟೂ ಗಮನ ಕೊಡುತ್ತಿಲ್ಲ. ಅವನು ಯೆಹೂದದ ಸೆರೆಯಾಳುಗಳಲ್ಲೊಬ್ಬನು. ನೀನು ರುಜುಹಾಕಿದ ಶಾಸನಕ್ಕೆ ಅವನು ಸ್ವಲ್ಪವಾದರೂ ಬೆಲೆಕೊಡುತ್ತಿಲ್ಲ. ದಾನಿಯೇಲನು ಈಗಲೂ ದಿನಕ್ಕೆ ಮೂರು ಸಲ ತನ್ನ ದೇವರಲ್ಲಿ ಪ್ರಾರ್ಥಿಸುತ್ತಾನೆ” ಎಂದು ಹೇಳಿದರು.


ಆದರೆ ರಾಜನಾದ ದಾವೀದನು ಯೋವಾಬನಿಗೆ ಮತ್ತು ಸೈನ್ಯದ ಸೇನಾಪತಿಗಳಿಗೆ ಜನರನ್ನು ಲೆಕ್ಕಹಾಕಲು ಆಜ್ಞಾಪಿಸಿದನು. ಆದ್ದರಿಂದ ಯೋವಾಬನು ಸೈನ್ಯದ ಸೇನಾಪತಿಗಳೊಡನೆ ಇಸ್ರೇಲಿನ ಜನರನ್ನು ಲೆಕ್ಕಹಾಕಲು ಹೊರಟನು.


ರಾಜನಾದ ಅಹಾಜನು ಆಜ್ಞಾಪಿಸಿದಂತೆಯೇ ಯಾಜಕನಾದ ಊರೀಯನು ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು