34 ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.
34 ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.
34 ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದುನಿಂತು ಪ್ರೇಷಿತರನ್ನು ಸ್ವಲ್ಪಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ
34 ಆದರೆ ಎಲ್ಲಾ ಜನರಿಂದ ಮಾನಹೊಂದಿದ ನ್ಯಾಯಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟು ಸಭೆಯವರಿಗೆ -
34 ಆದರೆ ಗಮಲಿಯೇಲ್ ಎಂಬ ಹೆಸರಿನ ಒಬ್ಬ ಫರಿಸಾಯನಿದ್ದನು. ಅವನು ನಿಯಮ ಬೋಧಕನೂ ಎಲ್ಲಾ ಜನರ ಗೌರವಕ್ಕೆ ಪಾತ್ರನೂ ಆಗಿದ್ದನು. ಅವನು ನ್ಯಾಯಸಭೆಯಲ್ಲಿ ಎದ್ದು ನಿಂತುಕೊಂಡು, ಸ್ವಲ್ಪ ಸಮಯ ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಆಜ್ಞಾಪಿಸಿದನು.
ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.
ಮೂರು ದಿನಗಳಾದ ಮೇಲೆ ಆತನನ್ನು ಕಂಡುಕೊಂಡರು. ಯೇಸುವು ದೇವಾಲಯದಲ್ಲಿ ಧಾರ್ಮಿಕ ಉಪದೇಶಕರೊಡನೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಮತ್ತು ಅವರಿಗೆ ಪ್ರಶೆಗಳನ್ನು ಕೇಳುತ್ತಾ ಇದ್ದನು.
ಒಂದು ದಿನ ಯೇಸು ಜನರಿಗೆ ಬೋಧಿಸುತ್ತಿದ್ದನು. ಫರಿಸಾಯರು ಮತ್ತು ಧರ್ಮೋಪದೇಶಕರು ಸಹ ಅಲ್ಲಿ ಕುಳಿತುಕೊಂಡಿದ್ದರು. ಅವರು, ಗಲಿಲಾಯದಿಂದಲೂ ಜುದೇಯ ಪ್ರಾಂತ್ಯದ ಊರುಗಳಿಂದಲೂ ಜೆರುಸಲೇಮಿನಿಂದಲೂ ಬಂದಿದ್ದರು. ರೋಗಿಗಳನ್ನು ಗುಣಪಡಿಸಲು ಪ್ರಭುವಿನ ಶಕ್ತಿಯು ಆತನಲ್ಲಿತ್ತು.
ಆಗ ಸರದಾರರು ಮತ್ತು ಸಮಸ್ತ ಜನರು ಒಬ್ಬರಿಗೊಬ್ಬರು ಮಾತನಾಡಿ ಯಾಜಕರಿಗೂ ಪ್ರವಾದಿಗಳಿಗೂ, “ಯೆರೆಮೀಯನನ್ನು ಕೊಲ್ಲಕೂಡದು. ಯೆರೆಮೀಯನು ನಮಗೆ ಹೇಳಿದ ಸಂಗತಿಗಳು ನಮ್ಮ ದೇವರಾದ ಯೆಹೋವನಿಂದ ಬಂದವುಗಳಾಗಿವೆ” ಎಂದು ಹೇಳಿದರು.
ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.