ಅಪೊಸ್ತಲರ ಕೃತ್ಯಗಳು 5:35 - ಪರಿಶುದ್ದ ಬೈಬಲ್35 ಬಳಿಕ ಅವನು ಅವರಿಗೆ, “ಇಸ್ರೇಲ್ ಜನರೇ, ನೀವು ಇವರಿಗೆ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯಾಗಿರಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅನಂತರ ಸಭೆಯವರಿಗೆ, “ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಕುರಿತು ಎಚ್ಚರಿಕೆಯುಳ್ಳವರಾಗಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಸಭೆಯನ್ನುದ್ದೇಶಿಸಿ, “ಇಸ್ರಯೇಲ್ ಸಭಾಸದಸ್ಯರೇ, ಇವರ ವಿರುದ್ಧ ನೀವು ಕೈಗೊಳ್ಳಬೇಕೆಂದಿರುವ ಕ್ರಮದ ಬಗ್ಗೆ ಎಚ್ಚರಿಕೆಯಿಂದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇಸ್ರಾಯೇಲ್ ಜನರೇ, ನೀವು ಈ ಮನುಷ್ಯರ ವಿಷಯದಲ್ಲಿ ಮಾಡಬೇಕೆಂದಿರುವದನ್ನು ಕುರಿತು ಎಚ್ಚರಿಕೆಯುಳ್ಳವರಾಗಿರ್ರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಗಮಲಿಯೇಲನು ಸಭೆಯನ್ನುದ್ದೇಶಿಸಿ, “ಇಸ್ರಾಯೇಲರೇ, ಈ ಜನರ ವಿರುದ್ಧ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯುಳ್ಳವರಾಗಿರಿ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ಮಾನಾ ತೆನಿ ಇಸ್ರಾಯೆಲಾಂಚ್ಯಾ ಲೊಕಾನು ತುಮಿ ಹೆಂಕಾ ಬುರ್ಶೆ ಕರುಚೆ ಮನುನ್ ಹೊತ್ತ್ಯಾಚಾ ವಿಶಯಾತ್ ಹುಶ್ಯಾರ್ಕಿನ್ ರ್‍ಹಾವಾ! ಅಧ್ಯಾಯವನ್ನು ನೋಡಿ |
“ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”