Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 5:38 - ಪರಿಶುದ್ದ ಬೈಬಲ್‌

38 ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹೀಗಿರುವುದರಿಂದ ನಾನು ನಿಮಗೆ ಹೇಳುವುದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ. ಏಕೆಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹೀಗಿರುವದರಿಂದ ನಾನು ನಿಮಗೆ ಹೇಳುವದೇನಂದರೆ ನೀವು ಆ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಯಾಕಂದರೆ ಈ ಯೋಚನೆಯು ಅಥವಾ ಈ ಕೆಲಸವು ಮನುಷ್ಯರಿಂದಾಗಿದ್ದರೆ ತಾನೇ ಕೆಡುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದ್ದರಿಂದ, ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ! ಅವರನ್ನು ಬಿಟ್ಟುಬಿಡಿರಿ! ಏಕೆಂದರೆ ಅವರ ಉದ್ದೇಶ ಅಥವಾ ಕಾರ್ಯವು ಮನುಷ್ಯರಿಂದ ಬಂದದ್ದಾಗಿದ್ದರೆ, ಅದೇ ವ್ಯರ್ಥವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 “ತಸೆ ಹೊವ್ನ್ ಅತ್ತಾ ಮಿಯಾ ತುಮ್ಕಾ ಸಾಂಗ್ತಲೆ ಕಾಯ್ ಮಟ್ಲ್ಯಾರ್ ಹ್ಯಾ ಲೊಕಾಂಚ್ಯಾಕ್ನಾ ಧುರ್ ರ್‍ಹಾವಾ, ತೆಂಚ್ಯಾ ಎವ್ಡ್ಯಾಕ್ ತೆಂಕಾ ಸೊಡುನ್ ಸೊಡಾ ತೆಂಚಿ ಯೌಜನ್ ಮಾನ್ಸಾಂಚ್ಯಾಕ್ನಾ ಯೆಲ್ಲಿ ಹೊಲ್ಯಾರ್ ಪಡುನ್ ಜಾತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 5:38
14 ತಿಳಿವುಗಳ ಹೋಲಿಕೆ  

ಯೇಸು, “ಪರಲೋಕದಲ್ಲಿರುವ ನನ್ನ ತಂದೆ ನೆಡದಿರುವ ಪ್ರತಿಯೊಂದು ಗಿಡವನ್ನು ಬೇರಿನೊಂದಿಗೆ ಕಿತ್ತುಹಾಕಲಾಗುವುದು.


ಯಾರೇ ಆಗಲಿ ತಾವು ಮುಂತಿಳಿಸಿದ್ದನ್ನು ಯೆಹೋವನು ಆಜ್ಞಾಪಿಸದ ಹೊರತು ಅದು ನೆರವೇರುವುದಿಲ್ಲ.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಏಕೆಂದರೆ ಈ ಲೋಕದ ಜ್ಞಾನವು ದೇವರಿಗೆ ಮೂರ್ಖತನವಾಗಿದೆ. “ದೇವರು ಜಾಣರನ್ನು ಅವರ ಕುತಂತ್ರದ ಮಾರ್ಗಗಳಲ್ಲೇ ಹಿಡಿದುಕೊಳ್ಳುವನು” ಎಂದು ಪವಿತ್ರ ಗ್ರಂಥದಲ್ಲಿ ಬರೆಯಲಾಗಿದೆ.


ಈ ಕಾರ್ಯಗಳನ್ನು ಮಾಡಲು ನಾವು ಅವನಿಗೆ ಅವಕಾಶ ಕೊಟ್ಟರೆ ಜನರೆಲ್ಲರೂ ಇವನಲ್ಲಿ ನಂಬಿಕೆ ಇಡುವರು. ಆಗ ರೋಮ್ ರಾಜ್ಯದವರು ಬಂದು ನಮ್ಮ ದೇವಾಲಯವನ್ನೂ ನಮ್ಮ ದೇಶವನ್ನೂ ವಶಪಡಿಸಿಕೊಳ್ಳುವರು” ಅಂದರು.


ನನ್ನ ದೇಶದಲ್ಲಿ ಅಶ್ಶೂರದ ರಾಜನನ್ನು ನಾಶಮಾಡುವೆನು. ನನ್ನ ಪರ್ವತಗಳ ಮೇಲೆ ಆ ರಾಜನ ಮೇಲೆ ತುಳಿದುಕೊಂಡು ನಡೆದಾಡುವೆನು. ಆ ರಾಜನು ನನ್ನ ಜನರನ್ನು ಗುಲಾಮರನ್ನಾಗಿ ಮಾಡಿದನು. ಅವರ ಹೆಗಲಿನ ಮೇಲೆ ನೊಗವನ್ನಿಟ್ಟನು. ಆ ನೊಗವು ಯೆಹೂದದ ಹೆಗಲಿನಿಂದ ತೆಗೆಯಲ್ಪಡುವದು.


ಅವರ ಕುತಂತ್ರವು ನಮಗೆ ಗೊತ್ತಾಯಿತೆಂದು ವೈರಿಗಳಿಗೆ ತಿಳಿದಾಗ ದೇವರೇ ಅವರ ಯೋಜನೆಯನ್ನು ನಿಷ್ಫಲಮಾಡಿದನೆಂದು ಅವರು ತಿಳಿದರು. ಮತ್ತೆ ನಾವೆಲ್ಲಾ ಕಟ್ಟುವ ಕೆಲಸಕ್ಕೆ ಕೈಹಾಕಿದೆವು. ಅವರವರ ಭಾಗಕ್ಕೆ ಜನರು ತೆರಳಿ ತಮ್ಮ ಕೆಲಸವನ್ನು ಪ್ರಾರಂಭಿಸಿದರು.


ಬಳಿಕ ಅವನು ಅವರಿಗೆ, “ಇಸ್ರೇಲ್ ಜನರೇ, ನೀವು ಇವರಿಗೆ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯಾಗಿರಿ!


ಯೋಹಾನನು ಜನರಿಗೆ ದೀಕ್ಷಾಸ್ನಾನ ಮಾಡಿಸಿದ್ದು ದೇವರಿಂದ ಬಂದ ಅಧಿಕಾರದಿಂದಲೋ ಅಥವಾ ಮನುಷ್ಯರಿಂದ ಬಂದ ಅಧಿಕಾರದಿಂದಲೋ? ನನಗೆ ತಿಳಿಸಿ!” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು