ಅಪೊಸ್ತಲರ ಕೃತ್ಯಗಳು 5:39 - ಪರಿಶುದ್ದ ಬೈಬಲ್39 ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವುದಕ್ಕೆ ನಿಮ್ಮಿಂದ ಸಾಧ್ಯವಾಗುವುದಿಲ್ಲ; ನೀವು ಒಂದು ವೇಳೆ ದೇವರ ವಿರುದ್ಧ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಅದು ದೇವರಿಂದಾಗಿದ್ದರೆ ಅದನ್ನು ಕೆಡಿಸುವದಕ್ಕೆ ನಿಮ್ಮಿಂದ ಆಗುವದಿಲ್ಲ. ನೀವು ಒಂದು ವೇಳೆ ದೇವರ ಮೇಲೆ ಯುದ್ಧಮಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಖರೆ ತಿ ಯವ್ಜನ್ ದೆವಾಕ್ನಾ ಯೆಲ್ಲಿ ಹೊಲ್ಯಾರ್ ತುಮಿ ತೆಂಕಾ ಅಡ್ಕಳ್ ಕರುಕ್ ಹೊಯ್ನಾ ತುಮಿ ದೆವಾಕುಚ್ ವಿರೊಧ್ ಹೊವ್ನ್ ಝಗ್ಡೊ ಕರ್‍ಲೆ ಸಾರ್ಕೆ ಹೊತಾ! ಮನುನ್ ಸಾಂಗಲ್ಯಾನ್ ತನ್ನಾ ಗಮಲಿಯೆಲಾಚ್ಯಾ ಸಲಹಾಕ್ನಿ ಜುದೆವಾಂಚ್ಯಾ ಮುಖಂಡಾನಿ ಒಪ್ಪುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.
ನೀನು ಅವರಿಗೆ, ‘ನಿಮ್ಮ ಸೋದರರಾದ ಇಸ್ರೇಲರ ವಿರುದ್ಧ ನೀವು ಯುದ್ಧಕ್ಕೆ ಹೋಗಲೇಬಾರದೆಂದು ಯೆಹೋವನು ಹೇಳುತ್ತಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ಮನೆಗೆ ಹೋಗಬೇಕು. ಈ ಸಂಗತಿಗಳೆಲ್ಲ ಸಂಭವಿಸುವಂತೆ ನಾನೇ ಮಾಡಿದೆನು’ ಎಂದು ಹೇಳು” ಎಂಬುದಾಗಿ ತಿಳಿಸಿದನು. ಆದ್ದರಿಂದ ರೆಹಬ್ಬಾಮನ ಸೈನ್ಯದಲ್ಲಿನ ಜನರೆಲ್ಲರೂ ಯೆಹೋವನ ಆಜ್ಞೆಯನ್ನು ಅನುಸರಿಸಿದರು. ಅವರು ತಮ್ಮ ಮನೆಗಳಿಗೆ ಹೋದರು.