ಅಪೊಸ್ತಲರ ಕೃತ್ಯಗಳು 5:41 - ಪರಿಶುದ್ದ ಬೈಬಲ್41 ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಅಪೊಸ್ತಲರು ತಾವು ಯೇಸುವಿನ ಹೆಸರಿನ ನಿಮಿತ್ತವಾಗಿ ಅವಮಾನಪಡುವುದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಯೇಸುವಿನ ನಾಮಕ್ಕೋಸ್ಕರ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದೆವೆಂದು ಪ್ರೇಷಿತರು ಸಂತೋಷಭರಿತರಾಗಿ ನ್ಯಾಯಸಭೆಯಿಂದ ಹೊರಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಅಪೊಸ್ತಲರು ತಾವು ಆ ಹೆಸರಿನ ನಿವಿುತ್ತವಾಗಿ ಅವಮಾನ ಪಡುವದಕ್ಕೆ ಯೋಗ್ಯರೆನಿಸಿಕೊಂಡೆವೆಂದು ಸಂತೋಷಿಸುತ್ತಾ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಆದ್ದರಿಂದ ಯೇಸುವಿನ ನಾಮದ ನಿಮಿತ್ತ ಅವಮಾನಪಡಲು ತಾವು ಯೋಗ್ಯರಾದೆವಲ್ಲಾ ಎಂದು ಅಪೊಸ್ತಲರು ಸಂತೋಷಪಡುತ್ತಾ ನ್ಯಾಯಸಭೆಯಿಂದ ಹೊರಗೆ ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್41 ಹಿ ಅಪೊಸ್ತಲಾ ನ್ಯಾಯ್ ಕರ್ತಲ್ಯಾ ಸಭೆತ್ನಾ ಬಾಯ್ರ್ ಗೆಲೆ ಜೆಜುಚ್ಯಾ ನಾಂವಾ ಸಾಟ್ನಿ ಅವಮಾನ್ ಕರುನ್ ಘೆವ್ಕ್ ಅಮಿಬಿ ಸಕ್ತಾಂವ್ ಮನುನ್ ಕುಶಿ ಹೊಲ್ಯಾನಿ. ಅಧ್ಯಾಯವನ್ನು ನೋಡಿ |
ಯೆಹೋವನ ಆಜ್ಞೆಗಳನ್ನು ಪರಿಪಾಲಿಸುವ ನೀವು ಆತನು ಹೇಳುವ ಸಂಗತಿಗಳನ್ನು ಕಿವಿಗೊಟ್ಟು ಕೇಳಬೇಕು. ಆತನು ಹೇಳುವುದೇನೆಂದರೆ, “ನಿಮ್ಮ ಸಹೋದರರು ನಿಮ್ಮನ್ನು ದ್ವೇಷಿಸಿದರು. ನೀವು ನನ್ನನ್ನು ಅನುಸರಿಸಿದ್ದರಿಂದ ನಿಮ್ಮ ಮೇಲೆರಗಿದರು. ‘ಯೆಹೋವನು ಸನ್ಮಾನ ಹೊಂದಿದ ಬಳಿಕ ನಿಮ್ಮ ಬಳಿಗೆ ಬರುತ್ತೇವೆ. ಆಮೇಲೆ ನಿಮ್ಮ ಆನಂದವನ್ನು ಅನುಭವಿಸುತ್ತೇವೆ’ ಎಂದು ನಿಮ್ಮ ಸಹೋದರರು ಅಂದರು. ಆ ದುಷ್ಟ ಜನರು ಶಿಕ್ಷಿಸಲ್ಪಡುವರು.”
ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.