ಅಪೊಸ್ತಲರ ಕೃತ್ಯಗಳು 6:14 - ಪರಿಶುದ್ದ ಬೈಬಲ್14 ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿ, ಮೋಶೆ ನಮಗೆ ನೇಮಿಸಿರುವ ಆಚಾರಗಳನ್ನು ಬೇರೆ ಮಾಡುವನೆಂಬುದಾಗಿ ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಜರೇತಿನ ಆ ಯೇಸು ಈ ಮಹಾದೇವಾಲಯವನ್ನು ನಾಶಗೊಳಿಸುವನೆಂದೂ ಮೋಶೆ ನಮಗೆ ವಿಧಿಸಿದ ಸಂಪ್ರದಾಯಗಳನ್ನು ಬದಲಿಸುವನೆಂದೂ ಇವನು ಹೇಳಿರುತ್ತಾನೆ. ಇದನ್ನು ನಾವು ಕೇಳಿದ್ದೇವೆ,’ ಎಂದು ಹೇಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆ ನಮಗೆ ನೇವಿುಸಿರುವ ಆಚಾರಗಳನ್ನು ಬೇರೆ ಮಾಡುವನೆಂಬದಾಗಿ ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನಜರೇತಿನ ಯೇಸು ಈ ಸ್ಥಳವನ್ನು ನಾಶಮಾಡಿಬಿಡುತ್ತಾರೆಂದೂ ನಮಗೆ ಒಪ್ಪಿಸಿದ ಮೋಶೆಯ ಪದ್ಧತಿಗಳನ್ನು ಬದಲಾಯಿಸುತ್ತಾರೆಂದೂ ಇವನು ಹೇಳುವುದನ್ನು ನಾವು ಕೇಳಿದ್ದೇವೆ,” ಎಂದು ಅವನ ವಿರುದ್ಧ ಸಾಕ್ಷಿ ಹೇಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ನಜರೆತಾತ್ಲೊ ಜೆಜು ಹಿ ಗುಡಿ ಪಾಡ್ವುನ್ ಮೊಯ್ಜೆಚೆ ಖಾಯ್ದೆ ಬದಲ್ತಾ ಮನುನ್ ಹ್ಯೊ ಮಾನುಸ್ ಸಾಂಗುಕ್ ಲಾಗಲ್ಲೆ ಅಮಿ ಆಯಿಕ್ಲಾಂವ್” ಮನುನ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |
ಹಾಗಾದರೆ ಧರ್ಮಶಾಸ್ತ್ರವಿದ್ದದ್ದು ಯಾಕೆ? ಜನರ ಅಪರಾಧಗಳನ್ನು ತೋರಿಸುವುದಕ್ಕಾಗಿ ಧರ್ಮಶಾಸ್ತ್ರವನ್ನು ಕೊಡಲಾಯಿತು. ಅಬ್ರಹಾಮನ ವಿಶೇಷ ಸಂತಾನವು ಬರುವ ತನಕ ಧರ್ಮಶಾಸ್ತ್ರವಿತ್ತು. ಈ ಸಂತಾನದ (ಕ್ರಿಸ್ತನು) ಬಗ್ಗೆಯೇ ದೇವರು ವಾಗ್ದಾನ ಮಾಡಿದನು. ಧರ್ಮಶಾಸ್ತ್ರವನ್ನು ದೇವದೂತರ ಮೂಲಕ ಕೊಡಲಾಯಿತು. ಜನರಿಗೆ ಧರ್ಮಶಾಸ್ತ್ರವನ್ನು ಕೊಡುವುದಕ್ಕಾಗಿ ದೇವದೂತರು ಮೋಶೆಯನ್ನು ಮಧ್ಯವರ್ತಿಯನ್ನಾಗಿ ಉಪಯೋಗಿಸಿದರು.
ಹೀಗೆ ಹೇಳಿದರು, “ಪ್ರವಾದಿಯಾದ ಮೀಕಾಯನು ಮೋರೆಷೆತ್ ನಗರದವನಾಗಿದ್ದನು. ಹಿಜ್ಕೀಯನು ಯೆಹೂದದ ರಾಜನಾಗಿದ್ದ ಕಾಲದಲ್ಲಿ ಮೀಕಾಯನು ಪ್ರವಾದಿಯಾಗಿದ್ದನು. ಯೆಹೂದದ ಸಮಸ್ತ ಜನರಿಗೆ ಮೀಕಾಯನು ಹೀಗೆ ಹೇಳಿದನು: ‘ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ: ‘ಚೀಯೋನ್ ನಗರವು ನೇಗಿಲುಹೊಡೆದ ಹೊಲವಾಗುವುದು. ಜೆರುಸಲೇಮ್ ನಗರವು ಕಲ್ಲಿನ ದಿಬ್ಬವಾಗುವುದು. ಪವಿತ್ರ ಆಲಯವಿದ್ದ ಪರ್ವತವು ಮರಗಿಡಗಳಿಂದ ಮುಚ್ಚಿಹೋಗುವುದು.’