Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 6:3 - ಪರಿಶುದ್ದ ಬೈಬಲ್‌

3 ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ, ಜ್ಞಾನಸಂಪನ್ನರೂ ಮತ್ತು ಒಳ್ಳೆಯ ಸಾಕ್ಷಿಯನ್ನುಳಿಸಿಕೊಂಡಿರುವ ಏಳು ಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ. ಅವರನ್ನು ಈ ಕೆಲಸಕ್ಕಾಗಿ ನೇಮಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದುದರಿಂದ ಸಹೋದರರೇ, ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಸನ್ಮಾನಿತರೂ ಆಗಿರುವ ಏಳು ವ್ಯಕ್ತಿಗಳನ್ನು ನಿಮ್ಮಿಂದ ಆರಿಸಿಕೊಳ್ಳಿ, ನಾವು ಅವರಿಗೆ ಈ ಜವಾಬ್ದಾರಿಯನ್ನು ವಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದದರಿಂದ ಸಹೋದರರೇ, ಸಂಭಾವಿತರೂ ಪವಿತ್ರಾತ್ಮಭರಿತರೂ ಜ್ಞಾನಸಂಪನ್ನರೂ ಆಗಿರುವ ಏಳುಮಂದಿಯನ್ನು ನಿಮ್ಮೊಳಗಿಂದ ನೋಡಿ ಆರಿಸಿಕೊಳ್ಳಿರಿ; ಅವರನ್ನು ಈ ಕೆಲಸದ ಮೇಲೆ ನೇವಿುಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 “ತಸೆ ಹೊವ್ನ್ ಭಾವಾನು ಅನಿ ಭೆನಿಯಾನು ತುಮ್ಚ್ಯಾ ಮದ್ಲ್ಯಾ ಲೊಕಾನಿ ಸಾಂಗಲ್ಲ್ಯಾ ಸಾರ್ಕೆ, ಬುದ್ದ್ ಹೊತ್ತೆ ಅನಿ ಅನಿ ಪವಿತ್ರ್ ಆತ್ಮ್ಯಾನ್ ಭರಲ್ಲ್ಯಾ ಸಾತ್ ಲೊಕಾಕ್ನಿ ಎಚುನ್ ಕಾಡಾ, ಅಮಿ ತೆಂಕಾ ಹೆ ಕಾಮ್ ಒಪ್ಸುನ್ ದಿತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 6:3
34 ತಿಳಿವುಗಳ ಹೋಲಿಕೆ  

ಆಗ ನಾನು ನಿಮಗೆ ಹೇಳಿದ್ದೇನೆಂದರೆ: ‘ನಿಮ್ಮನಿಮ್ಮ ಕುಲಗಳಿಂದ ಯೋಗ್ಯರಾದವರನ್ನು ಆರಿಸಿರಿ. ಅವರನ್ನು ನಿಮ್ಮ ನಾಯಕರನ್ನಾಗಿ ನೇಮಿಸುವೆನು. ಅವರು ವಿವೇಕಿಗಳಾಗಿಯೂ ಅನುಭವಶಾಲಿಗಳಾಗಿಯೂ ಇರಬೇಕು’ ಎಂದು ಹೇಳಿದೆನು.


ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದವಳೆಂದೂ ಹೆಸರನ್ನು ಪಡೆದಿರಬೇಕು. ಅಂದರೆ, ಅವಳು ತನ್ನ ಮಕ್ಕಳನ್ನು ಸಾಕಿಸಲಹಿದವಳೂ, ಅತಿಥಿಗಳನ್ನು ಸತ್ಕರಿಸಿದವಳೂ, ದೇವಜನರ ಪಾದಗಳನ್ನು ತೊಳೆದವಳೂ, ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಿದವಳೂ ಮತ್ತು ತನ್ನಿಂದಾದಷ್ಟು ಒಳ್ಳೆಯ ಕಾರ್ಯಗಳನ್ನು ಮಾಡಿದವಳೂ ಆಗಿರಬೇಕು.


ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.


ಎಲ್ಲಾ ಒಳ್ಳೆಯ ದಾನಗಳೂ ಕುಂದಿಲ್ಲದ ವರಗಳೂ, ಎಲ್ಲಾ ಬೆಳಕುಗಳಿಗೆ (ಸೂರ್ಯ, ಚಂದ್ರ, ನಕ್ಷತ್ರಗಳು) ಮೂಲ ಕಾರಣನಾದ ಸೃಷ್ಟಿ ಕರ್ತನಿಂದ ಬರುತ್ತವೆ. ದೇವರು ಬದಲಾಗುವುದಿಲ್ಲ. ಆತನು ಎಲ್ಲಾ ಕಾಲದಲ್ಲಿಯೂ ಒಂದೇ ರೀತಿಯಲ್ಲಿರುತ್ತಾನೆ.


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


ನಾನು ಬಂದಾಗ, ನಿಮ್ಮ ಕೊಡುಗೆಯನ್ನು ಕೆಲವರ ಮೂಲಕ ಜೆರುಸಲೇಮಿಗೆ ಕಳುಹಿಸುವೆನು. ನೀವೆಲ್ಲರೂ ಯಾರನ್ನು ಇಷ್ಟಪಡುತ್ತೀರೋ ಅವರಿಗೆ ನಾನು ಪರಿಚಯದ ಪತ್ರಗಳನ್ನು ಕೊಟ್ಟು ಕಳುಹಿಸುವೆನು.


“ದಮಸ್ಕದಲ್ಲಿ ಅನನೀಯ ಎಂಬುವನು ನನ್ನ ಬಳಿಗೆ ಬಂದನು. ಅನನೀಯನು ಧಾರ್ಮಿಕ ವ್ಯಕ್ತಿಯಾಗಿದ್ದನು. ಅವನು ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯನಾಗಿದ್ದನು. ಅಲ್ಲಿ ವಾಸವಾಗಿದ್ದ ಯೆಹೂದ್ಯರೆಲ್ಲರು ಅವನನ್ನು ಗೌರವಿಸುತ್ತಿದ್ದರು.


ಆ ಜನರು, “ಕೊರ್ನೇಲಿಯ ಎಂಬ ಒಬ್ಬ ಸೇನಾಧಿಕಾರಿ ಇದ್ದಾನೆ. ಅವನು ಧಾರ್ಮಿಕ ವ್ಯಕ್ತಿ. ಅವನು ದೇವರನ್ನು ಆರಾಧಿಸುತ್ತಾನೆ. ಯೆಹೂದ್ಯ ಜನರೆಲ್ಲರೂ ಅವನನ್ನು ಗೌರವಿಸುತ್ತಾರೆ. ನಿನ್ನನ್ನು ತನ್ನ ಮನೆಗೆ ಆಹ್ವಾನಿಸಿ ನೀನು ಹೇಳುವ ಸಂಗತಿಗಳನ್ನು ಕೇಳಬೇಕೆಂದು ದೇವದೂತನೊಬ್ಬನು ಕೊರ್ನೇಲಿಯನಿಗೆ ತಿಳಿಸಿದ್ದಾನೆ” ಎಂದು ಹೇಳಿದರು.


ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.


ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.


“ಆದ್ದರಿಂದ ಬೇರೊಬ್ಬನು ನಮ್ಮೊಂದಿಗೆ ಸೇರಿ, ಯೇಸುವಿನ ಪುನರುತ್ಥಾನಕ್ಕೆ ಸಾಕ್ಷಿಯಾಗಿರಬೇಕು. ಪ್ರಭುವಾದ ಯೇಸು ನಮ್ಮಲ್ಲಿ ಹೋಗುತ್ತಾ ಬರುತ್ತಾ ಇದ್ದ ಕಾಲವೆಲ್ಲಾ ಅವನು ನಮ್ಮ ಗುಂಪಿನಲ್ಲಿದ್ದವರಲ್ಲಿ ಒಬ್ಬನಾಗಿರಬೇಕು. ಯೋಹಾನನು ದೀಕ್ಷಾಸ್ನಾನ ಕೊಡಲು ಆರಂಭ ಮಾಡಿದ ದಿನದ ಮೊದಲುಗೊಂಡು ಯೇಸುವು ನಮ್ಮ ಬಳಿಯಿಂದ ಪರಲೋಕಕ್ಕೆ ಎತ್ತಲ್ಪಟ್ಟ ದಿನದವರೆಗೂ ಅವನು ನಮ್ಮೊಂದಿಗಿದ್ದವನಾಗಿರಬೇಕು.”


“ಆದರೆ ನೀವು ಉಪದೇಶಕರೆನಿಸಿಕೊಳ್ಳಬೇಡಿ. ನೀವೆಲ್ಲರೂ ಸಹೋದರಸಹೋದರಿಯರು. ನಿಮಗೆ ಒಬ್ಬನೇ ಉಪದೇಶಕನು.


ನಮ್ಮ ದೇವರು ಈ ಉದಾಹರಣೆಯ ಮೂಲಕ ಒಂದು ಪಾಠವನ್ನು ಕಲಿಸುತ್ತಾನೆ. ಏನೆಂದರೆ ಆತನು ಜನರನ್ನು ಶಿಕ್ಷಿಸುವಾಗ ನ್ಯಾಯವಾಗಿ ಶಿಕ್ಷಿಸುತ್ತಾನೆ.


ಆತನ ಜನರನ್ನು ಆಳುವ ನ್ಯಾಯಾಧಿಪತಿಗಳಿಗೆ ಯೆಹೋವನು ಜ್ಞಾನವನ್ನು ಕೊಡುವನು. ಪುರದ್ವಾರದಲ್ಲಿ ಯುದ್ಧಮಾಡುವ ಆತನ ಜನರಿಗೆ ಯೆಹೋವನು ಬಲವನ್ನು ಕೊಡುವನು.


ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.


ಲುಸ್ತ್ರ ಮತ್ತು ಇಕೋನಿಯಾ ಪಟ್ಟಣಗಳ ವಿಶ್ವಾಸಿಗಳು ತಿಮೊಥೆಯನನ್ನು ಗೌರವಿಸುತ್ತಿದ್ದರು; ಮತ್ತು ಅವನ ಬಗ್ಗೆ ಒಳ್ಳೆಯದನ್ನೇ ಹೇಳುತ್ತಿದ್ದರು.


ಸಭೆಯು ಇವರ ಕೈಯಲ್ಲಿ ಪತ್ರವನ್ನು ಕಳುಹಿಸಿಕೊಟ್ಟಿತು. ಆ ಪತ್ರದಲ್ಲಿ ಹೀಗೆ ಬರೆದಿತ್ತು: ಅಂತಿಯೋಕ್ಯ ಪಟ್ಟಣದಲ್ಲಿಯೂ ಸಿರಿಯ ಮತ್ತು ಸಿಲಿಸಿಯ ನಾಡುಗಳಲ್ಲಿಯೂ ಇರುವ ಯೆಹೂದ್ಯರಲ್ಲದ ಸಹೋದರರಿಗೆಲ್ಲಾ, ನಿಮ್ಮ ಸಹೋದರರಾದ ಅಪೊಸ್ತಲರೂ ಹಿರಿಯರೂ ಬರೆಯುವುದೇನೆಂದರೆ: ಪ್ರಿಯ ಸಹೋದರರೇ,


ಇದರ ಬಗ್ಗೆ ಸಹೋದರರಿಗೆ ತಿಳಿದಾಗ ಅವರು ಸೌಲನನ್ನು ಸೆಜರೇಯ ಪಟ್ಟಣಕ್ಕೆ ಕೊಂಡೊಯ್ದು ಅಲ್ಲಿಂದ ತಾರ್ಸಸ್ ಪಟ್ಟಣಕ್ಕೆ ಕಳುಹಿಸಿದರು.


ಆದರೆ ನೀನು ಜನರೊಳಗೆ ದೇವಭಕ್ತರೂ ಲಂಚಮುಟ್ಟದವರೂ ಆಗಿರುವವರನ್ನು ಆರಿಸಿಕೊಳ್ಳಬೇಕು. ಅವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು.


ಆದ್ದರಿಂದ ಸಹೋದರರ (ಶಿಷ್ಯರ) ಮಧ್ಯೆ ಒಂದು ಕಥೆಯೇ ಹರಡಿಕೊಂಡಿತು. ಯೇಸುವಿನ ಪ್ರೀತಿಯ ಈ ಶಿಷ್ಯನು ಸಾಯುವುದಿಲ್ಲವೆಂದು ಅವರು ಹೇಳುತ್ತಿದ್ದರು. ಆದರೆ ಅವನು ಸಾಯುವುದಿಲ್ಲವೆಂದು ಯೇಸು ಹೇಳಲಿಲ್ಲ. “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು?” ಎಂದಷ್ಟೇ ಆತನು ಹೇಳಿದ್ದನು.


ಕೆಲವು ದಿನಗಳಾದ ಮೇಲೆ ವಿಶ್ವಾಸಿಗಳು ಸಭೆ ಸೇರಿದ್ದರು. (ಅಲ್ಲಿ ಸುಮಾರು ನೂರಿಪ್ಪತ್ತು ಮಂದಿ ಇದ್ದರು.) ಪೇತ್ರನು ಎದ್ದುನಿಂತುಕೊಂಡು ಹೀಗೆಂದನು:


ಆಗ ಹನ್ನೆರಡು ಮಂದಿ ಅಪೊಸ್ತಲರು ಇಡೀ ಶಿಷ್ಯಸಮುದಾಯದ ಸಭೆಯನ್ನು ಕರೆದು ಅವರಿಗೆ, “ದೇವರ ವಾಕ್ಯವನ್ನು ಬೋಧಿಸುವುದು ನಮ್ಮ ಕೆಲಸ. ಆದರೆ ಅದು ನಿಂತುಹೋಗುವುದು ಸರಿಯಲ್ಲ! ನಾವು ಜನರಿಗೆ ಊಟವನ್ನು ಒದಗಿಸಲು ಸಹಾಯ ಮಾಡುವುದಕ್ಕಿಂತಲೂ ದೇವರ ವಾಕ್ಯೋಪದೇಶವನ್ನು ಮುಂದುವರಿಸುವುದು ಒಳ್ಳೆಯದು.


ಇಡೀ ಸಮುದಾಯವು ಈ ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಈ ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.)


ಅಲ್ಲಿ ಕೆಲವು ಮಂದಿ ವಿಶ್ವಾಸಿಗಳನ್ನು ಕಂಡೆವು. ತಮ್ಮೊಂದಿಗೆ ಒಂದು ವಾರವಾದರೂ ಇರಬೇಕೆಂದು ಅವರು ನಮ್ಮನ್ನು ಕೇಳಿಕೊಂಡರು. ಕೊನೆಗೆ ನಾವು ರೋಮಿಗೆ ಹೊರಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು