ಅಪೊಸ್ತಲರ ಕೃತ್ಯಗಳು 6:7 - ಪರಿಶುದ್ದ ಬೈಬಲ್7 ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ದೇವರ ವಾಕ್ಯವು ಪ್ರಬಲವಾಯಿತು; ಶಿಷ್ಯರ ಸಂಖ್ಯೆಯು ಯೆರೂಸಲೇಮಿನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂದಿತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತ ನಂಬಿಕೆಗೆ ಒಳಗಾಗುತ್ತಾ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ದೇವರವಾಕ್ಯವು ಪ್ರವರ್ಧಿಸತೊಡಗಿತು. ವಿಶ್ವಾಸಿಗಳ ಸಂಖ್ಯೆ ಜೆರುಸಲೇಮಿನಲ್ಲಿ ಬಹಳವಾಗಿ ಹೆಚ್ಚಿತು. ಬಹುಮಂದಿ ಯಾಜಕರೂ ಆ ವಿಶ್ವಾಸಕ್ಕೆ ಶರಣಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ದೇವರ ವಾಕ್ಯವು ಅಭಿವೃದ್ಧಿಯಾಗುತ್ತಾ ಬಂತು. ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು. ಯಾಜಕರಲ್ಲಿಯೂ ಅನೇಕ ಜನರು ನಂಬಿಕೆಗೆ ವಿಧೇಯರಾದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ದೆವಾಚಿ ಗೊಸ್ಟಿಯಾ ಲೈ ಲೊಕಾಕ್ನಿ ಜಾವ್ನ್ ಪಾವುಕ್ ಲಾಗ್ಲಿ, ಜೆರುಜಲೆಮಾತ್ಲ್ಯಾ ಶಿಸಾಂಚೊ ತಾಂಡೊ ಲೈ ವಾಡುನ್ಗೆತ್ ಯೆಲೊ, ಲೈ ಜುದೆವಾಂಚ್ಯಾ ಯಾಜಕಾನಿ ವಿಶ್ವಾಸ್ ಕರ್‍ಲ್ಯಾನಿ ಅನಿ ಮಾನ್ಲ್ಯಾನಿ. ಅಧ್ಯಾಯವನ್ನು ನೋಡಿ |
ಪ್ರಿಯ ಸ್ನೇಹಿತರೇ, ನಾವೆಲ್ಲರೂ ಹಂಚಿಕೊಳ್ಳುವ ರಕ್ಷಣೆಯನ್ನು ಕುರಿತು ನಿಮಗೆ ಬರೆಯಬೇಕೆಂದು ನಾನು ಬಹಳವಾಗಿ ಇಚ್ಛಿಸಿದ್ದೆನು. ಆದರೆ ಮತ್ತೊಂದು ವಿಷಯದ ಬಗ್ಗೆ ನಾನು ನಿಮಗೆ ಬರೆಯುವುದು ಅಗತ್ಯವೆನಿಸಿತು. ದೇವರು ತನ್ನ ಪರಿಶುದ್ಧ ಜನರಿಗೆ ದಯಪಾಲಿಸಿರುವ ನಂಬಿಕೆಗಾಗಿ ನೀವು ಪ್ರಯಾಸಪಟ್ಟು ಹೋರಾಡುವಂತೆ ನಾನು ನಿಮ್ಮನ್ನು ಪ್ರೋತ್ಸಾಹಿಸಲು ಇಚ್ಛಿಸುತ್ತೇನೆ. ದೇವರು ನಮಗೆ ಈ ನಂಬಿಕೆಯನ್ನು ಒಂದೇಸಲ ದಯಪಾಲಿಸಿದನು. ಅದು ಸರ್ವಕಾಲಗಳಲ್ಲಿಯೂ ಒಳ್ಳೆಯದಾಗಿದೆ.