ಅಪೊಸ್ತಲರ ಕೃತ್ಯಗಳು 7:11 - ಪರಿಶುದ್ದ ಬೈಬಲ್11 ಆದರೆ ಈಜಿಪ್ಟಿನಲ್ಲಿ ಮತ್ತು ಕಾನಾನಿನಲ್ಲಿ ಬರಗಾಲ ಉಂಟಾಯಿತು. ಆಹಾರವಿಲ್ಲದೆ ನಮ್ಮ ಪಿತೃಗಳಿಗೆ ಬಹಳ ಕಷ್ಟವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈಜಿಪ್ಟ್ ಹಾಗೂ ಕಾನಾನ್ ದೇಶಗಳಲ್ಲಿ ಕ್ಷಾಮ ತಲೆದೋರಿದಾಗ ಜನರು ಕಷ್ಟಸಂಕಟಗಳಿಗೆ ಒಳಗಾದರು. ನಮ್ಮ ಪೂರ್ವಜರು ಆಹಾರವಿಲ್ಲದೆ ಅವಸ್ಥೆಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆಗ ಐಗುಪ್ತ ಕಾನಾನ್‍ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ನಮ್ಮ ಪಿತೃಗಳಿಗೆ ಕಾಳುಕಡ್ಡಿ ಸಿಕ್ಕಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ಆ ಕಾಲದಲ್ಲಿ ಈಜಿಪ್ಟ್ ಮತ್ತು ಕಾನಾನ್ ದೇಶಗಳ ಎಲ್ಲಾ ಕಡೆಗಳಲ್ಲಿಯೂ ಕ್ಷಾಮ ಬಂದು ಜನರು ಬಹಳ ಬಾಧೆಪಟ್ಟರು, ನಮ್ಮ ಪಿತೃಗಳಿಗೆ ಆಹಾರ ದೊರೆಯದೇ ಹೋಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತನ್ನಾ ತ್ಯಾ ಇಜಿಪ್ತ್ ಅನಿ ಕಾನಾನ್ ದೆಶಾತಾತ್ನಿ, ಲೈ ಬರ್ಗಾಲ್ ಯೆವ್ನ್ ಅಮ್ಚ್ಯಾ ಪುರ್ವಜಾಕ್ನಿಬಿ ಜೆವಾನ್ ಖಾನ್ ಗಾವ್ಕ್ ನಾ . ಅಧ್ಯಾಯವನ್ನು ನೋಡಿ |