Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:16 - ಪರಿಶುದ್ದ ಬೈಬಲ್‌

16 ಬಳಿಕ ಅವರ ದೇಹಗಳನ್ನು ಶೇಕೆಮಿಗೆ ಸಾಗಿಸಲಾಯಿತು. ಅಲ್ಲಿಯ ಸಮಾಧಿಯೊಂದರಲ್ಲಿ ಅವರನ್ನು ಹೂಳಲಾಯಿತು. (ಅಬ್ರಹಾಮನು ಹಾಮೋರನ ಗಂಡುಮಕ್ಕಳಿಂದ ಕೊಂಡುಕೊಂಡದ್ದು ಈ ಸಮಾಧಿಯನ್ನೇ. ಅವನು ಅವರಿಗೆ ಬೆಳ್ಳಿಯನ್ನು ಕ್ರಯವಾಗಿ ಕೊಟ್ಟಿದ್ದನು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಯನ್ನು ಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರ ಅವಶೇಷಗಳನ್ನು ಮರಳಿ ಶೇಕೆಮಿಗೆ ಕೊಂಡೊಯ್ಯಲಾಯಿತು. ಅಲ್ಲಿ ಹಾಮೋರ್ ಎಂಬವನ ಮಕ್ಕಳಿಂದ ಅಬ್ರಹಾಮನು ಕ್ರಯಕ್ಕೆ ಕೊಂಡುಕೊಂಡಿದ್ದ ಸಮಾಧಿಯಲ್ಲಿ ಹೂಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರನ್ನು ಶೇಕೆವಿುಗೆ ತೆಗೆದುಕೊಂಡು ಹೋಗಿ ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಬೆಳ್ಳಿಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರ ಮೃತಶರೀರವನ್ನು ಶೇಕೆಮಿಗೆ ತಂದರು. ಅಲ್ಲಿ ಹಮೋರನ ಮಕ್ಕಳಿಂದ ಅಬ್ರಹಾಮನು ಕ್ರಯಕೊಟ್ಟು ಕೊಂಡುಕೊಂಡಿದ್ದ ಸಮಾಧಿಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾನಾ ತೆಂಚಿ ಹಾಡ್ಡಾ ಶೆಕೆಮಾಕ್ ನ್ಹೆವ್ನ್ ಹೊಲೆ,ಅನಿ ಅಬ್ರಾಹಾಮಾನ್ ಹೆಮೊರಾಚ್ಯಾ ಪೊರಾಕ್ನಿ ಚಾಂದಿಚೆ ಪೈಸೆ ದಿವ್ನ್ ಇಕಾತ್ ಘೆಟಲ್ಯಾ ಸಮಾದಿತ್ ತೆಂಕಾ ಮಾಟಿ ದಿವ್ನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:16
11 ತಿಳಿವುಗಳ ಹೋಲಿಕೆ  

ಇಸ್ರೇಲರು ಈಜಿಪ್ಟಿನಿಂದ ಹೊರಟಾಗ ತಮ್ಮೊಂದಿಗೆ ಯೋಸೇಫನ ಎಲುಬುಗಳನ್ನೂ ತೆಗೆದುಕೊಂಡು ಬಂದಿದ್ದರು. ಅವರು ಯೋಸೇಫನ ಎಲುಬುಗಳನ್ನು ಶೆಕೆಮಿನಲ್ಲಿ ಹೂಳಿಟ್ಟರು. ಯಾಕೋಬನು ಶೆಕೆಮನ ತಂದೆಯಾದ ಹಮೋರನ ಗಂಡುಮಕ್ಕಳಿಂದ ನೂರು ಬೆಳ್ಳಿನಾಣ್ಯಗಳನ್ನು ಕೊಟ್ಟು ಕೊಂಡುಕೊಂಡ ಶೆಕೆಮ್ ಊರಿನ ಹೊಲದಲ್ಲಿ ಆ ಎಲುಬುಗಳನ್ನು ಹೂಳಿಟ್ಟರು. ಈ ಭೂಮಿಯ ಯೋಸೇಫನ ಮಕ್ಕಳದಾಗಿತ್ತು.


ಅಬ್ರಹಾಮನು ಎಫ್ರೋನನ ಮಾತಿಗೆ ಒಪ್ಪಿದನು. ಅಬ್ರಹಾಮನು ಆ ಸ್ಥಳಕ್ಕಾಗಿ ನಾನೂರು ಬೆಳ್ಳಿ ರೂಪಾಯಿಗಳನ್ನು ಹಿತ್ತಿಯರ ಎದುರಿನಲ್ಲಿ ಹೇಳಿದ ಎಫ್ರೋನನಿಗೆ ಎಣಿಸಿಕೊಟ್ಟನು.


ಮೋಶೆಯು ತನ್ನೊಡನೆ ಯೋಸೇಫನ ಎಲುಬುಗಳನ್ನು ತೆಗೆದುಕೊಂಡು ಹೋದನು. (ಯೋಸೇಫನು ಸಾಯುವ ಮೊದಲು, ತನಗಾಗಿ ಈ ಕಾರ್ಯವನ್ನು ಮಾಡುವಂತೆ ಇಸ್ರೇಲನ ಪುತ್ರರಿಂದ ಪ್ರಮಾಣ ಮಾಡಿಸಿದ್ದನು. ಯೋಸೇಫನು ಅವರಿಗೆ, “ಯೆಹೋವನು ನಿಮ್ಮನ್ನು ರಕ್ಷಿಸುವಾಗ, ಈಜಿಪ್ಟಿನಿಂದ ನನ್ನ ಎಲುಬುಗಳನ್ನು ತೆಗೆದುಕೊಂಡು ಹೋಗಲು ಮರೆಯಬೇಡಿ” ಎಂದು ಹೇಳಿದ್ದನು.)


ಅವರು ಅವನ ಶರೀರವನ್ನು ಕಾನಾನ್ ದೇಶಕ್ಕೆ ತೆಗೆದುಕೊಂಡು ಹೋಗಿ ಮಕ್ಪೇಲದಲ್ಲಿದ್ದ ಗವಿಯಲ್ಲಿ ಸಮಾಧಿ ಮಾಡಿದರು. ಮಮ್ರೆಯ ಬಯಲಿನಲ್ಲಿದ್ದ ಈ ಗವಿಯನ್ನು ಅಬ್ರಹಾಮನು ಹಿತ್ತಿಯನಾದ ಎಫ್ರೋನನಿಂದ ಸಮಾಧಿಯ ಸ್ಥಳಕ್ಕಾಗಿ ಕೊಂಡುಕೊಂಡಿದ್ದನು.


ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.


ಅವರಿಗೆ, “ನಾನು ಈ ನಾಡಿನವನಲ್ಲ. ನಾನು ಇಲ್ಲಿ ಕೇವಲ ಪ್ರವಾಸಿಗನಷ್ಟೇ. ಆದ್ದರಿಂದ ನನ್ನ ಹೆಂಡತಿಯನ್ನು ಸಮಾಧಿಮಾಡಲು ನನಗೆ ಸ್ವಲ್ಪ ಸ್ಥಳ ಬೇಕು” ಎಂದು ಹೇಳಿದನು.


ನನ್ನ ಪೂರ್ವಿಕರನ್ನು ಸಮಾಧಿ ಮಾಡಿದ ಸ್ಥಳದಲ್ಲಿಯೇ ನನ್ನನ್ನು ಸಮಾಧಿ ಮಾಡು. ನನ್ನನ್ನು ಈಜಿಪ್ಟಿನಿಂದ ತೆಗೆದುಕೊಂಡು ಹೋಗಿ ನಮ್ಮ ಕುಟುಂಬದವರ ಸ್ಮಶಾನದಲ್ಲಿ ಸಮಾಧಿ ಮಾಡು” ಎಂದು ಹೇಳಿದನು. ಯೋಸೇಫನು, “ನೀನು ಹೇಳಿದಂತೆಯೇ ಮಾಡುತ್ತೇನೆ” ಎಂದು ಪ್ರಮಾಣ ಮಾಡಿದನು.


ಹೀಗೆ ಯಾಕೋಬನ ಗಂಡುಮಕ್ಕಳು ತಮ್ಮ ತಂದೆಯ ಆಜ್ಞೆಯಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು