ಅಪೊಸ್ತಲರ ಕೃತ್ಯಗಳು 7:2 - ಪರಿಶುದ್ದ ಬೈಬಲ್2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಸ್ತಪೆನಾಕ್ ಮಾಜ್ಯಾ ಭಾವಾನು ಅನಿ ಬಾಬಾನು, ಮಿಯಾ ಸಾಂಗ್ತಲೆ ಆಯ್ಕಾ, ಅಮ್ಚೊ ಪುರ್ವಜ್ಯಾಂಚೊ ಬಾಬಾ ಅಬ್ರಾಹಾಮ್ ಹಾರಾನಿತ್ ರ್‍ಹಾವ್ಚ್ಯಾ ಅದ್ದಿ ಮೆಸೆಪೊತಾಮ್ಯಾತ್ ಹೊತ್ತೊ, ದೆವಾನ್ ತೆಕಾ ಅಪ್ಲ್ಯಾ ಮಹಿಮಾನ್ ದಾಕ್ವುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಆಗ ಯೆಹೋಶುವನು ಅವರೆಲ್ಲರಿಗೆ, “ಇಸ್ರೇಲಿನ ದೇವರಾದ ಯೆಹೋವನು ನಿಮಗೆ ಹೇಳುವುದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ: ‘ಬಹಳ ಹಿಂದಿನ ಕಾಲದಲ್ಲಿ ನಿಮ್ಮ ಪೂರ್ವಿಕರು ಯೂಫ್ರೇಟೀಸ್ ನದಿಯ ಆಚೆಯ ದಡದಲ್ಲಿದ್ದರು, ನಾನು ಅಬ್ರಹಾಮ್ ಮತ್ತು ನಾಹೋರ್ ಎಂಬವರ ತಂದೆಯಾದ “ತೆರಹ” ಮೊದಲಾದ ಜನರ ಬಗ್ಗೆ ಮಾತನಾಡುತ್ತಿದ್ದೇನೆ. ಆ ಸಮಯದಲ್ಲಿ ಅವರು ಬೇರೆ ದೇವರುಗಳನ್ನು ಪೂಜಿಸುತ್ತಿದ್ದರು.
ಅಬ್ರಾಮನು ಹಾರಾನ್ ಪಟ್ಟಣವನ್ನು ಬಿಟ್ಟು ಒಬ್ಬಂಟಿಗನಾಗಿ ಹೋಗಲಿಲ್ಲ. ಅಬ್ರಾಮನು ತನ್ನ ಹೆಂಡತಿಯಾದ ಸಾರಯಳನ್ನೂ ತನ್ನ ತಮ್ಮನ ಮಗನಾದ ಲೋಟನನ್ನೂ ತನ್ನೊಂದಿಗೆ ಕರೆದುಕೊಂಡು ಹೋದನು. ಹಾರಾನ್ ಪಟ್ಟಣದಲ್ಲಿ ತಮಗಿದ್ದ ಸ್ವತ್ತುಗಳನ್ನೆಲ್ಲ ಅವರು ತೆಗೆದುಕೊಂಡು ಹೋದರು. ಅಬ್ರಾಮನು ಹಾರಾನ್ ಪಟ್ಟಣದಲ್ಲಿ ಹೊಂದಿದ್ದ ಸೇವಕರು ಸಹ ಅವನೊಡನೆ ಹೋದರು. ಅಬ್ರಾಮನು ಮತ್ತು ಅವನ ಸಂಗಡಿಗರು ಹಾರಾನ್ ಪಟ್ಟಣವನ್ನು ಬಿಟ್ಟು ಕಾನಾನ್ ದೇಶಕ್ಕೆ ಪ್ರಯಾಣಮಾಡಿದರು.